ಕಸಮುಕ್ತ ಜಿಲ್ಲೆಗೆ ನಿರ್ಧಾರ

Team Udayavani, Oct 27, 2019, 2:46 PM IST

uk-tdy-1

ಹಳಿಯಾಳ: ಗ್ರಾಮ ಪಂಚಾಯತ ಮಟ್ಟದಿಂದ ಜಿಲ್ಲಾ ಕೇಂದ್ರದ ವರೆಗೂ ಕಸಮುಕ್ತವನ್ನಾಗಿ ಮಾಡುವ ಗುರಿಯನ್ನು ಜಿಲ್ಲಾ ಪಂಚಾಯತ ಹೊಂದಿದ್ದು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಪಂ ಸಿಒಓ ಮೊಹಮ್ಮದ ರೋಷನ್‌ ಹೇಳಿದರು.

ಪಟ್ಟಣದ ಮಿನಿವಿಧಾನಸೌಧದ ಸಭಾಭವನದಲ್ಲಿ ಜಿಪಂ ಕಾರವಾರ ಹಾಗೂ ಹಳಿಯಾಳ ತಾಲೂಕ ಪಂಚಾಯತನಿಂದ ಆಯೋಜಿಸಿದ್ದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳ ಸಮಾಲೋಚನೆ-ಚಿಂತನಮಂಥನ ವಿಶೇಷ ಸಭೆಗೆ ಚಾಲನೆ ನೀಡಿ ಮಾತನಾಡಿದರು.

ಆಡಳಿತಾತ್ಮಕ ವಿಷಯದಲ್ಲಿ ಏನಾದರು ತೊಂದರೆ ಇದ್ದರೆ ಅವುಗಳನ್ನು ಅಧಿಕಾರಿಗಳ ಸಮಕ್ಷಮದಲ್ಲಿ ಬಗೆಹರಿಸುವ ವಿಶೇಷ ಸಭೆಯು ಇದಾಗಿದೆ ಎಂದ ಸಿಇಓ ಅವರು ಪ್ಲಾಸ್ಟಿಕ್‌ ನಿಷೇಧ ಹಾಗೂ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ಸ್ವಚ್ಚ ಭಾರತದ ಕಲ್ಪನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಗಂಭೀರ ಚಿಂತನೆ ನಡೆಸಲಾಗಿದ್ದು ಗ್ರಾಮೀಣ ಮಟ್ಟದಿಂದ ಹಿಡಿದು ಎಲ್ಲರ ಸಹಕಾರ ಅವಶ್ಯಕವಾಗಿದೆ ಎಂದರು.

ಭಾಗವಹಿಸಿದ್ದ ಜಿಪಂ, ತಾಪಂ ಸದಸ್ಯರು, ಗ್ರಾಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಪಂಚಾಯತಿಯಲ್ಲಿ ಯಾವ ರೀತಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಬೇಕು. ಹಸಿಕಸ ಮತ್ತು ಒಣಕಸಗಳ ಘಟಕಗಳ ಸ್ಥಾಪನೆ ಕುರಿತು, ರಸ್ತೆಗಳ ಅಗಲೀಕರಣ, ವಿದ್ಯುತ್‌, ಕುಡಿಯುವ ನೀರಿನ ಸಮಸ್ಯೆಗಳು, ಶಾಲೆಗಳ ಕಟ್ಟಡಗಳು ಭಾರಿ ಮಳೆಯಿಂದ ಹಾನಿಯಾಗಿದ್ದು ಇವುಗಳನ್ನು ಸರಿ ಪಡಿಸುವುದು, ಗ್ರಾಮೀಣ ಮಕ್ಕಳಿಗಿರುವ ಬಸ್ಸಿನ ವ್ಯವಸ್ಥೆ ಸರಿಪಡಿಸುವ ಬಗ್ಗೆ ಚರ್ಚೆಗಳು ನಡೆದವು.

ಇನ್ನೂ ರೈತರು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ಪ್ರತಿ ವರ್ಷ ಹಾನಿ ಮಾಡುತ್ತಾ ಬರುತ್ತಿದ್ದು ಇವುಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕೆಲವೊಂದು ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿ ಕೊರತೆ ಕುರಿತು ಸು ದೀರ್ಘ‌ ಚರ್ಚೆಗಳು ನಡೆದು ಮುಂದಿನ ದಿನಗಳಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ವಿಎಂ ಹೆಗಡೆ, ಜಿಪಂ ಎಸ್‌ಬಿಎಮ್‌ ನೋಡಲ್‌ ಅಧಿಕಾರಿ ಸೂರ್ಯನಾರಾಯಣ ಭಟ್‌, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ, ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ಜಿಪಂ ಸದಸ್ಯರಾದ ಕೃಷ್ಣಾ ಪಾಟೀಲ್‌, ಲಕ್ಷ್ಮೀ ಕೊರ್ವೆಕರ, ಮಹೇಶ್ರಿ ಮಿಶ್ಯಾಳೆ, ತಾಪಂ ಅಧಿಕಾರಿ ಪ್ರವೀಣಕುಮಾರ ಸಾಲಿ, ಡಾ| ಮಹೇಶ ಕುರಿಯವರ, ಪಿಡಿಓಗಳು ಮೊದಲಾದವರು ಇದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.