ದಾಂಡೇಲಿ: ರಾಜ್ಯದ ಮೊಟ್ಟ ಮೊದಲ ಮೊಸಳೆ ಪಾರ್ಕ್ ಲೋಕಾರ್ಪಣೆ  

Team Udayavani, Jan 30, 2022, 4:07 PM IST

Untitled-1

ದಾಂಡೇಲಿ: ದಾಂಡೇಲಿಯ ಪ್ರವಾಸೋದ್ಯಮಕ್ಕೆ ಮತ್ತೊಂದು ಗರಿ ಎಂಬಂತೆ ದಾಂಡೇಲಿ ನಗರದ ಸಮೀಪದಲ್ಲಿರುವ ಕೇರವಾಡದ ಶ್ರೀ.ದಾಂಡೇಲಪ್ಪ ದೇವಸ್ಥಾನದ ಪಕ್ಕದಲ್ಲಿ ನಿರ್ಮಾಣಗೊಂಡಿರುವ ಮೊಸಳೆ ಪಾರ್ಕಿನ ವಿದ್ಯುಕ್ತ ಲೋಕಾರ್ಪಣೆ ಕಾರ್ಯಕ್ರಮವು ಭಾನುವಾರ ನಡೆಯಿತು.

ನೂತನ ಕ್ರೊಕಡೈಲ್ ಪಾರ್ಕನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶಾಸಕ ಆರ್.ವಿ.ದೇಶಪಾಂಡೆಯವರು, ಇಷ್ಟರ ಒಳಗಡೆ ಮೊಸಳೆ ಪಾರ್ಕ್ ಕಾಮಗಾರಿ ಮುಗಿದು ಲೋಕಾರ್ಪಣೆಯಾಗಬೇಕಿತ್ತು. ಕೋವಿಡ್ ಮುಂತಾದ ಕಾರಣಗಳಿಂದ ತಡವಾಗಿದೆ. ಈ ಭಾಗದ ಪ್ರವಾಸೋದ್ಯಮಕ್ಕೆ 2.99 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣಗೊಂಡ ನೂತನ ಮೊಸಳೆ ಪಾರ್ಕ್ ಹೊಸ ಆಯಾಮವನ್ನು ನೀಡುವಂತಾಗಲಿ ಎಂದ ಅವರು ಒಂದು ಕಾಲದಲ್ಲಿ ಕಾಗದ ಕಾರ್ಖಾನೆಯೆ ಜೀವನಾಡಿಯಾಗಿದ್ದ ದಾಂಡೇಲಿಗೆ ಇದೀಗ ಪ್ರವಾಸೋದ್ಯಮ ಕ್ಷೇತ್ರವು ಜೀವನಾಡಿಯಾಗುತ್ತಿರುವುದು ಸಂತಸದ ಬೆಳವಣಿಗೆ ಎಂದರು. ನೂತನ ಮೊಸಳೆ ಪಾರ್ಕನ್ನು ಉತ್ತಮವಾಗಿ ನಿರ್ವಹಿಸಿಕೊಂಡು ಹೋಗುವುದರ ಮೂಲಕ ಪ್ರವಾಸಿಗರ ನೆಚ್ಚಿನ ತಾಣವನ್ನಾಗಿ ರೂಪಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮೊಸಳೆ ಪಾರ್ಕ್  ನಿರ್ಮಾಣದ ಗುತ್ತಿಗೆದಾರ ಜಯಶಂಕರ ಶೆಟ್ಟಿಯವರನ್ನು ಸನ್ಮಾನಿಸಲಾಯ್ತು. ಕಾಗದ ಕಾರ್ಖಾನೆಯ ಸಿ.ಎಸ್.ಆರ್ ಯೋಜನೆಯಡಿ ಹೊಲಿಗೆಯಂತ್ರ ಕೊಡಿಸಿರುವುದಕ್ಕೆ ಶಾಸಕ ಆರ್.ವಿ.ದೇಶಪಾಂಡೆಯವರನ್ನು ಸ್ಥಳೀಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರುಗಳು ಸನ್ಮಾನಿಸಿದರು.

ವೇದಿಕೆಯಲ್ಲಿ ಆಲೂರು ಗ್ರಾಮ ಪಂಚಾಯ್ತು ಅಧ್ಯಕ್ಷ ಲಕ್ಷ್ಮಣ ಜಾಧವ, ದಾಂಡೇಲಿ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಜಯಂತ್.ಎಚ್.ವಿ,  ಆಲೂರು ಗ್ರಾಮ ಪಂಚಾಯ್ತು ಉಪಾಧ್ಯಕ್ಷೆ ನೂರಜಾನ್ ನದಾಫ್, ನಗರ ಸಭೆಯ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್, ಗ್ರಾಮ ಪಂಚಾಯ್ತು ಸದಸ್ಯರುಗಳಾದ ಪ್ರಕಾಶ.ಜಿ.ಈ, ನಾಗರತ್ನಾ ನಾಯ್ಕ, ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ವಿ.ಆರ್.ಹೆಗಡೆ, ಮಾಜಿ ಜಿಲ್ಲಾ ಪಂಚಾಯ್ತು ಸದಸ್ಯ ಕೃಷ್ಣ ಪಾಟೀಲ, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಡಿ.ವೈ.ಅಮರಗೋಳಕರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಎನ್.ಹಂಚಿನಮನಿ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ಕಿಂದಳ್ಕರ್ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.

ಮೊಸಳೆ ಪಾಕ್ ಉದ್ಘಾಟನೆಯಾಗಿದ್ದರೂ ಅಗತ್ಯ ಮೂಲಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕಾಗಿದೆ. ಇನ್ನೂ ಶೌಚಾಲಯಕ್ಕೂ ನೀರಿನ ವ್ಯವಸ್ಥೆ ಇನ್ನಷ್ಟೆ ಆಗಬೇಕಾಗಿದೆ. ನಿಗಧಿತ ಕೆಲಸಕ್ಕಿಂದ ಹೆಚ್ಚುವರಿ ಮಾಡಲಾದ ಕಾಮಗಾರಿಯ ಮೊತ್ತ ಪಾವತಿಯೂ ಬಾಕಿಯಿದ್ದು, ಅದರ ಪಾವತಿಯೂ ಇನ್ನಷ್ಟೆ ಆಗಬೇಕಾಗಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.