ಆ.15ರಂದು ಪೌರಕಾರ್ಮಿಕರಿಗೆ ಗೃಹಭಾಗ್ಯ

Team Udayavani, Jul 5, 2019, 9:33 AM IST

uk-tdy-3..

ಕಾರವಾರ: ಜಿಲ್ಲಾಧಿಕಾರಿ ಡಾ| ಹರೀಶಕುಮಾರ್‌ ಪೌರಕಾರ್ಮಿಕರ ಜತೆ ಮಾತನಾಡಿದರು.

ಕಾರವಾರ: ಬರುವ ಆ.15 ರಂದು ಕಾರವಾರ ನಗರಸಭೆಯ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯ ಮನೆಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ.

ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ಕಾರವಾರದ ಪಂಚಋಷಿವಾಡದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ ನಗರಸಭೆಯಿಂದ ನಿರ್ಮಿಸಿರುವ ನಾಲ್ಕು ಅಂತಸ್ತುಗಳ 16 ಸುಸಜ್ಜಿತ ಮನೆಗಳ ಕಟ್ಟಡ ಕಾಮಗಾರಿ ವೀಕ್ಷಿಸಿದ ಅವರು, ಕಾರವಾರ ನಗರಸಭೆಯ 36 ಪೌರ ಕಾರ್ಮಿಕರಿಗೆ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಂಡುವ ಯೋಜನೆಯಲ್ಲಿ ಈಗಾಗಲೇ 16 ಮನೆಗಳು ಅತ್ಯಂತ ಗುಣಮಟ್ಟದಲ್ಲಿ ನಿರ್ಮಾಣವಾಗಿದ್ದು ಆ.15 ರಂದು ಪೌರಕಾರ್ಮಿಕರಿಗೆ ವಿತರಿಸಲಾಗುವುದು ಎಂದು ಹೇಳಿದರು.

ಪ್ರತಿ ಮನೆಗೆ 11.50 ಲಕ್ಷ ರೂ.ನಂತೆ ಮನೆಗಳನ್ನು ನಿರ್ಮಿಸಲಾಗಿದ್ದು ಇದಕ್ಕಾಗಿ 2.55 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬಾಕಿ ಇರುವ ಪೌರ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿಕೊಡಲು ಬರುವ ಆ.15 ರೊಳಗೆ ಭೂಮಿ ಪೂಜೆ ಮಾಡಲಾಗುವುದು. 2020ರ ಆ.15 ರೊಳಗೆ ಅವರಿಗೂ ಮನೆಗಳನ್ನು ವಿತರಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರಿಗೆ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಡುವ ಸರ್ಕಾರದ ಚಿಂತನೆಗೆ ರಾಜ್ಯದಲ್ಲೇ ಮೊದಲ ಬಾರಿಗೆ ಕಾರವಾರದಲ್ಲಿ ಸರ್ಕಾರದ ಆಶಯ ಈಡೇರಿದಂತಾಗಿದೆ. ಕಾರವಾರ ನಗರಸಭೆ ಅಧಿಕಾರಿಗಳು ಈ ಬಗ್ಗೆ ಆಸಕ್ತಿ ವಹಿಸಿ ಗುಣಮಟ್ಟದ ಮನೆಗಳನ್ನು ಎಲ್ಲದಕ್ಕೂ ಅನುಕೂಲವಾಗುವ ಹಾಗೆ ಹೆದ್ದಾರಿ ಪಕ್ಕದಲ್ಲಿಯೇ ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯ ಎಂದರು.

ಪೌರಕಾರ್ಮಿಕರ ಜೊತೆ ಮಾತನಾಡಿದ ಜಿಲ್ಲಾಧಿಕಾರಿ: ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪೌರ ಕಾರ್ಮಿಕರಿಗೆ ವಸತಿ ಭಾಗ್ಯ ಕಲ್ಪಿಸುವ ಯೋಜನೆ ರೂಪಿಸಿ, ರಾಜ್ಯದ ಹಲವು ನಗರಸಭೆಗಳಿಗೆ ಹಣ ಮಂಜೂರು ಮಾಡಿದ್ದರು. ಕಾರವಾರ ನಗರಸಭೆಗೆ 32 ಕಾರ್ಮಿಕರಿಗೆ ಮನೆಗಳ ಭಾಗ್ಯ ಲಭ್ಯವಾಗಿತ್ತು. ಈ ಪೈಕಿ 16 ಕಾರ್ಮಿಕರ ಕನಸು ನನಸಾಗುತ್ತಿದ್ದು, ಉಳಿದ ಕಾರ್ಮಿಕರಿಗೆ ವಸತಿ ಯೋಜನೆ ಜಾರಿಗೊಳಿಸಲು ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಆಸಕ್ತಿ ವಹಿಸಿದ್ದು, ಗುರುವಾರ ಹಲವು ಪೌರಕಾರ್ಮಿಕರ ಜೊತೆ ಖುದ್ದಾಗಿ ಮಾತನಾಡಿದರು. ಇದು ಹಲವು ಪೌರಕಾರ್ಮಿಕರ ನೈತಿಕ ಶಕ್ತಿ ಹೆಚ್ಚಿಸಿತು. ನಗರಸಭೆ ಆಯುಕ್ತ ಎಸ್‌.ಯೋಗೇಶ್ವರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮೋಹನ್‌ರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.