ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯ

Team Udayavani, May 4, 2019, 4:39 PM IST

nc-4

ಜೋಯುಡಾ: ತಾಲೂಕಿನ ಕ್ಯಾಸ್ಟಲ್ರಾಕ್‌ ಗ್ರಾಪಂ ವ್ಯಾಪ್ತಿಯ ಜವಳಿ ಹಾಗೂ ಸುತ್ತಲ ಗ್ರಾಮಸ್ಥರಿಂದ ಕುಡಿಯುವ ನೀರಿಗಾಗಿ ಗ್ರಾಪಂಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಜವಳಿ ಗ್ರಾಮದಲ್ಲಿ ಸುಮಾರು 150 ಮನೆಗಳಿದ್ದು, 500ಕ್ಕೂ ಹೆಚ್ಚು ಜನರಿದ್ದಾರೆ. ಇಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದ ಬಗ್ಗೆ ಅನೇಕ ಸಾರಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದರೂ ನೀರು ಸರಬರಾಜು ಆಗದೆ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ನಡೆದಿತ್ತು. ಈ ಬಗ್ಗೆ ಸ್ಥಳೀಯ ಗ್ರಾ.ಪಂ ಸದಸ್ಯರು ಕೂಡಾ ಸಮಸ್ಯೆ ಪರಿಹಾರಕ್ಕೆ ಬಾರದೆ ಸಮಸ್ಯೆ ಉದ್ಭವಗೊಂಡು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಪಿಡಿಒ ಯೋಗಿತಾ ದೇಸಾಯಿ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ, ಗ್ರಾಮಸ್ಥರೊಂದಿಗೆ ಚರ್ಚಿಸಿದಾಗ ಗ್ರಾಮದಲ್ಲಿ ಗ್ರಾ.ಪಂ.ದಿಂದ ನೇಮಕಗೊಂಡ ವಾಟರ್‌ಮನ್‌ನಿಂದಾಗಿ ಈ ಸಮಸ್ಯೆ ಉದ್ಭವವಾಗಿದೆ ಎನ್ನುವುದು ತಿಳಿದಿದೆ. ನೀರಿನ ಕೊರತೆ ಇಲ್ಲ. ಆದರೆ ಸಾರ್ವಜನಿಕರಿಗೆ ಪ್ರತಿನಿತ್ಯ ನೀರು ಬಿಡುವ ಕೆಲಸಮಾಡದ ವಾಟರ್‌ವೆುನ್‌ನಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದ್ದನ್ನು ಮನಗಂಡ ಅಕಾರಿಗಳು ಆತನಿಗೆ ಥರಾಟೆ ತೆಗೆದುಕೊಂಡು ಸಮಯಕ್ಕೆ ಸರಿಯಾಗಿ ನೀರು ಬಿಡುವ ವ್ಯವಸ್ಥೆ ಮಾಡದಿದ್ದರೆ, ಕೆಲಸದಿಂದ ತೆಗೆದುಹಾಕುವುದಾಗಿ ಪಿಡಿಒ ಎಚ್ಚರಿಕೆ ನೀಡಿದ್ದು, ನಂತರ ಸಾರ್ವಜನಿಕರು ಪ್ರತಿಭಟನೆ ಹಿಂಪಡೆದಿದ್ದಾಗಿ ತಿಳಿದುಬಂದಿದೆ.

ಪಾಯಸವಾಡಿ-ಬರಲಕೋಡ ನೀರಿಗಾಗಿ ಹಾಹಾಕಾರ: ಇದೇ ಗ್ರಾ.ಪಂ ವ್ಯಾಪ್ತಿಯ ಪಾಯಸವಾಡಿಯಲ್ಲೂ ನೀರಿಗಾಗಿ ಹಾಹಾಕಾರ ಎದ್ದಿದ್ದು, ಇಲ್ಲಿ ಈಗಾಗಲೇ ನಿರ್ಮಿಸಿದ ನೀರಿನ ಯೋಜನೆಯಿಂದ ಜನಸಾಮಾನ್ಯರಿಗೆ ನೀರು ಸಿಗದೆ ನೀರಿಗಾಗಿ ಪರದಾಡುವಂತೆ ಮಾಡಿದೆ. ಬರಲಕೋಡ ಹಾಗೂ ಪಾಯಸವಾಡಿ ಗ್ರಾಮದಲ್ಲಿ ಸುಮಾರು 500 ರಿಂದ 550 ಮನೆಗಳಿವೆ. ಸಾವಿರಾರು ಜನಸಂಖ್ಯೆ ಇರುವ ಈ ಗ್ರಾಮಗಳಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ತಾಲೂಕಾ ಆಡಳಿತ ಹಾಗೂ ಕುಡಿಯುವ ನೀರಿನ ಇಲಾಖೆ ವೈಫಲ್ಯಕಂಡಿದೆ.

ಇಲ್ಲಿನ ನೀರಿನ ಸಮಸ್ಯೆ ಬಗ್ಗೆ ತಾಲೂಕಿನ ಕುಡಿಯುವ ನೀರು ಹಾಗೂ ಸರಬರಾಜು ಇಲಾಖೆ ಅಧಿಕಾರಿಗಳಿಗೆ, ಗ್ರಾ.ಪಂ. ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ನಿರ್ಲಕ್ಷಿಸಿದ ಅಧಿಕಾರಿಗಳ ಹೊಣೆಗೇಡಿತನದ ಪರಿಣಾಮ ಈಗ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮುಂದಿನ ಒಂದು ವಾರದೊಳಗಾಗಿ ಕೂಡಲೇ ಪರಿಹಾರ ಕೈಗೊಳ್ಳದಿದ್ದರೆ ಗ್ರಾ.ಪಂ.ಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಜವಳಿ ಗ್ರಾಮದಲ್ಲಿ ನೀರಿನ ಸಂಗ್ರಹ ಇದ್ದರೂ ಇದನ್ನು ಸರಿಯಾಗಿ ಪೂರೈಸದೇ ಕುಡಿಯುವ ನೀರಿನ ಸಮಸ್ಯೆಗೆ ಕಾರಣವಾಗಿದ್ದರೆ, ಪಾಯಸವಾಡಿ ಹಾಗೂ ಬರಲಕೋಡನಲ್ಲಿ ನೀರಿನ ವ್ಯವಸ್ಥೆ ಮಾಡುವಲ್ಲಿ ತಾಲೂಕು ಆಡಳಿತ ವೈಫಲ್ಯಕಂಡಿದೆ. ಕೂಡಲೇ ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಬೇಕು.
• ಗುರಪ್ಪ ಹಣಬರ,ಬಿಜೆಪಿ ಯುವ ಮುಖಂಡ ಅಖೇತಿ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.