ಹುಬ್ಬಳ್ಳಿಗೆ ಆಗಮಿಸಿದ ಟಿಬೇಟಿಯನ್ ಧರ್ಮಗುರು ದಲೈಲಾಮಾ
Team Udayavani, Dec 12, 2019, 11:16 AM IST
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಿಬೇಟಿಯನ್ ಧರ್ಮಗುರು ದಲೈಲಾಮಾ ಅವರಿಗೆ ಧಾರವಾಡ ಜಿಲ್ಲಾಡಾಳಿತದಿಂದ ಸ್ವಾಗತ ಕೋರಲಾಯಿತು.
ಗುರುವಾರದಿಂದ ಡಿ.24 ರವರೆಗೆ ಮಂಡಗೋಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಲೈಲಾಮಾ ತಮ್ಮ 12 ಜನ ಧಾರ್ಮಿಕ ಅನುಚರರೊಂದಿಗೆ ಭಾಗವಹಿಸಲಿದ್ದಾರೆ.
ಗೋವಾದಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ದಲೈಲಾಮ ಅವರನ್ನು ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಡಿಸಿಪಿ ನಾಗೇಶ್.ಡಿ.ಎಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.