ಅಕ್ರಮ ಮರಳುಗಾರಿಕೆ ತಡೆಯಲು ವಿಫಲ

•ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ ಡಾ| ಹರೀಶಕುಮಾರ್‌

Team Udayavani, Jun 3, 2019, 2:00 PM IST

uk-tdy-1..

ಹಳಿಯಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ವಿಶೇಷ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಕೆ. ಹರೀಶಕುಮಾರ ಮಾತನಾಡಿದರು.

ಹಳಿಯಾಳ: ಹಳಿಯಾಳ, ಜೋಯಿಡಾ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಅಕ್ರಮ ಮರಳುಗಾರಿಕೆ ಅಧಿಕವಾಗಿದ್ದು ಅದನ್ನು ನಿಯಂತ್ರಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ| ಕೆ. ಹರೀಶಕುಮಾರ ಅಸಮಾಧಾನ ವ್ಯಕ್ತಪಡಿಸಿದರಲ್ಲದೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಿದ್ಯಮಾನ ನಡೆಯಿತು.

ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ನಡೆದ ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮರಳು ದೊರೆಯುವ ಜೋಯಿಡಾ ತಾಲೂಕಿನ ತಹಶೀಲ್ದಾರ್‌ ಸಂಜಯ ಕಾಂಬ್ಳೆ ಅವರನ್ನು ಸಭೆಯಲ್ಲಿಯೇ ತರಾಟೆಗೆ ತೆಗೆದುಕೊಂಡರು. ಅಕ್ರಮ ಮರಳುಗಾರಿಕೆಯಿಂದ ನೈಸರ್ಗಿಕ ಶಕ್ತಿ ಕುಂದುತ್ತಿದೆ. ತಕ್ಷಣ ಕಾರ್ಯಾಚರಣೆ ನಡೆಸಿ ಅಕ್ರಮ ಮರಳುಗಾರಿಕೆಯನ್ನು ನಿಯಂತ್ರಿಸಬೇಕಾಗುತ್ತದೆ. ಅದರ ಕುರಿತು ವರದಿ ನೀಡುವ ಬದಲು ಸ್ಥಳದಲ್ಲಿಯೇ ಕಾನೂನು ಕ್ರಮ ಕೈಗೊಳ್ಳಿ ಎಂದು ಆದೇಶಿಸಿದ ಜಿಲ್ಲಾಧಿಕಾರಿ ಸಕ್ರಮ ಮರಳುಗಾರಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಮತ್ತೆ ಅಕ್ರಮ ಕಲ್ಲುಕ್ವಾರಿ-ಗಣಿಗಾರಿಕೆ-ಕ್ರಶರ್‌, ಮರಳು ದಂಧೆ ಕಂಡು ಬಂದಲ್ಲಿ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು, ತಹಶೀಲ್ದಾರ್‌ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಲ್ಲದೇ ಕಡ್ಡಾಯ ನಿವೃತ್ತಿಗೆ ಸರ್ಕಾರಕ್ಕೆ ವರದಿ ನೀಡುವುದಾಗಿ ಖಡಕ್‌ ಎಚ್ಚರಿಕೆ ನೀಡಿದರು.

ಅಕ್ರಮ ಮರುಳುಗಾರಿಕೆ ತಡೆಯಲು ಪೊಲೀಸ್‌, ವಿಎ, ಪಿಡಿಓಗಳ ತಂಡವಿದ್ದು ಇವರೆಲ್ಲ ಏನ ಮಾಡ್ತಾ ಇದ್ದಾರೆ ?, ಯಾರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಹಾಗೂ ಯಾರಿಗೆ ನೋಟಿಸ್‌ ನೀಡಲಾಗಿದೆ ? ಎಂದು ಕೋಪದಿಂದಲೇ ಮರಳುಗಾರಿಕೆ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದ ಜೋಯಿಡಾ ತಹಶೀಲ್ದಾರ್‌ ಸಂಜಯ ಕಾಂಬ್ಳೆ ಅವರನ್ನು ತರಾಟೆಗೆ ತೆಗೆದುಕೊಂಡ ಡಿಸಿ ಇಷ್ಟೊಂದು ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಜಾಣ ಮೌನ ವಹಿಸಿದ್ದು ಯಾಕೆ? ಕೆಳ ಮಟ್ಟದಲ್ಲಿ ಮಾಹಿತಿಗಳನ್ನು ಸಂಗ್ರಹಿಸಿ ದಾಳಿ ನಡೆಸಿ ಅದನ್ನು ತಡೆಯುವಲ್ಲಿ ಮತ್ತೆ ವಿಫಲರಾದಲ್ಲಿ ನಿಮ್ಮನ್ನು ಮನೆಗೆ ಕಳುಹಿಸಲಾಗುವುದೆಂದು ಮತ್ತೂಮ್ಮೆ ಸ್ಪಷ್ಟ ಸಂದೇಶ ನೀಡಿದರು.

ಬೇಸಿಗೆಯ ಬಿಸಿಲು ಮುಂದಿನ ಎರಡು ವಾರಗಳಲ್ಲಿ ಹೆಚ್ಚಳ ಉಂಟಾಗುವ ಸಾಧ್ಯತೆಗಳು ಅಧಿಕವಾಗಿದ್ದು ಅದಕ್ಕಾಗಿ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳಲ್ಲಿಯೂ ಸಹ ಕುಡಿಯುವ ನೀರು ಮತ್ತು ಮೇವಿನ ದಾಸ್ತಾನು ಸೇರಿದಂತೆ ಇನ್ನಿತರ ಮುನ್ನಚ್ಚರಿಕೆ ಕ್ರಮಗಳನ್ನು ಜರುಗಿಸಲು ಮುಂದಾಗಿ, ಸರ್ಕಾರವು ಜಿಲ್ಲಾಡಳಿತಕ್ಕೆ ಹಣಕಾಸಿನ ನೆರವು ಈಗಾಗಲೇ ಕಲ್ಪಿಸಿದ್ದು ಅವಶ್ಯತೆಯಿದ್ದಲ್ಲಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದರು.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸೇರಿದಂತೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಹಾಗೂ ಮುಂದಿನ ದಿನಗಳಲ್ಲಿ ಮಳೆಯು ಉಂಟಾಗಿ ಪ್ರಕೃತಿ ವಿಕೋಪ ಉಂಟಾದಲ್ಲಿ ಸೂಕ್ತ ಕ್ರಮ ನಿರ್ವಹಿಸಲು ಅಧಿಕಾರಿಗಳು ತಯಾರಿ ನಡೆಸಬೇಕಾಗಿದ್ದು ಎಲ್ಲಾ ರೀತಿಯ ಸಹಕಾರ ನೀಡಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ಭರವಸೆ ನಿಡಿದರು.

ತಹಶೀಲ್ದಾರ್‌ ಹಳಿಯಾಳದ ಶಿವಾನಂದ ಉಳ್ಳೇಗಡ್ಡಿ, ದಾಂಡೇಲಿಯ ಚಾಮರಾಜ ಪಾಟೀಲ್, ತಾಪಂ ಅಧಿಕಾರಿ ಡಾ| ಮಹೇಶ ಕುರಿಯವರ ಸೇರಿದಂತೆ ಮೂರು ತಾಲೂಕುಗಳ ಎಲ್ಲ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.