ತುಂಬಿ ತುಳುಕಿದ ಕಾಳಿ ನದಿ : ಕದ್ರಾ-ಕೊಡಸಳ್ಳಿ ಎಲ್ಲಾ ಕ್ರಸ್ಟಗೇಟ್ ಓಪನ್

Team Udayavani, Jul 22, 2021, 7:51 PM IST

Untitled-0244

ಕದ್ರಾ ದಿಂದ ೪೨೧೭೫ ಕ್ಯೂಸೆಕ್ಸ ನೀರು ಕಾಳಿ ನದಿಗೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಕಾಳಿ ನದಿಯು ತುಂಬಿ ಹರಿಯುತ್ತಿದೆ. ಕಾಳಿ ನದಿ ಹರಿವ ದಾಂಡೇಲಿ ಹಾಗೂ ಕದ್ರಾ, ಕೊಡಸಳ್ಳಿ ಅಣೆಕಟ್ಟು ಹಿನ್ನೀರು ಪ್ರದೇಶದಲ್ಲಿ ಭಾರೀ ಮಳೆಬಿದ್ದ ಕಾರಣ ಗುರುವಾರ ಮಧ್ಯಾಹ್ನ ೧ ಗಂಟೆಗೆ ಕದ್ರಾ ಅಣೆಕಟ್ಟಿನ ಎಲ್ಲಾ ೮ ಕ್ರಸ್ಟಗೇಟ್ ತೆರೆದು ನೀರನ್ನು ನದಿಗೆ ಹರಿಸಲಾಗಿದೆ.

೧ ಗಂಟೆಯ ಸುಮಾರಿಗೆ ೨೭೩೬೩ ಕ್ಯೂಸೆಕ್ಸ ನೀರನ್ನು ಹೊರ ಬಿಟ್ಟಿರೆ, ಮಧ್ಯಾಹ್ನ ೨ ಗಂಟೆಯ ಸುಮಾರಿಗೆ ೪೨೧೭೫ ಕ್ಯೂಸೆಕ್ಸ ನೀರನ್ನು ನದಿಗೆ ಹರಿಸಲಾಯಿತು. ಈ ವೇಳೆ ಅಣೆಕಟ್ಟಿನಲ್ಲಿ ೩೦.೬೭ ಮೀಟರ್ ಇತ್ತು. ಕೊಡಸಳ್ಳಿ ಅಣೆಕಟ್ಟು ಸಹ ಭರ್ತಿಯಾಗುವ ಲಕ್ಷಣ ಇದ್ದ ಕಾರಣ ನದಿ ದಂಡೆಯ ಜನರಿಗೆ ಪ್ರವಾಹದ ಸನ್ನಿವೇಶ ತಪ್ಪಿಸಲು  ಮಧ್ಯಾಹ್ನ ೧ ಗಂಟೆ ಸಮಯಕ್ಕೆ ೨೨೧೪೩ ಕ್ಯೂಸೆಕ್ಸ ನೀರು ಹೊರಗೆ ಬಿಡಲಾಯಿತು. ಅದನ್ನೇ ಮಧ್ಯಾಹ್ನ ೨ ಗಂಟೆ ಸಮಯಕ್ಕೆ ೨೨೩೯೩ ಕ್ಯೂಸೆಕ್ಸ ನೀರನ್ನು ಹೊರಕ್ಕೆ ಬಿಡಲಾಯಿತು. ಕೊಡಸಳ್ಳಿಯ ನಾಲ್ಕು ಕ್ರಸ್ಟಗೇಟ್ ತೆರೆದಿದ್ದು, ಕದ್ರಾ ಅಣೆಕಟ್ಟಿನಿಂದ ೮ ಕ್ರಸ್ಟಗೇಟ್ ತೆರೆದು ನದಿಗೆ ನೀರು ಹರಿಸಲಾಯಿತು.

ಪ್ರವಾಹದ ಸ್ಥಿತಿ ತಪ್ಪಿಸಲು ಕೆಪಿಸಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ. ಅಣೆಕಟ್ಟು ಭರ್ತಿಯಾದ ನಂತರ ನೀರು ಹೊರಬಿಡುವ ಬದಲಿಗೆ , ಸತತ ಮಳೆಯ ಕಾರಣ ನಿರಂತರವಾಗಿ ನದಿಗೆ ನೀರನ್ನು ಹರಿಸಲಾಗುತ್ತಿದೆ. ಸಹಾಯಕ ಕಮಿಷನರ್ ವಿದ್ಯಾಶ್ರೀ ಚಂದರಗಿ ಮತ್ತು ತಹಶೀಲ್ದಾರ ರ‍್ಹೋನಾ ಅಣೆಕಟ್ಟು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ನದಿ ದಂಡೆಯ ಗ್ರಾಮಗಳ ಜನರಿಗೆ ಸೂಕ್ತ ಸುರಕ್ಷತೆಯ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಗುರುವಾರ ರಾತ್ರಿ ೭.೩೦ರ ಸುಮಾರಿಗೆ ಭಾರೀ ಮಳೆ ಕರಾವಳಿಯಲ್ಲಿ ಹಾಗೂ ನದಿಯ ಹಿನ್ನೀರಿನ ಪ್ರದೇಶದಲ್ಲಿ ಸುರಿಯುತ್ತಿದೆ. ಮಳೆ ಸ್ವಲ್ಪ ಬಿಡುವು ನೀಡಿ ಸುರಿಯುತ್ತಿರುವ ಕಾರಣ ಪ್ರವಾಹದ ಸನ್ನಿವೇಶ ಸೃಷ್ಟಿಯಾಗಿಲ್ಲ ಎಂದು ಜಿಲ್ಲಾಡಳಿತ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಕದ್ರಾ ಅಣೆಕಟ್ಟಿನಿಂದ ಇದೇ ಮಳೆಗಾಲದಲ್ಲಿ ನೀರನ್ನು ನದಿಗೆ ಕ್ರಸ್ಟಗೇಟ್ ತೆಗೆದು ಹರಿಸುತ್ತಿರುವುದು ಮೂರನೇ ಸಲ. ಸಾಮಾನ್ಯವಾಗಿ ಅಗಸ್ಟನಲ್ಲಿ ಭರ್ತಿಯಾಗುತ್ತಿದ್ದ ಅಣೆಕಟ್ಟು , ಈ ಸಲ ಜೂನ್ ಮತ್ತು ಜುಲೈ ೨೨ರ ಅವಧಿಯೊಳಗೆ ಮೂರು ಕ್ರಸ್ಟಗೇಟ್ ತೆರೆಯುವಷ್ಟು ಮಳೆ ಬಿದ್ದಿದೆ. ಸುಫಾ ಜಲಾಶಯ ಸಹ ೫೪೩.೪೦ ಮೀಟರ್ ಭರ್ತಿಯಾಗಿದ್ದು, ಪೂರ್ಣ ಪ್ರಮಾಣದಲ್ಲಿ ತುಂಬಲು ಇನ್ನೂ  ೨೧ ಮೀಟರ್ ಬೇಕಾಗಿದೆ.

ಕದ್ರಾ ಲೇಬರ್ ಕಾಲೂನಿಯ 48 ಕುಟುಂಬಗಳ 108 ಕ್ಕೂ ಹೆಚ್ಚು ಜನರನ್ನು ಕದ್ರಾ ಶಾಲೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕಾಳಜಿ ಕೇಂದ್ರದಲ್ಲಿರುವವರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಗೋವಾ ದಿಂದ ಬರುವ ಸಾಕಳಿ‌ಹಳ್ಳ ತುಂಬಿ ಹರಿಯುತ್ತಿದ್ದು, ಆ ಹಳ್ಳದ ನೀರು ಕದ್ರಾ ಬಳಿ ಕಾಳಿ‌ನದಿ ಸೇರುತ್ತಿದೆ. ಮೇಘಸ್ಪೋಟದ‌ ಕಾರಣ ಗುರುವಾರ ಅತೀ ಮಳೆಯಾದ ಕಾರಣ ಇದೇ ರಾತ್ರಿ 70000ಕ್ಯೂಸೆಕ್ಸ ನೀರು ನದಿಗೆ ಬಿಡಲಾಗಿದೆ. ಇದು ಬೆಳಿಗ್ಗೆ ಒಂಬತ್ತು ಗಂಟೆತನಕ ಮುಂದುವರಿಯಲಿದೆ. ಮಳೆ ಕಡಿಮೆಯಾದರೆ ಕ್ರಸ್ಟಗೇಟ್ ನೀರು ಹರಿವ ಪ್ರಮಾಣ ತಗ್ಗಲಿದೆ‌ ಎಂದು ಸ್ಥಳದಲ್ಲಿ ‌ಮೊಕ್ಕಾಂ ಮಾಡಿರುವ ಸಹಾಯಕ ಕಮಿಷನರ್ ವಿದ್ಯಾಶ್ರೀ ಚಂದರಗಿ ಉದಯವಾಣಿಗೆ ತಿಳಿಸಿದ್ದಾರೆ. ಗುರುವಾರ ರಾತ್ರಿ ಎಂಟು ಗಂಟೆಗೆ ಪತ್ರಿಕೆ ಪ್ರತಿನಿಧಿ ಜೊತೆ ಮಾತನಾಡಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.