ಹಳ್ಳಿಗಳಲ್ಲಿ ಕೋವಿಡ್ ತಡೆಗೆ ಜಾಗೃತಿ ವಹಿಸಿ

ಅಧಿಕಾರಿಗಳು ಜಾಗೃತರಾಗಿ ಕಾರ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಮುಗಿಲನ್‌ ಸೂಚನೆ

Team Udayavani, Apr 29, 2021, 7:51 PM IST

iuyiyuiyu

ಕಾರವಾರ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ತಡೆಯಲು ಅಧಿಕಾರಿಗಳು ಜಾಗೃತರಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚನೆ ನೀಡಿದರು.

ಡಿಸಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ತಾಲೂಕು ಮಟ್ಟದ ಅಧಿಕಾರಿ ಮತ್ತು ವೈದ್ಯಾಧಿಕಾರಿಗಳೊಂದಿಗೆ ಕೋವಿಡ್‌ -19 ತಡೆಗಟ್ಟುವ ಕುರಿತು ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಯಿಂದ ಗ್ರಾಮಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಜನ ಮರಳುತ್ತಿದ್ದು, ಹೀಗೆ ಬಂದಂತಹ ವ್ಯಕ್ತಿಗಳ ಅಂಕಿ ಸಂಖ್ಯೆಗಳ ಮಾಹಿತಿಯನ್ನು ಇಡುವುದರೊಂದಿಗೆ ಅವರ ಬಗ್ಗೆ ನಿಗಾವಹಿಸಬೇಕು. ಹೀಗೆ ಬಂದವರಲ್ಲಿ ಉಳಿದುಕೊಳ್ಳಲು ವ್ಯವಸ್ಥೆಗೆ ಸಮಸ್ಯೆ ಆಗಿದೆ ಅನ್ನುವುದು ಕಂಡು ಬಂದರೆ ಸ್ಪಂದಿಸಿ, ಕೋವಿಡ್‌ ತಪಾಸಣೆಗೊಳಪಡಿಸಬೇಕು. ಒಂದೊಮ್ಮೆ ಲಕ್ಷಣಗಳು ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲು ಕ್ರಮವಹಿಸಬೇಕು. ಯಾವ ಸ್ಥಳದಲ್ಲಿ ಯಾವ ರೀತಿಯ ಸನ್ನಿವೇಶ ಇದೆ ಎಂಬುದನ್ನು ಗಮನಿಸಿ ಎಂದರು.

ಪ್ರತಿ ಗ್ರಾಮದಲ್ಲೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಹೊರಗಡೆಯಿಂದ ಬಂದವರು ಕ್ವಾರಂಟೈನ್‌ ಆಗುವಂತೆ, ಯಾರೂ ಹೊರಗಡೆ ಓಡಾಡದಂತೆ ಮತ್ತು ಕೊರೊನಾ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಗ್ರಾಪಂ ಮಟ್ಟದಲ್ಲಿ ರಚಿಸಲಾದ ಕೋವಿಡ್‌ ಟಾಸ್ಕ್ ಫೋರ್ಸ್‌ ಸಮಿತಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕೊರೊನಾ ಹೆಲ್ಪ್ಲೈನ್‌ ಬಗ್ಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕು ಹಾಗೂ ಜಿಲ್ಲಾ ಮಟ್ಟದ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದ್ದು, ಎಲ್ಲ ಹೆಲ್ಪ್ಲೈನ್‌ಗಳು 24/7 ಕಾರ್ಯ ನಿರ್ವಹಿಸಬೇಕು. ತುರ್ತು ಕರೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿಭಾಯಿಸಬೇಕಲ್ಲದೇ ಅಧಿಕಾರಿಗಳು ತಮಗೆ ವಹಿಸಿದ ಕೆಲಸವನ್ನು ಲೋಪವಿಲ್ಲದಂತೆ ನಿರ್ವಹಿಸಬೇಕೆಂದು ಹೇಳಿದರು.

ಜಿಪಂ ಸಿಇಒ ಪ್ರಿಯಂಕಾ ಎಂ, ಎಸ್ಪಿ ಶಿವಪ್ರಕಾಶ ದೇವರಾಜ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್‌. ಕೆ, ಎ.ಸಿ. ವಿದ್ಯಾಶ್ರೀ ಚಂದರಗಿ, ಡಿಎಚ್‌ಒ ಡಾ| ಶರದ ನಾಯಕ, ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಲತಾ, ತಹಶೀಲ್ದಾರ್‌ ಆರ್‌.ವಿ. ಕಟ್ಟಿ, ತಾಲೂಕು ವೈದ್ಯಾಧಿಕಾರಿ ಡಾ| ಸೂರಜ್‌ ನಾಯಕ, ಕಾರವಾರ ಪೌರಾಯುಕ್ತ ಆರ್‌ .ಪಿ. ನಾಯ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.