ರಾಷ್ಟ್ರೀಯ ವಿಪತ್ತೆಂದು ಘೋಷಿಸಿ

Team Udayavani, Sep 16, 2019, 12:22 PM IST

uk-tdy-1

ಹಳಿಯಾಳ: ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ ಶಾಂತಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಳಿಯಾಳ: ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹದ ಹಾನಿಗೆ ಒಳಗಾಗಿ 8 ಲಕ್ಷಕ್ಕೂ ಅಧಿಕ ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದ್ದು, 7 ಲಕ್ಷಕ್ಕೂ ಹೆಚ್ಚು ಜನರು ಇದರಿಂದ ನಿರಾಶ್ರಿತರಾಗಿರುವುದರಿಂದ ಈ ಭೀಕರ ಪ್ರವಾಹವನ್ನು ಕೇಂದ್ರ ಸರ್ಕಾರ ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಆಗ್ರಹಿಸಿದ್ದಾರೆ.

ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನಗಳಲ್ಲೇ ಕಾಣದ ಭೀಕರ ಜಲಪ್ರವಾಹದಿಂದ 22 ಜಿಲ್ಲೆಗಳಲ್ಲಿ 52 ಸಾವಿರ ಕೋಟಿಯಷ್ಟು ಹಾನಿಯಾಗಿದೆ. 2.5 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿಯ ಕಬ್ಬು ಬೆಳೆ ನಾಶವಾಗಿದೆ. ಕಾರಣ ಈ ಬಗ್ಗೆ ರಾಜ್ಯದ ಎಲ್ಲ ಸಂಸದರು ಒಗ್ಗೂಡಿ ನಿಯೋಗದೊಂದಿಗೆ ಪ್ರಧಾನಮಂತ್ರಿ ಮೋದಿಯವರ ಬಳಿಗೆ ತೆರಳಿ ರಾಷ್ಟ್ರೀಯ ವಿಪತ್ತು ಘೊಷಣೆ ಹಕ್ಕೊತ್ತಾಯ ಮಂಡಿಸಲಿ ಎಂದು ಕರೆ ನೀಡಿದರು.

ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ನೆರೆ ಪರಿಹಾರಕ್ಕಾಗಿ ಹಣ ಬಿಡುಗಡೆಯಾಗಿಲ್ಲ. ರಾಜ್ಯದ ಸಂಸದರು ಪ್ರಧಾನಿ ಮೋದಿಯವರಲ್ಲಿ ನೆರೆ ಪರಿಹಾರಕ್ಕಾಗಿ ಆಗ್ರಹಿಸಲು ಹೆದರುತ್ತಿದ್ದಾರೆ. ಇವರು ಜನರ ಗುಲಾಮರಲ್ಲ ಹೊರತು ಮೋದಿಯ ಗುಲಾಮರಂತೆ ವರ್ತಿಸುತ್ತಿದ್ದಾರೆಂದು ಕಿಡಿಕಾರಿದರು.

ನೆರೆ ಸಂತ್ರಸ್ತರಿಗೆ ಸರಕಾರ ನೀಡುತ್ತಿರುವ ಪರಿಹಾರದ ಎನ್‌ಡಿಆರ್‌ಎಫ್‌ನ ಮಾನದಂಡ ಅವೈಜ್ಞಾನಿಕವಾಗಿದೆ. ಎಕರೆಗೆ 2500 ರೂ. ಮಳೆ ಆಶ್ರಯಕ್ಕೆ, 5,500 ರೂ. ನೀರಾವರಿ ಪ್ರದೇಶದ ಬೆಳೆಗಳಿಗೆ ನೀಡುವುದು ಭಿಕ್ಷಾ ರೂಪದ ಪರಿಹಾರವಾಗಿದೆ ಎಂದು ಕಿಡಿಕಾರಿದ ಅವರು, 10 ವರ್ಷಗಳಿಂದಲೂ ಎನ್‌ಡಿಆರ್‌ಎಫ್‌ ಮಾನದಂಡ ಬದಲಾಗಿಲ್ಲ. ಆದರೇ ಎಂಪಿಎಂಎಲ್ಎಗಳ ಸಂಬಳದ ಭತ್ಯೆ ತಿದ್ದುಪಡಿಯಾಗಿ ಬೇಗನೆ ಅನುಮೋದನೆ ಕೂಡ ಗೊಳ್ಳುತ್ತದೆ. ಆದರೆ ಬಡವರ ಕುರಿತು ಯಾವುದೇ ಮಸೂದೆ ಬೇಗನೆ ತಿದ್ದುಪಡಿಯಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಂತಕುಮಾರ, ಕೇಂದ್ರ ಸರ್ಕಾರ ಈ ಬಗ್ಗೆ ತಿದ್ದುಪಡಿ ಮಾಡಲು ತುರ್ತ ಕ್ರಮಕೈಗೊಳ್ಳಬೇಕೆಂದರು.

ರಾಜ್ಯ ಸರ್ಕಾರ ತಕ್ಷಣವೇ ನೆರೆ ಸಂತ್ರಸ್ತ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಅಲ್ಲದೇ ಹೊಸದಾಗಿ ದೀರ್ಘಾವಧಿ ಬಡ್ಡಿ ರಹಿತ ಸಾಲ ನೀಡುವ ಯೋಜನೆ ತಕ್ಷಣ ಜಾರಿಗೆ ತರುವ ಮೂಲಕ ಸರ್ಕಾರ ರೈತರಿಗೆ ಬೆನ್ನೆಲುಬಾಗಿ ನಿಲ್ಲಬೇಕೆಂದು ಆಶಿಸಿದರು.

ನೆರೆ, ಬರ, ಅತಿವೃಷ್ಟಿಯಾದಾಗ ಬೆಳೆ ನಷ್ಟ ಕೊಡುವ ಬದಲು ಎಲ್ಲ ಬೆಳೆಗಳನ್ನು ಎಲ್ಲ ಪ್ರದೇಶಗಳಿಗೂ ಅನ್ವಯವಾಗುವಂತಹ ಪ್ರಧಾನಿ ಫಸಲ್ ವಿಮಾ ಯೋಜನೆ ಜಾರಿಗೆ ತರಬೇಕು ಎಂದರು.

ರಾಜ್ಯದ ಕೆಲವು ಭಾಗದಲ್ಲಿ ಯೂರಿಯಾ ಗೊಬ್ಬರ‌ದ ಅಭಾವ ಸೃಷ್ಟಿಯಾಗುತ್ತಿದೆ. ಕಾಳ ಸಂತೆಯಲ್ಲಿ ಯೂರಿಯಾ ಗೊಬ್ಬರ ಮಾರಾಟವಾಗುತ್ತಿದೆ. ಆದ್ದರಿಂದ ತಕ್ಷಣವೇ ಕೇಂದ್ರದ ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ರಾಜ್ಯಕ್ಕೆ ಹೆಚ್ಚುವರಿಯಾಗಿ ಯೂರಿಯಾ ಪೂರೈಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಎಂ.ವಿ. ಘಾಡಿ, ಸುರೇಶ ಎಂ. ಪಾಟೀಲ್, ತಾಲೂಕು ಪ್ರಧಾನ ಕಾರ್ಯದರ್ಶಿ ಅಶೋಕ ಮೇಟಿ, ರಾಜ್ಯ ಸಂಟನಾ ಕಾರ್ಯದರ್ಶಿ ಅತ್ತಹಾಳು ದೇವರಾಜ, ರಾಜ್ಯ ಮುಖಂಡರಾದ ಲಕ್ಷ ್ಮಣ ಪಾಟೀಲ್, ವಿ.ಕೆ. ಬೊಬಾಟಿ, ತಾಲೂಕು ಅಧ್ಯಕ್ಷ ಶಂಕರ ಕಾಜ್‌ಗಾರ, ಶ್ರೀಕಾಂತ್‌ ಪಾಟೀಲ್, ಮಂಜು ಬಡಡೊಳಕರ್‌ ಇದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.