ಮೀನಿನ ಲಾರಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Aug 27, 2021, 4:14 PM IST
ಕುಮಟಾ: ಮೀನು ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಾಲೂಕಿನ ದೀವಗಿ ಸಮೀಪದ ಹರಕಡೆಯಲ್ಲಿ ಶುಕ್ರವಾರ ನಡೆದಿದೆ.
ಬೈಕ್ ಸವಾರ ರಾಯಚೂರಿನ ಅವಿನಾಶ ಮುರುಳಿಕೃಷ್ಣ(21) ಹಾಗೂ ಕೊಪ್ಪಳದ ಸತ್ಯ ಪ್ರಮೋದ್ (21). ಮುರುಡೇಶ್ವರದಿಂದ ದಾಂಡೇಲಿಗೆ ಪ್ರವಾಸಕ್ಕೆಂದು ತೆರಳುತ್ತಿದ್ದ ವೇಳೆ ಎದುರಿಗೆ ಬಂದು ಮೀನಿನ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಸೆಪ್ಟೆಂಬರ್ 1 ರಿಂದ ದಿನಕ್ಕೆ 5 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ : ಬೊಮ್ಮಾಯಿ
ಅವಿನಾಶ ಮುರುಳಿಕೃಷ್ಣನ ತಲೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಇನ್ನೋರ್ವ ಸತ್ಯ ಪ್ರಮೋದ್ ನ ಬೆನ್ನು, ತಲೆ ಹಾಗೂ ಕೈ ಕಾಲಿಗೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪಿ.ಎಸ್.ಐ ರವಿ ಗುಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಮಟಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ