Udayavni Special

1.30 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ


Team Udayavani, Mar 6, 2021, 7:03 PM IST

1.30 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ

ಕಾರವಾರ: ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷ ಮೀರಿದ ಅನಾರೋಗ್ಯ ಪೀಡಿತ ಜನರಿಗೆಮೂರನೇ ಹಂತದಲ್ಲಿ ಕೋವಿಡ್‌-19 ಲಸಿಕೆ ನೀಡುವಕಾರ್ಯವನ್ನು ಮಾ.1 ರಿಂದ ಪ್ರಾರಂಭವಾಗಿದ್ದು,ಸಾರ್ವಜನಿಕರು ನಿರ್ಭಿತಿಯಿಂದ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆದುಕೊಳ್ಳಬಹುದಾಗಿದೆಎಂದು ಜಿಲ್ಲಾಧಿಕಾರಿ ಮುಲ್ಲೆ$ç ಮುಹಿಲನ್‌ ಎಂ.ಪಿ. ತಿಳಿಸಿದ್ದಾರೆ.

ಡಿಸಿ ಕಚೇರಿ ಸಭಾಂಗಣದಲ್ಲಿ 3ನೇ ಹಂತದ ಲಸಿಕೆ ನೀಡುತ್ತಿರುವ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರನೇ ಹಂತದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 1.30 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ.7.8 ರಷ್ಟು ಹಿರಿಯ ನಾಗರಿಕರು ಇದ್ದಾರೆ ಎಂದರು.

ಪ್ರಥಮ ಹಾಗೂ ದ್ವಿತೀಯ ಹಂತದ ಲಸಿಕಾ ನೀಡಿಕೆ ಜಿಲ್ಲೆಯಲ್ಲಿ ಯಶಸ್ವಿಗೊಳಿಸಲಾಗಿದೆ. ಮೊದಲ ಹಂತದಲ್ಲಿ 14332 ಜನರು ಹೆಸರು ನೋಂದಣಿ ಮಾಡಿಸಿದ್ದರು. ಈ ಪೈಕಿ ಮೊದಲ ಡೋಸ್‌ನ್ನು 12180ಜನರಿಗೆ ಲಸಿಕೆ ವಿತರಿಸಲಾಗಿದ್ದು, ಶೇ. 84ರಷ್ಟು ಸಾಧನೆಮಾಡಲಾಗಿದೆ. ಹಾಗೂ ಎರಡನೇ ಡೋಸ್‌ನ್ನು 8964 ಜನರು ಪಡೆದುಕೊಂಡಿದ್ದು, ಶೇ. 73.60ರಷ್ಟು ಸಾಧನೆಯಾಗಿದೆ.

ಎರಡನೇ ಹಂತದಲ್ಲಿ: ಎರಡನೇ ಹಂತದಲ್ಲಿ 5845 ಜನರು ಹೆಸರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ 4484 ಜನರು ಮೊದಲ ಡೋಸ್‌ನ್ನು ಪಡೆದಿದ್ದು, ಶೇ. 76.7ರಷ್ಟು ಸಾಧನೆಯಾಗಿದೆ. ಲಸಿಕೆಯನ್ನು ಒತ್ತಾಯ ಪೂರ್ವಕವಾಗಿ ನೀಡಲಾಗುತ್ತಿಲ್ಲ. ಹಾಗೂ ಜಿಲ್ಲೆಯಲ್ಲಿ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ ಎಂದರು. ಹೀಗಾಗಿ ಈ ಎರಡು ಹಂತದ ಲಸಿಕಾ ನೀಡಿಕೆಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು, ಲಸಿಕೆ ನೀಡಿಕೆಯಲ್ಲಿರಾಜ್ಯದಲ್ಲಿ ಮೊದಲ ಐದು ಸ್ಥಾನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯೂ ಒಂದಾಗಿದೆ. ಕೋವಿಶಿಲ್ಡ್‌ಲಸಿಕೆ ಪಡೆದುಕೊಂಡಿದ್ದರಿಂದ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ. ಸಾರ್ವಜನಿಕರುನಿರ್ಭೀತಿಯಿಂದ ಸಮೀಪದ ನಗರ ಹಾಗೂ ಗ್ರಾಮೀಣಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯಕೇಂದ್ರ, ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ತೆರಳಿ ಈಗಾಗಲೇ ಜಾರಿಯಲ್ಲಿರುವ ಮೂರನೇ ಹಂತದಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದರು.

ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಾರದ ನಾಲ್ಕು ದಿನ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಲಸಿಕೆ ನೀಡಿಕೆ ಕಾರ್ಯ ನಡೆಯಲಿದೆ. ಜಿಲ್ಲಾ ಮತ್ತು ತಾಲೂಕು ಸರಕಾರಿ ಆಸ್ಪತ್ರೆಗಳು ಹಾಗೂ ಗುರುತಿಸಲಾಗಿರುವ ಈ ಮೇಲಿನ ಐದು ಖಾಸಗಿ ಆಸ್ಪತ್ರೆಯಲ್ಲಿ ವಾರದ ಏಳು ದಿನ ಬೆಳಿಗ್ಗೆ 10 ರಿಂದ ಸಂಜೆ 4 ರವೆಗೆ ಲಸಿಕೆನೀಡಲಾಗುವುದು. ಒಂದು ಕೋವಿಶಿಲ್ಡ್‌ ಡೋಸ್‌ನಲ್ಲಿ10 ಜನರಿಗೆ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಲಸಿಕೆ ಹಾಳಾಗುವುದನ್ನು ತಡೆಯುವ ದೃಷ್ಟಿಯಿಂದ 10 ಜನರನ್ನು ಒಗ್ಗೂಡಿಸಿಕೊಂಡು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ನಾಗರಿಕರು ತಾವಾಗಿಯೇ ಕೋವಿನ್‌ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡಿಕೊಂಡುತಮಗೆ ಅನುಕೂಲವಿರುವ ಲಸಿಕಾ ಕೇಂದ್ರದಲ್ಲಿಲಸಿಕೆ ಪಡೆಯಬಹುದು. ಅಲ್ಲದೇ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯಲು ಅವಕಾಶವಿದೆ. ಸಾರ್ವಜನಿಕರು ಲಸಿಕಾ ಕೇಂದ್ರಕ್ಕೆ ಭೇಟಿ ನೀಡುವಾಗ ಆಧಾರ್‌ ಕಾರ್ಡ್‌, ವೋಟರ್‌ ಐಡಿ, ಪ್ಯಾನ್‌ ಕಾರ್ಡ್‌, ಪಾಸ್‌ಪೋರ್ಟ್‌, ಡ್ರೈವಿಂಗ್‌ ಲೈಸನ್ಸ್‌ ಅಥವಾಯಾವುದಾದರೊಂದು ಫೋಟೋ ಇರುವ ಐ.ಡಿಕಾರ್ಡ್‌ನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರದ್‌ ನಾಯಕ, ಆರ್‌ ಸಿಎಚ್‌ ಡಾ| ರಮೇಶ್‌ ರಾವ್‌ ಹಾಜರಿದ್ದರು.

ಖಾಸಗಿ ಆಸ್ಪತ್ರೆ ಗಳಲ್ಲಿ 250 ರೂ. ಮಾತ್ರ ನೀಡಿ :

ಜಿಲ್ಲೆಯಲ್ಲಿ ಲಸಿಕೆ ವಿತರಿಸಲು ಕೆಲವು ಖಾಸಗಿ ಆಸ್ಪತ್ರೆಗಳನ್ನು ಕೊವಿಡ್‌ ವ್ಯಾಕ್ಸಿನೆಷನ್‌ ಸೆಂಟರ್‌ ಮಾಡಲಾಗುತ್ತಿದೆ. ಇದಕ್ಕಾಗಿ ಶಿರಸಿಯ ಟಿಎಸ್‌ಎಸ್‌ ಆಸ್ಪತ್ರೆ, ಹೊನ್ನಾವರದ ಸೇಂಟ್‌ ಇಗ್ನೇಷಿಯಸ್‌ ಆಸ್ಪತ್ರೆ, ಕುಮಟಾದ ಕೆನರಾ ಹೆಲ್ತ್‌ ಕೇರ್‌ ಸೆಂಟರ್‌ ಹಾಗೂ ಹೈಟೇಕ್‌ ಲೈಫ್‌ ಲೈನ್‌ ಆಸ್ಪತ್ರೆ, ಕಾರವಾರದ ಅರ್ಥ್ ಮೆಡಿಕಲ್‌ ಸೆಂಟರ್‌ನವರುಲಸಿಕೆ ನೀಡಲು ಮುಂದೆ ಬಂದಿವೆ. ಸಾರ್ವಜನಿಕರು ಎಲ್ಲ ನಗರ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಹಾಗೂ ತಾಲೂಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಗುರುತಿಸಲಾಗಿರುವ ಈ ಮೇಲಿನ ಐದು ಖಾಸಗಿ ಆಸ್ಪತ್ರೆಯಲ್ಲಿ 250 ರೂ ಹಣ ನೀಡಿ ಲಸಿಕೆಪಡೆದುಕೊಳ್ಳಬಹುದು ಎಂದರು. ಲಸಿಕೆಯ ಮೊತ್ತ 150 ರೂ.ಮಾತ್ರ. ಖಾಸಗಿ ಆಸ್ಪತ್ರೆಯಲ್ಲಿ ಇಂಜಕ್ಷನ್‌ನೀಡಿದ್ದಕ್ಕೆ ಸರ್ವೀಸ್‌ ಚಾರ್ಜ ಆಗಿ 100 ರೂ.ಪಡೆಯಬಹುದು. ಅಥವಾ ಅವರು ಸಹ ಉಚಿತವಾಗಿ ಕೇವಲಕೋವಿಶೀಲ್ಡ್‌ ಡೋಜ್‌ ಮೊತ್ತ 150 ರೂ. ಮಾತ್ರ ಪಡೆಯಬಹುದು. ಅದು ಅವರಿಗೆ ಬಿಟ್ಟದ್ದು, ಆದರೆ ಸರ್ವೀಸ್‌ ಚಾರ್ಜ್‌ ಎಂದು 100 ರೂ. ಪಡೆಯಬಹುದು. ಲಸಿಕೆ ಪಡೆಯುವವರು 250 ರೂ.ಗಳಿಗಿಂತ ಹೆಚ್ಚಿನ ಮೊತ್ತ ನೀಡಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಟಾಪ್ ನ್ಯೂಸ್

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

ಚಗಬಹ್ಗದಸ಻

ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್

್ಗ್ಹಗಹಜಗ್

ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ಮೀಸಲಿಡಬೇಕು : ಡಿ.ಕೆ. ಶಿವಕುಮಾರ್

Reached out to PM Modi for additional vaccines, medicines: Mamata

ಹೆಚ್ಚುವರಿ ಕೋವಿಡ್ ಲಸಿಕೆ ಪೂರೈಸಿ :  ಮೋದಿಗೆ ದೀದಿ ಪತ್ರ

ಕಜಹಯತಹಗರ4ತ

ರಮೇಶ್ ಜಾರಕಿಹೊಳಿ ಕೋವಿಡ್ ನಿಂದ ಗುಣಮುಖ : ನಾಳೆ SIT ವಿಚಾರಣೆಗೆ ಹಾಜರಾಗುವುದು ಡೌಟ್!

hfghfxc

ಕೋವಿಡ್ ಹೆಚ್ಚಳ ಹಿನ್ನೆಲೆ : ನಾಳೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ

ghfgdgste

‘ಮಠ’ ನಿರ್ದೇಶಕನಿಗೆ ಕೋವಿಡ್ ದೃಢ : ಸರ್ಕಾರದ ವಿರುದ್ಧ ‘ಗುರ್’ ಎಂದ ಗುರು ಪ್ರಸಾದ್  ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮರೆಯಾದ ಮಹಾಬಲ…: ಯಕ್ಷಗಾನದ ಪೌರಾಣಿಕ ಆಖ್ಯಾನ ರಚಿಸಿಕೊಡುವ ಅಪರೂಪದ ಸಾಹಿತಿ

ಮರೆಯಾದ ಮಹಾಬಲ…: ಯಕ್ಷಗಾನದ ಪೌರಾಣಿಕ ಆಖ್ಯಾನ ರಚಿಸಿಕೊಡುವ ಅಪರೂಪದ ಸಾಹಿತಿ

gfhdfeeeeeete

ನಾಗಬನಕ್ಕೆ ಆವರಣ ಗೋಡೆ ನಿರ್ಮಾಣ

gjfj

ಕಲ್ಲು ಸಂಕ ಸಂರಕ್ಷಣೆ ಕಾಮಗಾರಿಗೆ ಚಾಲನೆ

fdghdghr

ಪಂಜರದಲ್ಲೇ ಮೃತಪಟ್ಟ ಅಪರೂಪದ ಆಮೆ ಮರಿಗಳು

xdfbdsfsd

ಅಧಿಕಾರಿಗಳ ವಿರುದ್ಧ  ಶಾಸಕಿ ರೂಪಾಲಿ ಗರಂ

MUST WATCH

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

ಹೊಸ ಸೇರ್ಪಡೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

covid: Flight passenger numbers dwindle

ಕೋವಿಡ್: ವಿಮಾನ ಪ್ರಯಾಣಿಕರ ಸಂಖ್ಯೆ ಕ್ಷೀಣ

Ragi Malt Recipe For Weight Loss

ತೂಕ ಇಳಿಸಿಕೊಳ್ಳಲು ರಾಗಿ ಮಾಲ್ಟ್ ಬೆಸ್ಟ್..!

adBVC

ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಪ್ರಶಂಸಾ ಪತ್ರ

ಚಗಬಹ್ಗದಸ಻

ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.