Udayavni Special

ಭತ್ತಕ್ಕೆ ರೋಗ: ರೈತರಲ್ಲಿ ಆತಂಕ

Team Udayavani, Feb 17, 2020, 5:06 PM IST

uk-tdy-2

ಮುಂಡಗೋಡ: ತಾಲೂಕಿನ ಬೇಸಿಗೆಯ ಭತ್ತದ ನಾಟಿ ಬೆಳೆಗೆ ಬೆಂಕಿರೋಗ ಹಾಗೂ ಬೇರುಕೊಳೆ ರೋಗ ಕಾಣಿಸಿಕೊಂಡಿರುವುದು ರೈತ ಸಮೂಹಕ್ಕೆ ಆತಂಕವುಂಟು ಮಾಡಿದೆ.

ಈ ಬಾರಿ ಉತ್ತಮ ಮಳೆಯಾದ ಕಾರಣ ತಾಲೂಕಿನಲ್ಲಿರುವ ಎಲ್ಲ ಕೆರೆ, ಜಲಾಶಯಗಳು ನೀರು ತುಂಬಿದ್ದು, ಅಂತರ್ಜಲವು ಹೆಚ್ಚಾಗಿದೆ. ಆದರಿಂದಾಗಿ ಈ ಬಾರಿ ತಾಲೂಕಿನಲ್ಲಿ ರೈತರು ಬೇಸಿಗೆ ಬೆಳೆ ಬೆಳೆಯುತ್ತಿದ್ದಾರೆ. ಹೆಚ್ಚಿನ ಪ್ರದೇಶದಲ್ಲಿ ಗೋವಿನಜೋಳದ ಬೆಳೆ ಬೆಳೆಯಲಾಗಿದೆ. ಕೆಲವಡೆ ನಾಟಿ ಭತ್ತದ ಬೆಳೆ ಬೆಳೆಯಲಾಗಿದೆ, ಮತ್ತೆ ಕೆಲವು ರೈತರು ತರಕಾರಿ ಬೆಳೆಗಳನ್ನು ಬೆಳೆದಿದ್ದಾರೆ. ನೀರಿನ ಸೌಲಭ್ಯ ಸಮರ್ಪಕವಾಗಿರುವುದರಿಂದ ಬೇಸಿಗೆ ಬೆಳೆಯು ಉತ್ತಮ ಇಳುವರಿ ಹಾಗೂ ಸರಿಯಾದ ಬೆಲೆಯೂ ಸಿಗಬಹುದು ಎಂಬ ಆಶಾಭಾವನೆಯಲ್ಲಿ ತಾಲೂಕಿನ ರೈತ ಸಮೂಹವಿತ್ತು.

ಆದರೆ ಇದೀಗ ನಾಟಿ ಭತ್ತದ ಬೆಳೆಗೆ ಬೆಂಕಿರೋಗ ಹಾಗೂ ಬೇರುಕೋಳೆ ರೋಗ ಕಾಣಿಸಿಕೊಂಡಿರುವುದು ರೈತರಿಗೆ ತೀವ್ರ ಬೇಸರವುಂಟು ಮಾಡಿದೆ.  ತಾಲೂಕಿನ ಪಾಳಾ, ಇಂಗಳಕಿ, ಕಲ್ಲಕೋಪ್ಪ ಭಾಗದಲ್ಲಿ ರೋಗ ಕಾಣಿಸಿಕೊಂಡಿದೆ. ಬೆಂಕಿರೋಗವೂ ಒಂದು ಗದ್ದೆಯಿಂದ ಮತ್ತೂಂದು ಗದ್ದೆಗೆ ಹರಡುವಂತಹ ರೋಗವಾಗಿದೆ ಹಾಗೂ ಬೇರುಕೋಳೆ ರೋಗವು ಭತ್ತದ ಬೆಳೆಯ ಬೇರುಗಳು ಕೊಳೆತು ಹೋಗುವಂತೆ ಮಾಡುತ್ತದೆ. ಇದರಿಂದ ಭತ್ತದ ಸಸಿಯೂ ಒಣಗಿ ನಿಲ್ಲುತ್ತದೆ.

ಕೃಷಿ ಇಲಾಖೆ ಸಲಹೆ: ಬೆಂಕಿರೋಗ ಹಾಗೂ ಬೇರುಕೋಳೆ ರೋಗದ ಹತೋಟಿಗೆ ತರಲು ಟ್ರೆಸೈಕ್ಲೋಜೋಲ್‌ (ಬೀಮ್‌ ಪೌಡರ್‌) 1.0ಗ್ರಾಂ. ಲೀ. ನೀರಿಗೆ ಬೆರೆಸಿ ಸಿಂಪಡಿಸಬೇಕು. ಬೇರು ಕೊಳೆ ರೋಗದ ನಿಯಂತ್ರಣಕ್ಕಾಗಿ ಫ್ರೊಪಿಕೊನಾಜೋಲ್‌ 1ಮಿ.ಲೀ. ನೀರಿಗೆ ಬೆರಸಿ ಸಿಂಪರಣೆ ಮಾಡಬೇಕು. 4 ದಿನಗಳ ನಂತರ ಮಂಗಳ ಬಯೋ-20 ಸಸ್ಯ ವರ್ದಕವನ್ನು 2 ಗ್ರಾಂ.ಲೀ.ನೀರಿಗೆ ಬೆರಸಿ ಸಿಂಪರಣೆ ಮಾಡಿದರೆ ಈ ರೋಗಗಳ ಹತೋಟಿಗೆ ಬರುತ್ತವೆ. ಇಲಾಖೆ ಸಲಹೆಯಂತೆ ರೈತರು ಔಷಧಿ  ಸಿಂಪರಿಸಬೇಕು.

ತಾಲೂಕಿನ ಪಾಳಾ ಹೋಬಳಿಯಲ್ಲಿ ನಾಟಿ ಭತ್ತದ ಬೆಳೆಯನ್ನು ಪರಿಶೀಲಿಸಿದಾಗ ಬೆಂಕಿರೋಗ ಹಾಗೂ ಬೇರುಕೊಳೆ ರೋಗವಿರುವುದು ಕಂಡು ಬಂದಿದೆ. ಕೃಷಿ ಇಲಾಖೆಯ ಸೂಚನೆಯಂತೆ ರೈತರು ಸೂಕ್ತ ಔಷಧಿ  ಸಿಂಪರಣೆ ಮಾಡಬೇಕು.-ಡಾ| ಶಿವಶಂಕರ ಮೂರ್ತಿ, ಕೃಷಿ ವಿಜ್ಞಾನಿ

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

cancer awarness

ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆ

fcgdftgrt

ಬಿಜೆಪಿ ಅವಧಿಯಲ್ಲಿಯೇ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ : ಮುಝಮ್ಮಿಲ್ ಬಾಬು

hfghtyht

ದಾಂಡೇಲಿ :  ಅಪರಿಚಿತ ವಾಹನ ಡಿಕ್ಕಿ : ಪಾದಚಾರಿ ಸಾವು

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.