ಸದ್ಯ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕೆಲಸ ಬಂದ್‌

Team Udayavani, May 20, 2019, 5:01 PM IST

ಕುಮಟಾ: ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಯಿಂದ ಸಮಸ್ಯೆ ಎದುರಿಸುತ್ತಿರುವ ತಾಲೂಕಿನ ತಂಡ್ರಕುಳಿ ಗ್ರಾಮಕ್ಕೆ ಶಾಸಕ ದಿನಕರ ಶೆಟ್ಟಿ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಸ್ಥಳೀಯರೊಂದಿಗೆ ಘಟನೆಯ ಸಂಪೂರ್ಣ ಮಾಹಿತಿ ಪಡೆದು ಬಳಿಕ ಮಾತನಾಡಿದ ಅವರು, ಘಟನೆ ನಡೆದ ದಿನ ನಾನು ಬೆಂಗಳೂರಿನಲ್ಲಿದ್ದೆ. ಇಲ್ಲಿನ ಸ್ಥಿತಿ ನೋಡಿದಾಗ ತೀರಾ ಬೇಸರವಾಗಿದೆ. ಜನ ಸಂಪೂರ್ಣ ಸಹಕಾರ ನೀಡಿದ್ದಾರೆ. ಆದರೆ ಸಂಪೂರ್ಣ ಅವೈಜ್ಞಾನಿಕವಾಗಿ ರಸ್ತೆಯ ಮೇಲ್ಭಾಗದಲ್ಲಿ ಧರೆ ಸಂರಕ್ಷಣೆ ಕಾಮಗಾರಿ ಮಾಡಿ ಅಲ್ಲಿಯೇ ಕೆಳಭಾಗದಲ್ಲಿ ಬಂಡೆ ಸ್ಫೋಟಿಸುವ ಕೆಲಸ ಸರಿಯಾದದ್ದಲ್ಲ. ಸ್ಫೊಧೀಟದ ಸಂದರ್ಭದಲ್ಲಿ ನೂರಾರು ಮೀಟರ್‌ ದೂರದವರೆಗೆ ಭೂಮಿ ಕಂಪಿಸುತ್ತದೆ. ಹೀಗಿರುವಾಗ ಮಣ್ಣಿನ ಗುಡ್ಡಕ್ಕೆ ಸಿಮೆಂಟ್ ಲೇಪನ ಖಂಡಿತವಾಗಿಯೂ ಸುರಕ್ಷಿತವಾಗಿ ಉಳಿಯುವುದಿಲ್ಲ. ಮತ್ತೆ ಕುಸಿತವಾಗುವುದು ಖಚಿತ. ಆದ್ದರಿಂದ ತಾಲೂಕು ಆಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರು, ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸಬೇಕು. ಅದರ ನಂತರವೇ ಇಲ್ಲಿ ಕೆಲಸ ಮಾಡಲು ಅವಕಾಶ ಕೊಡುತ್ತೇವೆ. ತಂಡ್ರಕುಳಿ ಗ್ರಾಮಸ್ಥರಿಗೆ ಹಿಂದೆ ಆದ ಹಾನಿಗೆ ಪರಿಹಾರವೂ ಕೊಟ್ಟಿಲ್ಲ. ಉಪವಿಭಾಗಾಧಿಕಾರಿಗಳು ಐಆರ್‌ಬಿಗೆ ನೋಟಿಸ್‌ ಕೊಟ್ಟರೆ ಪ್ರಯೋಜನವಿಲ್ಲ. ಈಗ ಆಗಿರುವ ಹಾನಿಗೆ ಪರಿಹಾರ ಕೊಡುವವರು ಯಾರು? ಆದ್ದರಿಂದ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಗಣೇಶ ಅಂಬಿಗ ಮಾತನಾಡಿ, ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಅಧಿಕಾರಿಗಳೊಟ್ಟಿಗೆ ತಂಡ್ರಕುಳಿ ಸಮಸ್ಯೆ ಬಗ್ಗೆ ಸಭೆ ನಡೆಸುವವರೆಗೆ ಇಲ್ಲಿ ಚತುಷ್ಪಥ ಕಾಮಗಾರಿ ಬಂದ್‌ ಮಾಡಲಾಗುವುದಾಗಿ ತಹಶೀಲ್ದಾರ್‌ ಅವರು ಭರವಸೆ ಕೊಟ್ಟಿದ್ದರು. ಆದರೆ ಐಆರ್‌ಬಿಯವರು ಬಂದು ಮತ್ತೆ ಕೆಲಸ ಆರಂಭಿಸಿದ್ದರು. ನಾವು ಪ್ರತಿಭಟಿಸಿ ಹಿಂದೆ ಕಳಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಗಜು ಪೈ, ಗಣಪಯ್ಯ ಅಂಬಿಗ, ಜಗ್ಗು ಭಟ್, ಹೇಮಂತಕುಮಾರ ಗಾಂವಕರ ಸೇರಿದಂತೆ ಇನ್ನಿತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಶಿರಸಿ: ಶಿವಮೊಗ್ಗ ಜಿಲ್ಲೆ ಶರಾವತಿ ಅಭಯಾರಣ್ಯಕ್ಕೆ ತಾಲೂಕಿನ ಹೆಬ್ರೆ, ಹುಸೂರು, ಬುಗುಡಿ ಗ್ರಾಮಗಳ ಅರಣ್ಯವಾಸಿಗಳ ಪ್ರದೇಶವನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ...

  • ಹಳಿಯಾಳ: ಅಪ್ರತೀಮ ವೀರ ಛತ್ರಪತಿ ಶಿವಾಜಿ ಮಹಾರಾಜರು ದೇಶದ ಭವಿಷ್ಯಕ್ಕಾಗಿ ಹೋರಾಡಿದ ಅಗ್ರಗಣ್ಯ ನಾಯಕರಾಗಿದ್ದು ಸರ್ವರನ್ನು ಒಂದೂಗೂಡಿಸಿಕೊಂಡು ಹೋಗುತ್ತಿದ್ದ...

  • ಕಾರವಾರ: ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಜನಸಂಖ್ಯೆ ಆಧರಿಸಿ ಶೇ.15 ರಿಂದ ಶೇ. 22.5ಗೆ ಹೆಚ್ಚಿಸಬೇಕು ಹಾಗೂ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಶೇ.3ರಿಂದ ಶೇ.7.5 ಕ್ಕೆ...

  • ಸಾಗರ: ಇಲ್ಲಿನ ಇತಿಹಾಸ ಪ್ರಸಿದ್ಧ ಹಾಗೂ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಗರದ ಮಾರಿಕಾಂಬಾ ದೇವಿಯ ಜಾತ್ರೆಯು...

  • ಕುಮಟಾ: ಕಳೆದ ಎರಡು ದಿನಗಳಿಂದ ತಾಲೂಕಿನ ಹೊಳೆಗದ್ದೆ ಟೋಲ್‌ ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೂ ಐಆರ್‌ಬಿ ಕಂಪೆನಿ ಶುಲ್ಕ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ...

ಹೊಸ ಸೇರ್ಪಡೆ