‘ಮೊಸಳೆ ಪಾರ್ಕ್‌ ನಿರ್ಮಾಣ ಅವೈಜ್ಞಾನಿಕ’

ಶಾಸಕರು-ಪ್ರವಾಸೋದ್ಯಮ ಇಲಾಖೆ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧ: ಸುನೀಲ್‌ ಹೆಗಡೆ

Team Udayavani, Sep 5, 2022, 4:22 PM IST

16

ದಾಂಡೇಲಿ: ನಗರದಲ್ಲಿ ಈವರೆಗೆ ಮೊಸಳೆಗಳಿಂದಾದ ಜೀವ ಹಾನಿಗೆ ಶಾಸಕ ಆರ್‌.ವಿ. ದೇಶಪಾಂಡೆಯವರೆ ನೇರ ಹೊಣೆ ಎಂದು ಮಾಜಿ ಶಾಸಕ ಸುನೀಲ್‌ ಹೆಗಡೆ ಆರೋಪಿಸಿದ್ದಾರೆ.

ಅವರು ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತನ್ನ ಪ್ರಚಾರಕ್ಕಾಗಿ ಮತ್ತು ಹಿಂಬಾಲಕರಿಗೆ ಗುತ್ತಿಗೆ ಕೊಡುವ ಉದ್ದೇಶದಿಂದ ಅವೈಜ್ಞಾನಿಕ ಮೊಸಳೆ ಪಾರ್ಕ್‌ ಮಾಡಿದ ನಂತರವೆ ಭಯದ ವಾತಾವರಣ ನಿರ್ಮಾಣವಾಗಿದೆ ಮತ್ತು ಮಾನವರ ಮೇಲೆ ಮೊಸಳೆಗಳು ದಾಳಿ ಮಾಡುವಂತಾಗಿದೆ ಎಂದೂ ದೂರಿದರು.

ಅನುಭವಿ ಶಾಸಕರೆಂದು ಕರೆಸಿಕೊಳ್ಳುವ ದೇಶಪಾಂಡೆಯವರು ನದಿಗೆ ಆವರಣ ಗೋಡೆ ನಿರ್ಮಿಸುವಂತೆ ನಿರ್ದೇಶನ ನೀಡುತ್ತಾರೆ. ಆದರೆ ಮೊಸಳೆಗಳು ಮೊಟ್ಟೆಯಿಡಲು ನದಿ ದಂಡೆಯನ್ನೆ ಬಯಸುತ್ತವೆ ಎನ್ನುವ ಅರಿವು ಅವರಿಗಿಲ್ಲವಾಗಿದೆ. ಮೊಸಳೆಗಳಿಗೆ ಆಹಾರದ ಅಭದ್ರತೆ ಕಾಡತೊಡಗಿದೆ. ಹಾಗಾಗಿ ಇಂಥ ಘಟನೆಗಳು ಸಂಭವಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಮೊಸಳೆಗಳಿಂದ ದುರ್ಘ‌ಟನೆಗಳು ಸಂಭವಿಸಿದಲ್ಲಿ ಶಾಸಕರು ಹಾಗೂ ಪ್ರವಾಸೋದ್ಯಮ ಇಲಾಖೆ ವಿರುದ್ಧ ಕಾನೂನು ಹೋರಾಟ ಕೈಗೊಳ್ಳಲಾಗುವುದು ಎಂದರು.

ಶ್ರೇಯಸ್‌, ಶ್ರೀನಿಧಿ ಕಾರ್ಖಾನೆ ಸ್ಥಗಿತಗೊಂಡಿದೆ. ಅಲ್ಲಿಯ ಕಾರ್ಮಿಕನೊಬ್ಬ ಮೃತಪಟ್ಟ ಸಂದರ್ಭದಲ್ಲಿ ಕ್ಷೇತ್ರದಲ್ಲಿದ್ದೂ ಆತನ ಕುಟುಂಬಕ್ಕೆ ಸಾಂತ್ವನ ಹೇಳಲೂ ಶಾಸಕರಿಗೆ ಬರದಿರುವುದು ನೋವಿನ ಸಂಗತಿ. ಶ್ರೇಯಸ್‌ -ಶ್ರೀನಿಧಿ ಕಾರ್ಖಾನೆ ಕಾರ್ಮಿಕರ ಸಮಸ್ಯೆ ಬರಲಿರುವ ದೀಪಾವಳಿಯೊಳಗೆ ಬಗೆಹರಿಸದಿದ್ದಲ್ಲಿ ಹೋರಾಟ ಅನಿವಾರ್ಯ ಎಂದ ಸುನೀಲ ಹೆಗಡೆ, ಶಾಸಕ ಆರ್‌.ವಿ. ದೇಶಪಾಂಡೆಯವರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ರವಿ ಗಾಂವಕರ್‌, ಸಂಜೀವ್‌ ಜಾಧವ್‌, ಪ್ರಧಾನ ಕಾರ್ಯದರ್ಶಿ ಗುರು ಮಠಪತಿ, ಗಿರೀಶ ಟೋಸೂರ, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಶಿಕಾರಿಪುರ, ಮುಖಂಡರಾದ ಶಾರದಾ ಪರಶುರಾಮ, ರಫೀಕ್‌ ಹುದ್ದಾರ್‌, ಟಿ.ಎಸ್‌. ಬಾಲಮಣಿ, ಎಂ.ಎಸ್‌. ನಾಯ್ಕ, ಮಂಜುನಾಥ ಯರಗೇರಿ, ಶಶಿ ಓಶಿಮಠ, ರಿಯಾಜ್‌, ಸಂತೋಷ್‌ ಬುಲುಬುಲೆ, ಸಾವಿತ್ರಿ ರಾಯಭಾಗ್‌, ಅಶ್ವಿ‌ನಿ ಬಾಲಮಣಿ, ನಗರಸಭಾ ಸದಸ್ಯರಾದ ನರೇಂದ್ರ ಚೌವ್ಹಾಣ್‌, ಬುದ್ಧಿವಂತಗೌಡ ಪಾಟೀಲ, ದಶರಥ ಬಂಡಿವಡ್ಡರ, ರಮಾ ರವೀಂದ್ರ, ಶೋಭಾ ಜಾಧವ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.