ಕಾಂಗ್ರೆಸ್ ರ್ಯಾಲಿಯಲ್ಲಿ ಪಾಕ್ ಧ್ವಜದ ಸುಳ್ಳು ವಿಡಿಯೋ:ದೂರು ದಾಖಲು
Team Udayavani, May 11, 2018, 11:31 AM IST
ಭಟ್ಕಳ: ಭಟ್ಕಳದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ರ್ಯಾಲಿಯಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಲಾಗಿದೆ ಎನ್ನುವ ಸಾಮಾಜಿಕ ಜಾಲ ತಾಣದ ಸುಳ್ಳು ವಿಡಿಯೋ ವಿರುದ್ಧ ಇಲ್ಲಿನ ನಗರ ಠಾಣೆಯಲ್ಲಿ ದೂರೊಂದನ್ನು ದಾಖಲಿಸಲಾಗಿದೆ.
ತಿಮ್ಮಪ್ಪ ಮೊಗೇರ ಎನ್ನುವವರು ನೀಡಿದ ದೂರಿನಲ್ಲಿ ಸಾಮಾಜಿಕ ಜಾಲ ತಾಣವಾದ ವಾಟ್ಸ್ಆ್ಯಪ್ನಲ್ಲಿ ಬೆಳಗಾವಿ ಕಾಂಗ್ರೆಸ್ ರ್ಯಾಲಿಯಲ್ಲಿ ಮುಸ್ಲಿಮರು ದರ್ಗಾ ಮತ್ತು ಉರುಸುಗಳಲ್ಲಿ ಬಳಸುವ ಹಸಿರು ಬಾವುಟ ಪ್ರದರ್ಶಿಸಲಾಗಿದ್ದು ಅದನ್ನು ಭಟ್ಕಳದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯೆಂದು ಬಿಂಬಿಸಿ ಪಾಕಿಸ್ಥಾನದ ಧ್ವಜ ಹಾರುತ್ತಿದೆ ಎನ್ನುವ ತಪ್ಪು ಸಂದೇಶವನ್ನು ಸಾರ್ವಜನಿಕರಿಗೆ ತಲುಪುವಂತೆ ಮಾಡಲಾಗಿದೆ. ಭಟ್ಕಳದಲ್ಲಿ ಕಾಂಗ್ರೆಸ್ ಗೆದ್ದರೆ ಪಾಕಿಸ್ಥಾನ ಅಗುತ್ತದೆನ್ನುವ ಸುಳ್ಳು ಸುದ್ದಿಯನ್ನು ಹರಡಲಾಗುತ್ತಿದೆ ಎಂದೂ ದೂರಿನಲ್ಲಿ ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ ನಗರ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!