ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ

ಸ್ವಾತಂತ್ರ್ಯದ ಅಮೃತ ಮಹೋತ್ಸವದೊಂದಿಗೆ ಸಾಧಿಸಬೇಕಾಗಿರುವುದು ಇನ್ನೂ ಸಾಕಷ್ಟಿದೆ

Team Udayavani, Aug 14, 2022, 3:55 PM IST

14

ಅಂಕೋಲಾ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದ ಹಿಂದೆ ಅದೆಷ್ಟೋ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಕಥಾನಕಗಳು ನಮ್ಮ ಎದುರಿಗೆ ತೆರೆದಿಡುತ್ತವೆ. ಅದೆಷ್ಟೊ ಸ್ವಾತಂತ್ರ್ಯ ಹೊರಾಟಗಾರರು ನಮ್ಮಿಂದ ದೂರವಾಗುತ್ತಿದ್ದಾರೆ. ಆ ಹೋರಾಟಗಾರರಲ್ಲಿ ಒಬ್ಬರಾದ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಸೂರ್ವೆ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕರು.

ತಾಲೂಕಿನ ಬಾಸಗೋಡ ಸೂರ್ವೆ ಗ್ರಾಮದ ಬೊಮ್ಮಯ್ಯ ಹಾಗೂ ಸಾವಿತ್ರಿ ದಂಪತಿ ಹಿರಿಯ ಮಗನಾಗಿರುವ ವೆಂಕಣ್ಣ ನಾಯಕರು ಕೃಷಿ ಕುಟುಂಬದಲ್ಲಿ ಬೆಳೆದು ಬಂದವರು. ಶಾಲೆ ಕಲಿತದ್ದು ಮೂರನೇ ತರಗತಿಯಾದರೂ ಅಪಾರ ಜ್ಞಾನ ಸಂಪಾದಿಸಿದವರು. ಬಾಲ್ಯದಿಂದಲೇ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ತಮ್ಮಲ್ಲಿ ಅಳವಡಿಸಿಕೊಂಡು ತಮ್ಮೂರಿನ ಹಿರಿಯರ ಹೋರಾಟದತ್ತ ಆಕರ್ಷಿತರಾಗಿದ್ದ ಇವರು ಸೂರ್ವೆಯಲ್ಲಿ ಹಿರಿಯರೊಂದಿಗೆ ಗಾಂಧೀಜಿ ಹೋರಾಟದ ಕರೆಗೆ ಓಗೊಟ್ಟಿದ್ದರು.

ಸೂರ್ವೆ ಗ್ರಾಮದ ಕಳಸ ದೇವಸ್ಥಾನದಲ್ಲಿ ನಡೆದ ಪ್ರಥಮ ಸಭೆಯಲ್ಲಿ ಕರನಿರಾಕರಣೆಯ ಪ್ರತಿಜ್ಞೆ ಸಾಲಿನಲ್ಲಿ ವೆಂಕಣ್ಣ ನಾಯಕ ಕೂಡಾ ಪ್ರತಿಜ್ಞೆಗೈದು ಮುಂಚೂಣಿಯಲ್ಲಿದ್ದರು. ಸೂರ್ವೆಯ 39 ಖಾತೆದಾರರಲ್ಲಿ 33 ಖಾತೆದಾರರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರುವುದು ವಿಶೇಷ. ಕರನಿರಾಕರಣೆ, ಜಂಗಲ್‌ ಸತ್ಯಾಗ್ರಹ, ಉಪ್ಪಿನ ಸತ್ಯಾಗ್ರಹ, ಸ್ವದೇಶಿ ಅಂದೋಲನ ಸೇರಿದಂತೆ ಬ್ರಿಟೀಷರ ವಿರುದ್ಧ ಕೈಗೊಂಡ ಹೋರಾಟದ ದಿನಗಳು ಇಂದಿಗೂ ಇವರ ಕಣ್ಣ ಮುಂದಿವೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷದ ತುಂಬಿರುವ ಸಂತಸ ನನಗಿದೆಯಾದರೂ, ನಾವೆಣಿಸಿದ ಅಭಿವೃದ್ಧಿ ಸಾಧಿಸಿಲ್ಲ ಎಂಬ ನೋವು ನನಗಿದೆ. ಮುಂದಿನ ದಿನಗಳಲ್ಲಿ ದೇಶ ರಾಮರಾಜ್ಯವಾಗಬೇಕು. ಈ ದಿಸೆಯಲ್ಲಿ ಯುವ ಜನಾಂಗ ದೇಶ ಭಕ್ತಿಯನ್ನು ಬೆಳೆಸಿಕೊಳ್ಳುವುದರೊಂದಿಗೆ ಪ್ರಗತಿಗೆ ಶ್ರಮಿಸಬೇಕು ಎನ್ನುತ್ತಾರೆ ವೆಂಕಣ್ಣ ನಾಯಕರು. ಚೈತನ್ಯದ ಚಿಲುಮೆಯಂತಿರುವ ವೆಂಕಣ್ಣ ನಾಯಕರು ಪತ್ನಿ ಪಾರ್ವತಿ ಹಾಗೂ ಆರು ಮಕ್ಕಳೊಂದಿಗೆ ತುಂಬು ಸಂಸಾರ ನಡೆಸುತ್ತಿದ್ದಾರೆ.

ಸತ್ಯಾಗ್ರಹದ ಕಾಲದಲ್ಲಿ ನಾವು ಕಂಡ ಕನಸುಗಳು ಮಾತ್ರ ಇನ್ನೂ ಸಾಕಾರಗೊಂಡಿಲ್ಲ ಎಂಬ ಕೊರಗು ನಮಗಿದೆ ಎಂದು ಸೂರ್ವೆಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕರು ಮನದಾಳದ ಮಾತನ್ನು ಹೊರಹಾಕಿದರು.

ದೇಶ ಅಭಿವೃದ್ಧಿ ದಿಸೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಆದರೆ ನಾವು ಎಣಿಸಿದಷ್ಟು ಅಭಿವೃದ್ಧಿಯಾಗಿಲ್ಲ. ನಮ್ಮ ಕನಸಿನಂತೆ ದೇಶ ಸುಧಾರಣೆಯಾಗಿದ್ದರೆ ರಾಮ ರಾಜ್ಯ ನಮ್ಮದಾಗಿರುತ್ತಿತ್ತು. ಇಂದಿನ ರಾಜಕಾರಣಕ್ಕೂ, ಅಂದಿನ ರಾಜಕೀಯಕ್ಕೂ ಅಜಗಜಾಂತರ ವ್ಯತ್ಯಾಸ. ಅಂದು ದೇಶಕ್ಕಾಗಿ ಸಮರ್ಪಣಾ ಮನೋಭಾವದಿಂದ ಸೇವೆಗೈದರೆ, ಇಂದು ಸ್ವಾರ್ಥಕ್ಕಾಗಿ ರಾಜಕೀಯ ಮಾಡುವವರೇ ಅಧಿಕ. ಮಾಡು ಇಲ್ಲವೇ ಮಡಿ ಗಾಂಧೀಜಿಯ ನುಡಿಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಸೂರ್ವೆಯವರದ್ದು ಸಿಂಹ ಪಾಲೆಂದರೂ ಅತಿಶಯೋಕ್ತಿಯಾಗದು. ಇಲ್ಲಿನ 39 ಖಾತೆದಾರರಲ್ಲಿ 33 ಖಾತೆದಾರರು ಹೋರಾಟದಲ್ಲ ಪಾಲ್ಗೊಂಡಿರುವುದು ವಿಶೇಷ. ಸೂರ್ವೆಯ ಕಳಸ ದೇವಸ್ಥಾನದಲ್ಲಿ ಕರ ನಿರಾಕರಣೆಯ ಮೊದಲ ಸಭೆ ನಡೆದ ಸ್ಥಳ. ಅಂದು ನಮಗೆಲ್ಲರಿಗೂ ಹೋರಾಟವೇ ಬಹುದೊಡ್ಡ ಹಬ್ಬವಾಗಿತ್ತು ಎನ್ನುತ್ತಾರೆ ವೆಂಕಣ್ಣ ನಾಯಕರು.

 

ತಾಮ್ರ ಫಲಕ ಪಡೆದ ಸೂಲಪ್ಪ ಹರಿಕಾಂತ

ಅಂಕೋಲಾ: ಅಂದಿನ ಸ್ವಾತಂತ್ರ್ಯ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಹಲವು ನಾಯಕರ ಪೈಕಿ ದಿ| ಸೂಲಪ್ಪ ಬೊಮ್ಮಯ್ಯ ಹರಿಕಾಂತ ತ್ಯಾಗ, ಸಮರ್ಪಣಾ ಭಾವನೆ, ರಾಷ್ಟ್ರ ರಕ್ಷಣೆಗೆ ಮುಂದಾ ಗಿದ್ದವರಲ್ಲಿ ಇವರು ಕೂಡ ಒಬ್ಬರು.

1921ರಲ್ಲಿ ಜನಿಸಿದ ಇವರಿಗೆ ರಾಷ್ಟ್ರಾಭಿಮಾನ ತಾಯ್ನಾಡಿನ ಸೇವೆಗೆ ಧುಮುಕಿ ಬ್ರಿಟಿಷರ ವಿರುದ್ಧ ಹಲವರ ಜೊತೆಯಲ್ಲಿ ಹೋರಾಡಿ ಒಂಭತ್ತು ತಿಂಗಳು ಹಿಂಡಲ್ಗಾ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದರು.

ಸ್ವಾತಂತ್ರ್ಯ ಚಳವಳಿಯ ಅಂಗವಾಗಿ ಅಂಕೋಲಾದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ, ಅರಣ್ಯ ಸತ್ಯಾಗ್ರಹ, ಕರನಿರಾಕರಣೆ ಚಳವಳಿಯಲ್ಲಿ ಹಿಂದುಳಿದ ವರ್ಗದಲ್ಲಿ ಪಾಲ್ಗೊಂಡವರಲ್ಲಿ ಇವರು ಕೂಡ ಒಬ್ಬರಾಗಿದ್ದಾರೆ. ಇವರು ಅಪ್ರತಿಮ ಹೋರಾಟಗಾರರಾಗಿದ್ದು ಸದೃಢಕ್ಕಾಗಿ ಜೊತೆಗೆ ಲಾಠಿ ತಿರುವುದರಲ್ಲಿ ಹಾಗೂ ಈಜುಗಾರಿಕೆಯಲ್ಲಿ ಪ್ರವೀಣ ರಾಗಿದ್ದರು. ಹಲವು ಬಾರಿ ಇವರನ್ನು ಬ್ರಿಟಿಷರು ದಾಳಿ ನಡೆಸಿದ ಸಂದರ್ಭದಲ್ಲಿ ಹಿಚ್ಕಡದ ದಂಡೆಭಾಗದ ನದಿಯಲ್ಲಿ ಧುಮುಕಿ ಕೂರ್ವೆ ನಡುಗಡ್ಡೆ ಸೇರಿ ಬ್ರಿಟಿಷರಿಗೆ ಚಳ್ಳೆಹಣ್ಣು ತಿನ್ನಿಸಿರುವ ಘಟನೆ ಕುರಿತು ಹಾಗೂ ಜೈಲುವಾಸದಲ್ಲಿ ಅವರಿಗೆ ಉಪವಾಸದ ಆಚರಣೆ ಇರುವುದರಿಂದ ಜೈಲುಗಳಲ್ಲಿ ಒಂದು ಬಾರಿ ಉಪವಾಸ ಎಂದು, ಇನ್ನೊಂದು ಬಾರಿ ಇಲ್ಲವೆಂದು ತನಗೆ ಊಟ ಕೊಡಿ ಎಂಬಂತೆ ಜೈಲು ಊಟ ಇವರಿಗೆ ಅರೆಬರೆ ಹೊಟ್ಟೆ ತುಂಬುತ್ತಿತ್ತಂತೆ. ಹಲವಾರು ರೋಚಕ ಹೋರಾಟದ ಕತೆಯನ್ನು ನಮಗೆಲ್ಲರಿಗೂ ಹೇಳುತ್ತಿದ್ದರು ಎಂದು ಅವರ ಮೊಮ್ಮಗ ಹರಿಹರ ಹರಿಕಾಂತ ಹಿಲ್ಲೂರು ಮಾಹಿತಿ ನೀಡುತ್ತ ದೇಶವು 25ನೇ ಸ್ವಾತಂತ್ರೋತ್ಸವದ ದಿನದಂದು ಅಂದಿನ ಸರಕಾರ ಇವರಿಗೆ ತಾಮ್ರ ಫಲಕ ನೀಡಿ ಗೌರವಿಸಿತ್ತು.

ಇಂತವರ ಹೋರಾಟದ ಪರವಾಗಿ ಇಂದು ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲು ಸಾಧ್ಯವಾಗಿದೆ. ಇವರು ನಂತರ ಹಿಲ್ಲೂರಿಗೆ ವಲಸೆ ಹೋಗಿ ತುಂಬು ಕುಟುಂಬದೊಂದಿಗೆ ಜೀವನ ನಡೆಸಿ ಅಗಸ್ಟ್‌ 1, 2000 ರಲ್ಲಿ ದೈವಾದಿಧೀನರಾದರು. ಅವರು ಯೋಧರಾಗಿ ಹೋರಾಡಿದ ಪ್ರೇರಣೆಯೇ ನಮ್ಮ ಕುಟುಂಬಕ್ಕೆ ದಾರಿದೀಪವಾಗಿದೆ ಎಂದು ಅವರ ಮೊಮ್ಮಗ ಹರಿಹರ ಹರಿಕಾಂತ ಹಿಲ್ಲೂರು ಪತ್ರಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

-ಅರುಣ ಶೆಟ್ಟಿ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.