ಅಕ್ರಮ ಮದ್ಯ ತಡೆಗೆ ಡಿಸಿ ಖಡಕ್‌ ಸೂಚನೆ


Team Udayavani, Sep 25, 2019, 12:45 PM IST

uk-tdy-1

ಕಾರವಾರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮದ್ಯದ ಅಕ್ರಮ ದಸ್ತಾನು, ಸರಬರಾಜು ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಅಬಕಾರಿ ಇಲಾಖೆಗೆ ಸೂಚಿಸಿದ್ದಾರೆ.

ಡಿಸಿ ಕಚೇರಿಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತ ಉಪ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಯಾವುದೇ ಆಮಿಷಗಳಿಗೆ ಅವಕಾಶ ನೀಡದಂತೆ ನಿಯೋಜಿತ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ತಿಳಿಸಿದರು.

ಉತ್ತರ ಕನ್ನಡ ಗಡಿ ಜಿಲ್ಲೆಯಾಗಿದ್ದರಿಂದ ಅಕ್ರಮ ಮದ್ಯದ ಸಾಗಾಟ ಅಥವಾ ದಾಸ್ತಾನುಗಳ ಬಗ್ಗೆ ವಿಶೇಷ ನಿಗಾ ವಹಿಸಬೇಕು. ಉಪ ಚುನಾವಣೆ ನಡೆಯುವ ಕ್ಷೇತ್ರವಲ್ಲದೆ ಬೇರೆ ತಾಲೂಕು ಗಳಲ್ಲಿಯೂ ಅಕ್ರಮಗಳು ನಡೆಯದಂತೆ ಕ್ರಮವಹಿಸಬೇಕಿದೆ ಎಂದ ಅವರು, ಇಲಾಖೆಯಿಂದ ತಂಡಗಳನ್ನು ರಚಿಸಿ ಅಕ್ರಮಗಳನ್ನು ತಡೆಗಟ್ಟಬೇಕು. ಅಲ್ಲದೆ, ಮತದಾನದ ದಿನ ಮತ್ತು ಮತ ಎಣಿಕೆ ದಿನ ಹೊರಡಿಸುವ ನಿಷೇಧಾಜ್ಞೆಗೆ ಕ್ರಮ ವಹಿಸುವಂತೆ ಸೂಚಿಸಿದರು.

ಅಬಕಾರಿ ಉಪಯುಕ್ತ ಮೇರುನಂದನ್‌ ಅವರು, ಉಪ ಚುನಾವಣೆ ನಿಮಿತ್ತ ಈಗಾಗಲೇ ತಂಡಗಳನ್ನು ರಚಿಸಲಾಗಿದ್ದು ಅಬಕಾರಿ ಅಕ್ರಮಗಳನ್ನು ತಡಯಲು ಕ್ರಮ ವಹಿಸಲಾಗಿದೆ. ಜಿಲ್ಲಾ ಕಂಟ್ರೋಲ್‌ ರೂಮ್‌ ಸೇರಿದಂತೆ ಯಲ್ಲಾಪುರ ವಲಯದಲ್ಲಿ ನಾಲ್ಕು ಕಂಟ್ರೋಲ್‌ ರೂಮ್‌ ಗಳನ್ನು ರಚಿಸಲಾಗಿದೆ ಹಾಗೂ ಯಲ್ಲಾಪುರ ಅಬಕಾರಿ ಉಪ ಅಧೀಕ್ಷಕರನ್ನು ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೆ, ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲು ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಹಾಗೂ ಉಪ ಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಲ್ಲಾಪುರ, ಮುಂಡಗೋಡ, ಶಿರಸಿ ತಾಲೂಕುಗಳಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಅದರಂತೆ ಜಿಲ್ಲಾ ಕಂಟ್ರೋಲ್‌ ರೂಮ್‌ ದೂ.ಸಂ: 08382-227094, ತಾಲೂಕು ಕಂಟ್ರೋಲ್‌ ರೂಮ್‌ ಯಲ್ಲಾಪುರ ವಲಯ ಅಬಕಾರಿ ನಿರೀಕ್ಷಕರ ಕಚೇರಿ 08419- 261510, ತಹಶೀಲ್ದಾರ್‌ ಕಚೇರಿ ಮುಂಡಗೋಡ 08301- 222122, ಅಬಕಾರಿ ನಿರೀಕ್ಷಕರ ಕಚೇರಿ ಶಿರಸಿ ವಲಯ 08384- 224168 ಆಗಿರುತ್ತದೆ. ಇವುಗಳ ಉಸ್ತುವಾರಿ ನೋಡಿಕೊಳ್ಳಲು ಉಲ್ಲಾಪುರ ಉಪವಿಭಾಗ ಅಬಕಾರಿ ಉಪ ನಿರೀಕ್ಷಕ ಆರ್‌.ವಿ. ತಳೇಕರ್‌ 9449597124, 9538721125 ಇವರನ್ನು ನೇಮಿಸಲಾಗಿದೆ. ಸಾರ್ವಜನಿಕರು ಅಕ್ರಮ ಮದ್ಯ ದಾಸ್ತಾನು ಅಥವಾ ಸರಬರಾಜಿನ ಬಗ್ಗೆ ಮಾಹಿತಿ ಇದ್ದಲ್ಲಿ ಅಥವಾ ದೂರುಗಳಿದ್ದಲ್ಲಿ ಈ ಕಂಟ್ರೋಲ್‌ ರೂಮ್‌ಗಳಿಗೆ ದೂರವಾಣಿಮೂಲಕ ನೀಡಬಹುದಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.