ಹಳೆ ಮೀನು ಮಾರುಕಟ್ಟೆ ಸ್ವಚ್ಛತೆ ಮಾಡದ್ದಕ್ಕೆ ಆಕ್ರೋಶ: ಪುರಸಭೆ ಮುತ್ತಿಗೆ ಹಾಕಿದ ಮಹಿಳೆಯರು


Team Udayavani, Apr 6, 2022, 4:55 PM IST

ಹಳೆ ಮೀನು ಮಾರುಕಟ್ಟೆ ಸ್ವಚ್ಚತೆ ಮಾಡದ್ದಕ್ಕೆ ಆಕ್ರೋಶ: ಪುರಸಭೆ ಮುತ್ತಿಗೆ ಹಾಕಿದ ಮಹಿಳೆಯರು

ಭಟ್ಕಳ: ಪುರಸಭೆಯ ಹಳೆ ಮೀನು ಮಾರುಕಟ್ಟೆಯಲ್ಲಿ ಕಸವನ್ನು ರಾಶಿ ಹಾಕಿದ್ದಾರೆ, ಮೀನು ಮಾರಾಟ ಮಾಡಲು ತೊಂದರೆ ಕೊಡುವ ಉದ್ದೇಶದಿಂದಲೇ ಸ್ವಚ್ಛತೆ ಮಾಡಿಲ್ಲ ಎಂದು ದೂರಿ ನೂರಾರು ಮಹಿಳೆಯರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.

ಬುಧವಾರ ಬೆಳಿಗ್ಗೆ ಮೀನು ಮಾರಾಟಕ್ಕೆ ಬಂದ ಮಹಿಳೆಯರು ನೋಡುವಾಗ ಹಳೆ ಮೀನು ಮಾರುಕಟ್ಟೆಯಲ್ಲಿ ಹೊರಗಿನಿಂದ ಕಸ ತುಂಬಿದ್ದಲ್ಲದೇ ಸ್ವಚ್ಛತೆಯನ್ನೂ ಮಾಡಿಲ್ಲವಾಗಿತ್ತು. ಈ ಬಗ್ಗೆ ಕೇಳಿದರೆ ಪುರಸಭೆಯವರು ಹಳೆಮೀನು ಮಾರುಕಟ್ಟೆ ಚಾಲ್ತಿಯಲ್ಲಿಲ್ಲ, ಈಗಾಗಲೇ ಕಟ್ಟಡ ಶಿಥಿಲವಾಗಿದ್ದರಿಂದ ಮೀನುಮಾರುಕಟ್ಟೆಯನ್ನು ಸ್ಥಳಾಂತರಗೊಳಿಸಲಾಗಿದೆ ಎನ್ನುವ ಉತ್ತರ ನೀಡಿದ್ದರಿಂದ ತೀವ್ರ ಆಕ್ರೋಶಗೊಂಡ ಮಹಿಳೆಯರು ತಾವು ತಂದಿದ್ದ ಮೀನು ಬುಟ್ಟಿಯೊಂದಿಗೆ ಪುರಸಭಾ ಕಟ್ಟಡದ ಎದುರು ಬಂದು ಪುರಸಭಾ ಕಟ್ಟಡದ ಒಳಗೆ ಪ್ರವೇಶ ಮಾಡಲು ಪ್ರಯತ್ನಿಸಿದರು.

ಇದನ್ನೂ ಓದಿ:ಶಬ್ದ ಮಾಲಿನ್ಯ : 1001 ಧಾರ್ಮಿಕ,ಇತರ ಸಂಸ್ಥೆಗಳಿಗೆ ಮಂಗಳೂರು ಪೊಲೀಸ್ ನೋಟಿಸ್

ಅಷ್ಟರಲ್ಲಿ ಸ್ಥಳಕ್ಕಾಗಮಿಸಿದ್ದ ಪೊಲೀಸರು ಮಹಿಳೆಯರನ್ನು ತಡೆದು ಒಳ ಹೋಗದಂತೆ ನಿರ್ಬಂಧಿಸಿದರು. ಇದರಿಂದ ಇನ್ನಷ್ಟ ಆಕ್ರೋಶಗೊಂಡ ಮಹಿಳೆಯರು ಪುರಸಭಾ ಎದುರಿನಲ್ಲಿಯೇ ಮೀನು ಬುಟ್ಟಿಯಿಂದ ಮೀನನ್ನು ಚೆಲ್ಲಿ ರಾದ್ದಾಂತ ಮಾಡಿದ್ದಲ್ಲದೇ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಕೆಲ ಸಮಯ ಪೊಲೀಸರಿಗೂ ಮೀನು ಮಾರುವ ಮಹಿಳೆಯರಿಗೂ ಮಾತಿನ ಚಕಮಕಿ ನಡೆದು ಕೊನೆಗೂ ಅಲ್ಲಿಂದ ತೆರಳಿದರು. ಒಂದು ಹಂತದಲ್ಲಿ ಡಿ.ವೈ.ಎಸ್.ಪಿ. ಬೆಳ್ಳಿಯಪ್ಪ ಅವರು ಮಹಿಳೆಯರ ಕೃತ್ಯಕ್ಕೆ ಆಕ್ರೋಶಗೊಂಡಿದ್ದರೂ ಸಹ ಸಮಾಧಾನದಿಂದ ಅವರನ್ನೆಲ್ಲ ಅಲ್ಲಿಂದ ಕಳುಹಿಸುವಲ್ಲಿ ಯಶಸ್ವಿಯಾಗಿದ್ದರು.

ಪುರಸಭೆಯ ಮೇಲೆ ಆಕ್ರೋಶ: ಮೀನುಗಾರ ಮಹಿಳೆಯರು ತಮ್ಮನ್ನು ಇಲ್ಲಿಂದ ಒಕ್ಕಲೆಬ್ಬಿಸಬೇಕು ಎನ್ನುವ ಉದ್ದೇಶದಿಂದ ಪುರಸಭೆಯವರೇ ಹೊರಗಿನಿಂದ ಕಸ ತಂದು ಹಾಕಿ, ಸ್ವಚ್ಚಗೊಳಿಸದೇ ತೊಂದರೆ ಕೊಡುತ್ತಿದ್ದಾರೆ. ಹೊಸ ಮೀನು ಮಾರುಕಟ್ಟೆಗೆ ಹೋಗಬೇಕೆನ್ನುವ ಉದ್ದೇಶ ಅವರದು.  ನಾವು ಯಾವುದೇ ಕಾರಣಕ್ಕೂ ಹೊಸ ಮೀನು ಮಾರುಕಟ್ಟೆಗೆ ಹೋಗುವುದಿಲ್ಲ, ಇಲ್ಲಿಯೇ 70-80 ವರ್ಷದಿಂದ ಮೀನು ಮಾರಾಟ ಮಾಡಿಕೊಂಡು ಬಂದಿದ್ದು ಇಲ್ಲಿಯೇ ಮೀನು ಮಾರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸ ಹಾಕಿದ ಕುರಿತು ದೂರು ಸಲ್ಲಿಕೆ: ಪುರಸಭೆಯ ಹಳೆ ಮೀನು ಮಾರುಕಟ್ಟೆಯಲ್ಲಿ ಕಸ ಹಾಕಿರುವ ಕುರಿತು ಸಿ.ಸಿ. ಟಿ.ವಿ. ಫೂಟೇಜ್‌ಗಳನ್ನು ಪಡೆದು ತಪ್ಪತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ಮೀನುಗಾರರ ಆರೋಪಿಸಿದಂತೆ ಕಸ ಹಾಕಿದವರು ಯಾರು ಎನ್ನುವುದು ಪುರಸಭೆಗೂ ತಿಳಿಯಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ನಗರ ಠಾಣೆಯಲ್ಲಿ ದೂರೊಂದನ್ನು ಕೊಟ್ಟಿದ್ದಾರೆ. ಅಕ್ಕ ಪಕ್ಕದ ಸಿ.ಸಿ. ಟಿ.ವಿಗಳನ್ನು ವಿಶ್ಲೇಷಣೆ ಮಾಡಿ ಕಸ ಹಾಕಿರುವವರ ಕುರಿತು ಸೂಕ್ತ ತನಿಖೆ ನಡೆಸಿ ಎಂದೂ ತಿಳಿಸಲಾಗಿದೆ.

ಈ ಕುರಿತು ಪುರಸಭಾ ಅಧ್ಯಕ್ಷ ಪರ್ವೇಜ್ ಕಾಶಿಮಜಿ ಅವರನ್ನು ಸುದ್ದಿಗಾರರು ಭೇಟಿಯಾದಾಗ ಅವರ ಹಳೇ ಮೀನು ಮಾರುಕಟ್ಟೆಯ ಶಿಥಿಲವಾಗಿದೆ ಎಂದು 2020 ರಲ್ಲಿಯೇ ಲೋಕೋಪಯೋಗಿ ಇಲಾಖೆ ವರದಿ ನೀಡಿದ್ದು ಅಲ್ಲಿ ಯಾವುದೇ ಜನ ವಸತಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.  ಅದರಿಂದ ಕಳೆದ ಎರಡು ವರ್ಷಗಳ ಹಿಂದೆ ಮೀನು ಮಾರಾಟ ಟೆಂಡರ್‌ನ್ನು ಸಹ ಹೊಸ ಮೀನು ಮಾರುಕಟ್ಟೆಯಲ್ಲಿಯೇ ಕರೆಯಲಾಗಿದೆ. ಈಗಾಗಲೇ ಮೀನು ಮಾರುಕಟ್ಟೆಯನ್ನು ತೆರವುಗೊಳಿಸುವಂತೆ ಪುರಸಭೆಗೆ ಲೋಕಾಯುಕ್ತರು ತಮ್ಮ ನೋಡೀಸು ದಿನಾಂಕ 10/2/2022ರಂತೆ ನೀಡಿದ್ದು ಸೂಕ್ತ ಕ್ರಮ ಕೈಗೊಳ್ಳಲು ಗಡುವು ನೀಡಿದ್ದಾರೆ.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಹಳೆ ಮೀನು ಮಾರುಕಟ್ಟೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಕಾನೂನು ತೊಡಕು ಉಂಟಾಗುತ್ತದೆ. ಮುಂದೆ ಕಟ್ಟಡ ಕುಸಿದು ಏನಾದರೂ ಅನಾಹುತವಾದರೆ ಯಾರು ಹೊಣೆ ಎನ್ನುವ ಅವರು ಹೊಸ ಮೀನು ಮಾರುಕಟ್ಟೆಯಲ್ಲಿ ಯಾವುದೇ ಸೌಲಭ್ಯ ನೀಡಲು ನಾವು ಬದ್ಧರಿದ್ದೇವೆ. ಎಪ್ರಿಲ್ ಒಂದು ತಿಂಗಳು ಯಾವುದೇ ಶುಲ್ಕ ವಸೂಲಿಯನ್ನು ಸಹ ಮಾಡುವುದಿಲ್ಲ ಎಂದು ಮೀನುಗಾರರು ನೂತನ ಮೀನು ಮಾರುಕಟ್ಟೆಯಲ್ಲಿ ಎಲ್ಲಾ ವ್ಯವಸ್ಥೇ ಮಾಡಿಕೊಡುತ್ತಿದ್ದು ಅಲ್ಲಿಯೇ ವ್ಯಾಪಾರ ಆರಂಭಿಸುವಂತೆ ಕೋರಿದರು.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.