ಅನರ್ಹ ಪಡಿತರ ಚೀಟಿ ರದ್ದತಿಗೆ  ಕ್ರಮ ಕೈಗೊಳ್ಳಿ

Team Udayavani, Feb 11, 2021, 2:52 PM IST

DC Harish kumar

ಕಾರವಾರ: ಜಿಲ್ಲೆಯಲ್ಲಿರುವ ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆಹಚ್ಚಿ ಒಂದು ತಿಂಗಳೊಳಗೆ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಜ.27 ರಂದು ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. 2011ರ ಜನಗಣತಿ ಕುಟುಂಬಗಳಿಗೆ ಹೋಲಿಕೆ ಮಾಡಿದಾಗ ವಿತರಿಸಲಾಗಿರುವ ಪಡಿತರ ಚೀಟಿಗಳ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸರ್ಕಾರ ನಿಗದಿಪಡಿಸುವ ಮಾನದಂಡಗಳಿಗೆ ವಿರುದ್ಧವಾಗಿ ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿಗಳನ್ನು ಪಡೆದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಅಂತಹ ಅನರ್ಹ ಪಡಿತರ ಚೀಟಿಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ತಿಳಿಸಿದ್ದಾರೆ.

ಕಂದಾಯ, ವಾಣಿಜ್ಯ ತೆರಿಗೆ, ಖಜಾನೆ, ಆದಾಯ ತೆರಿಗೆ ಮತ್ತು ವೃತ್ತಿ ತೆರಿಗೆ, ಸಾರಿಗೆ ಇಲಾಖೆಗಳಿಂದ, ನಿಗಮ  ಮಂಡಳಿ, ಕಾರ್ಖಾನೆಗಳು, ನಗರಾಭಿವೃದ್ಧಿ ಮಂಡಳಿಗಳು, ಪ್ರಾಧಿಕಾರಗಳು ಹಾಗೂ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳು, ಜಿಎಸ್‌ಟಿ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಮಿತಿಗಳಿಂದ ವಿವರಗಳನ್ನು ಪಡೆದು ದತ್ತಾಂಶ ತುಲನೆ ಮಾಡಿ ಅನರ್ಹರನ್ನು ಪತ್ತೆಹಚ್ಚಿ ಕಾರ್ಡ್‌ ರದ್ದುಪಡಿಸಬೇಕು. ಪಡಿತರ ಚೀಟಿಗಾಗಿ ಜಂಟಿ ಕುಟುಂಬಗಳನ್ನು ಕೃತಕವಾಗಿ ವಿಭಜಿಸಿಕೊಂಡಿರುವುದನ್ನು ಪತ್ತೆಮಾಡಿ ವಿಲೀನಗೊಳಿಸಬೇಕು. ಮೃತರು, ಕುಟುಂಬದಿಂದ ಹೊರ ಹೋದವರ ಹೆಸರುಗಳನ್ನು ಪಡಿತರ ಚೀಟಿಯಿಂದ ತೆಗೆದು ಹಾಕಬೇಕು.

ಸರ್ಕಾರದ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ ಪಡೆದಿರುವ ಸರ್ಕಾರಿ ನೌಕರರು, ಅನರ್ಹ ನೌಕರರು, ನಿವೃತ್ತ ನೌಕರರ ಪಡಿತರ ಚೀಟಿಗಳನ್ನು ರದ್ದುಪಡಿಸಿ ಕಾನೂನು ಕ್ರಮಕೈಗೊಳ್ಳಬೇಕು. ರಾಷ್ಟೀಯ ಆಹಾರ ಭದ್ರತಾ ಕಾಯ್ದೆಯಡಿ ಗ್ರಾಮೀಣ ಪ್ರದೇಶದಲ್ಲಿ ಶೇ. 76.04 ಹಾಗೂ ಪಟ್ಟಣ ಪ್ರದೇಶಕ್ಕೆ ಶೇ. 49.36 ಫಲಾನುಭವಿಗಳಿಗೆ ಪಡಿತರ ಹಂಚಿಕೆ ನೀಡಲಾಗುತ್ತಿದ್ದು, ಆದ್ಯತಾ ಪಡಿತರ ಚೀಟಿ ಫಲಾನುಭವಿಗಳ ಸಂಖ್ಯೆಯನ್ನು ರಾಷ್ಟಿÅàಯ ಹಂಚಿಕೆ ಮಿತಿಯೊಳಗೆ ತರಬೇಕಿದೆ. ಈ ಕಾರ್ಯಕ್ಕಾಗಿ ಪ್ರತಿಯೊಬ್ಬ ಅಧಿಕಾರಿಗೆ ಗುರಿ ನಿಗದಿಪಡಿಸಬೇಕು ಎಂದರು.

ಇದನ್ನೂ ಓದಿ :ಉಳವಿ ರಥಬೀದಿ ನಿರ್ಮಾಣಕ್ಕೆ 4 ಕೋಟಿ ಬಿಡುಗಡೆ: ಆರ್.ವಿ.ದೇಶಪಾಂಡೆ

ತಹಶೀಲ್ದಾರ್‌, ಉಪವಿಭಾಗಾಧಿಕಾರಿ ಸಹಯೋಗ ದೊಂದಿಗೆ ಅನರ್ಹ ಪಡಿತರ ಚೀಟಿಗಳನ್ನು  ಪತ್ತೆಹಚ್ಚಬೇಕು. ಜೊತೆಗೆ ದೈನಂದಿನ, ಮಾಸಿಕ ಪ್ರಗತಿ ವರದಿಯನ್ನು 2021ರ ಫೆ. 1 ರಿಂದ ಪ್ರತಿದಿನ ನಮೂನೆ 8 ಮತ್ತು ನಮೂನೆ-8ಎ ರಲ್ಲಿ ಗೂಗಲ್‌ ಶೀಟ್‌ನಲ್ಲಿ ಕಟ್ಟುನಿಟ್ಟಾಗಿ ಅಪ್‌ಲೋಡ್‌ ಮಾಡಬೇಕು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.