ಹೈನು ಹೆಚ್ಚಳವಾದ್ರೂ ಬಾಡಿಗೆ ಕಟ್ಟೋದು ತಪ್ಪಿಲ್ಲ!

•ಎಚ್ಚೆತ್ತುಕೊಳ್ಳಲಿ ಸರಕಾರ•ಸೋರುವ ಕಟ್ಟಡದಲ್ಲಿ ಪಶು ಆಹಾರ ಸಂಗ್ರಹಣೆ

Team Udayavani, Jun 11, 2019, 2:16 PM IST

Udayavani Kannada Newspaper

ಶಿರಸಿ: ಕ್ಷೀರ ಉತ್ಪಾದನೆಯಲ್ಲಿ ತನ್ನದೇ ಆದ ದಾಪುಗಾಲು ಇಡುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಸ್ವಂತ ಕಟ್ಟಡವೇ ಇಲ್ಲ. ಕಳೆದ ಮೂರು ದಶಕಗಳಿಂದಲೂ ಬಾಡಿಗೆ ಕಟ್ಟಡದಲ್ಲೇ ದಿನಕ್ಕೆರಡು ಬಾರಿ ತೆರೆಯುತ್ತಿದೆ. ಬಹುತೇಕ ಹಾಲು ಸಂಘಗಳಿಗೆ ಸ್ವಂತ ಕಟ್ಟಡ ಗಗನ ಕುಸುಮವೇ ಆಗಿದೆ.

ಜಿಲ್ಲೆಯಲ್ಲಿ 241 ಸಹಕಾರಿ ಹಾಲು ಉತ್ಪಾದಕರ ಸಂಘಗಳಿವೆ. ಅವುಗಳಲ್ಲಿ ಕೇವಲ 60 ಸಂಘಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದ 181 ಸಂಘಗಳು ಬಾಡಿಗೆ ಕಟ್ಟಡದಲ್ಲೇ ದಿನ ದೂಡುತ್ತಿವೆ. ಸಂಘದ ಸಹಕಾರಿಗಳಿಗೆ ಸ್ವಂತ ಕಟ್ಟಡ ಹಾಗೂ ಸ್ಥಳ ಎರಡೂ ಗಗನ ಕುಸುಮವೇ ಆಗಿದೆ.

ಧಾರವಾಡ ಹಾಲು ಒಕ್ಕೂಟ ವ್ಯಾಪ್ತಿಗೆ ಸೇರಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಲಿನ ಉತ್ಪನ್ನಗಳ ಗಣನೀಯ ಏರಿಕೆ ಆಗುತ್ತಿದೆ. ಇದಕ್ಕಾಗಿ ಕೇವಲ 80ರಷ್ಟಾಗಿದ್ದ ಸಂಘಗಳು ಕಳೆದ ದಶಕದಿಂದೀಚೆಗೆ ಏರಿಕೆಯೂ ಆಗಿದೆ. 12-13 ಸಾವಿರ ಲೀ. ಉತ್ಪಾದನೆಗೆ ತತ್ವಾರ ಕಾಣುತ್ತಿದ್ದ ಹಾಲು ಇಂದು 40 ಸಾವಿರ ಲೀ. ದಾಟಿದೆ.

ಇವುಗಳನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ ದಿನಕ್ಕೆರಡು ಸಲ ಒಕ್ಕೂಟಕ್ಕೆ ನೀಡುವ ಹಾಲು ಸಂಘಗಳಿಗೆ ಮಾತ್ರ ಸ್ವಂತ ಕಟ್ಟಡ ಹೊಂದಿಲ್ಲ. ಜೊತೆಗೆ ಸರಕಾರದ ಯಾವುದೇ ಅನುದಾನ ದೊರೆತೂ ಇಲ್ಲ. ಹೀಗಾಗಿ ನೂರಾರು ಸಂಘಗಳು ಇನ್ನೂ ಸಂಘ ಸಂಸ್ಥೆಗಳ ಬಾಡಿಗೆ ಕಟ್ಟಡದಲ್ಲಿ ದಿನ ಕಳೆಯುತ್ತಿರುವುದು ವಿಪರ್ಯಾಸವಾಗಿದೆ. ಹೆಚ್ಚಿನ ಸಂಘಗಳು ಸರಾಸರಿ ದಿನಕ್ಕೆ 200-250ಲೀಟರ್‌ ಹಾಲು ಉತ್ಪಾದನೆ ಮಾಡುತ್ತವೆ. ಕೆಲವು ಸಂಘಗಳು ಇದಕ್ಕೂ ಹೆಚ್ಚು ಕಡಿಮೆ ಉತ್ಪಾದಿಸುವುದಿದೆ. ಎಷ್ಟೇ ಉತ್ಪಾದನೆಯಾದರೂ ಸಂಘಗಳಿಗೆ ಲಾಭ ಅಷ್ಟಕಷ್ಟೇ. ಈ ಲಾಭದಲ್ಲಿ ಸಂಘಕ್ಕೆ ಬೇಕಾದ ಕಟ್ಟಡ ನಿರ್ಮಾಣ ಕಷ್ಟಸಾಧ್ಯ. ಹೀಗಿರುವಾಗ ಸರಕಾರದ ಅನುದಾನ ಕಟ್ಟಡಗಳ ನಿರ್ಮಾಣಕ್ಕೆ ದೊರೆತರೆ ಅನುಕೂಲವಾಗಲಿದೆ ಎಂಬುದು ಸಾರ್ವತ್ರಿಕ ಅಭಿಮತವಾಗಿದೆ.

ಶಿರಸಿ ತಾಲೂಕಿನಲ್ಲಿ 83ರಲ್ಲಿ 37ಕ್ಕೆ ಸ್ವಂತ ಕಟ್ಟಡ, ಸಿದ್ದಾಪುರದಲ್ಲಿ 50ಕ್ಕೆ 15, ಯಲ್ಲಾಪುರದಲ್ಲಿ 33ರಲ್ಲಿ 8ಕ್ಕೆ, ಮುಂಡಗೋಡ 26ರಲ್ಲಿ 26, ಕುಮಟಾದಲ್ಲಿ ಏಳಕ್ಕೆ ಏಳು, ಭಟ್ಕಳದಲ್ಲಿ 9ಕ್ಕೆ 9, ಹೊನ್ನಾವರಲ್ಲಿ 9ಕ್ಕೆ 9, ಅಂಕೋಲಾದಲಿ 6ಕ್ಕೆ ಆರು, ಹಳಿಯಾಳದಲ್ಲಿ 18ಕ್ಕೆ ಹದನೆಂಟೂ ಕಟ್ಟಡ ಇಲ್ಲವಾಗಿದೆ.

ಹಾಲಿ ಸಂಘಗಳಲ್ಲಿ ಹಾಲಿನ ಸಂಗ್ರಹಣೆ ಜತೆಗೆ ಅವುಗಳ ಉಪಕರಣ, ಪಶು ಆಹಾರಗಳ ಚೀಲಗಳನ್ನೂ ಇಟ್ಟುಕೊಳ್ಳಬೇಕಾಗುತ್ತದೆ. ಮಾಸಿಕ ಮೀಟಿಂಗ್‌, ಕಂಪ್ಯೂಟರ್‌ ಕೂಡ ಇರುತ್ತವೆ. ಬಾಡಿಗೆ ಕಟ್ಟಡಕ್ಕೆ 250 ರೂ.ಗಳಿಂದ ಎರಡೂವರೆ ಸಾವಿರ ರೂ. ತನಕ ಮಾಸಿಕ ಬಾಡಿಗೆ ಕೊಟ್ಟೇ ಹೋಗುತ್ತದೆ. ಇದು ಒಂದು ಕಡೆ ನಷ್ಟವಾದರೆ, ಇನ್ನೊಂದು ಕಡೆ ಉಪಕರಣ, ಪಶು ಆಹಾರ ಇಟ್ಟುಕೊಳ್ಳುವ ವ್ಯವಸ್ಥಿತ ಗೋದಾಮೂ ಇಲ್ಲದಂತಾಗುತ್ತದೆ. ಸ್ವಂತ ಬಂಡವಾಳ ಬಳಸಿ ಸಂಘದ ಕಟ್ಟಡ ಸ್ಥಾಪಿಸಿಕೊಳ್ಳುವಷ್ಟು ಸಿರಿವಂತರಾಗದ ಕಾರಣ ಸಂಘಗಳಿಗೆ ಸರಕಾರದ ನೆರವು ಅಗತ್ಯವಾಗಿದೆ.

•ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.