ಮೇಘ ಸ್ಫೋಟ

Team Udayavani, Jul 23, 2019, 10:52 AM IST

uk-tdy-1

ಕಾರವಾರ: ಸೋಮವಾರ ಬೆಳಗಿನ ಜಾವದಿಂದ ಸಂಜೆ 5ರತನಕ ಕಾರವಾರದಲ್ಲಿ ರಭಸದ ಮಳೆ ಸುರಿಯಿತು. ಭಟ್ಕಳ, ಹೊನ್ನಾವರದಲ್ಲಿ ಸಹ ಭಾರೀ ಮಳೆ ಸುರಿದಿದ್ದು, ಕುಮಟಾ ಶಿರಸಿ ರಾಜ್ಯ ಹೆದ್ದಾರಿ ದೇವಿಮನೆ ಘಟ್ಟದಲ್ಲಿ ಆಲದ ಮರ ಬಿದ್ದು ಒಂದು ಗಂಟೆ ಸಂಚಾರ ಅಸ್ತವ್ಯಸ್ತವಾಗಿತ್ತು. ಕಾರವಾರದ ಸೀಬರ್ಡ್‌ ನೌಕಾನೆಲೆ ಅರ್ಗಾ ಗೇಟ್ನಿಂದ ಚೆಂಡಿಯಾ ಅರ್ಗಾ ಭಾಗದ ರಾಷ್ಟ್ರೀಯ ಹೆದ್ದಾರಿ -66ರಲ್ಲಿ ಮಳೆ ನೀರು ತುಂಬಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಸಂಜೆ ವೇಳೆಗೆ ಹೆದ್ದಾರಿ ಮೇಲಿನ ನೀರು ಕಡಿಮೆಯಾದ ಕಾರಣ ಸಂಚಾರ ಯಥಾಸ್ಥಿತಿಗೆ ಬಂದಿದೆ. ಕಾರವಾರದ ಬಹುತೇಕ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿತ್ತು. ಮಳೆ ಸಂಜೆ ಕಡಿಮೆಯಾದ ಕಾರಣ ಪರಿಸ್ಥಿತಿ ಹತೋಟಿಗೆ ಬಂತು.

ನಗರದ ಶಿರವಾಡ ಸಮೀಪದ ನಾರಗೇರಿ ಪ್ರದೇಶದಲ್ಲಿ ವಿದ್ಯುತ್‌ ಕಂಬದಲ್ಲಿ ವಿದ್ಯುತ್‌ ಪ್ರವಹಿಸಿ 2 ದನಗಳು ಮೃತಪಟ್ಟಿವೆ.

ಕಾರವಾರದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಮಳೆಯ ವೈಭವ ಮರುಕಳಿಸಿದೆ. ಸೀಬರ್ಡ್‌ ನೌಕಾನೆಲೆ ಪ್ರದೇಶದಲ್ಲಿ ದೊಡ್ಡ ಕಾಲುವೆ ಇದ್ದು, ಅದರಲ್ಲಿ ಮಣ್ಣು ತುಂಬಿದ ಕಾರಣ ಮಳೆಯ ನೀರು ದೊಡ್ಡ ಹಳ್ಳದ ಮೂಲಕ ಹರಿದು ಸಮುದ್ರ ಸೇರದೆ ಸಮಸ್ಯೆ ಉಂಟಾಗಿದೆ. ನೌಕಾನೆಲೆ ಎರಡನೇ ಹಂತದ ಕಾಮಗಾರಿಗಳ ಕಾರಣ ಕಾಲುವೆ ಅಲ್ಲಲ್ಲಿ ಮುಚ್ಚಲಾಗಿದೆ. ಇದು ಸಮಸ್ಯೆಗೆ ಕಾರಣ ಎಂದು ಅರ್ಗಾ, ಚೆಂಡಿಯಾ ಭಾಗದ ಜನತೆ ಆರೋಪಿಸುತ್ತಾರೆ. 2009ರಲ್ಲಿ ಮೋಡಸ್ಫೋಟವಾಗಿ ಚೆಂಡಿಯಾ, ಅರ್ಗಾ ಮಳೆಯ ನೀರಲ್ಲಿ ಮುಳುಗಿ ಈರ್ವರು ಮೃತಪಟ್ಟಿದ್ದರು. ಅಲ್ಲದೇ ಕಡವಾಡ ಬಳಿ ಗುಡ್ಡ ಜರಿದು ಎಂಟತ್ತು ಮನೆಗಳು ಮಣ್ಣಲ್ಲಿ ಮುಚ್ಚಿ 16 ಜನ ಜೀವಂತ ಸಮಾಯಾಗಿದ್ದರು. ಈ ಕಹಿ ಘಟನೆ ನೆನಪಿಸುವಂತೆ ಇಂದು ಸತತ ಮಳೆ ಸುರಿಯಿತು.

ಸಂಜೆಯ ವೇಳೆಗೆ ಮಳೆ ಕಡಿಮೆಯಾದ ಕಾರಣ ಜನರು ನಿಟ್ಟುಸಿರು ಬಿಟ್ಟರು. ಮೋಡ ಸ್ಫೊಧೀಟ ಎಲ್ಲಿ ಮೇಘ ಸ್ಫೊಧೀಟವನ್ನು ತರಲಿದೆಯೋ ಎಂಬ ಆತಂಕ ಜನರಲ್ಲಿ ಮನೆ ಮಾಡಿತ್ತು. ಇನ್ನು ಎರಡು ದಿನ ಮಳೆಯ ಕಾರಣ ಆತಂಕ ಸಾರ್ವಜನಿಕರ ಮನದ ಮೂಲೆಯಲ್ಲಿ ಕಾಡುತ್ತಲೇ ಇದೆ.

ರೆಡ್‌ ಅಲರ್ಟ್‌ ಘೋಷಣೆ: ಕರಾವಳಿಯಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ. ಎಚ್ಚರಿಕೆಯಿಂದ ಇರಬೇಕು. ಜನತೆ ಮತ್ತು ಸಮುದ್ರ ದಂಡೆಯಲ್ಲಿ ಹೆಚ್ಚು ಸಂಚರಿಸಬಾರದು. ದಡದ ಮೀನುಗಾರಿಕೆ ಸಹ ಮಾಡುವುದು ಬೇಡ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಜಿಲ್ಲಾಡಳಿತ ಸಹ ಸಾರ್ವಜನಿಕರಿಗೆ ಮಳೆಯ ಕುರಿತು ಸೂಚನೆ ನೀಡಿದೆ. ಕಾಳಿ ನದಿ ಅಣೆಕಟ್ಟುಗಳ ಹಿನ್ನೀರು ಪ್ರದೇಶದಲ್ಲಿ ಹೆಚ್ಚು ಮಳೆಯಾಗಿಲ್ಲ. ಹಾಗಾಗಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಹೊರಬಿಡುತ್ತಿಲ್ಲ ಎಂದು ಕೆಪಿಸಿ ತಿಳಿಸಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.