ಜೆಡಿಎಸ್‌ನಿಂದ ಜನತಾ ಜಲಧಾರೆ ಕಾರ್ಯಕ್ರಮ

ಜಲಸಂಪನ್ಮೂಲದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ವಿನೂತನ ಆಂದೋಲನ ಆರಂಭ

Team Udayavani, Apr 22, 2022, 10:02 AM IST

4

ಸಿದ್ದಾಪುರ: ಈ ನಾಡಿನ ಜಲಸಂಪನ್ಮೂಲದ ಕುರಿತಾಗಿ ಸಮರ್ಪಕ ಮಾಹಿತಿ, ಅರಿವು ಹೊಂದಿದ ಅಗ್ರಗಣ್ಯರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪ್ರಮುಖರು. ಅವರಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಜಲಸಂಪನ್ಮೂಲದ ಬಳಕೆ, ನಿರ್ವಹಣೆ ಬಗ್ಗೆ ಅಪಾರ ಜ್ಞಾನ ಹೊಂದಿದವರು. ಅವರ ನೇತೃತ್ವದಲ್ಲಿ ಜಾತ್ಯತೀತ ಜನತಾದಳವು ನಮ್ಮ ರಾಜ್ಯದ ಜಲಸಂಪನ್ಮೂಲದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಅದರ ಸಮರ್ಪಕ ನಿರ್ವಹಣೆ ಮೂಲಕ ಸಮೃದ್ಧ ಹಾಗೂ ಸ್ವಾಭಿಮಾನಿ ಕರ್ನಾಟಕ ಕಟ್ಟಲು ಜನತಾ ಜಲಧಾರೆ ಮೂಲಕ ಮುಂದಾಗಿದ್ದಾರೆ ಎಂದು ಜೆಡಿಎಸ್‌ ಧುರೀಣ ಡಾ| ಶಶಿಭೂಷಣ ಹೆಗಡೆ ದೊಡ್ಮನೆ ಹೇಳಿದರು.

ಅವರು ಗೋಳಿಮಕ್ಕಿ ಸಮೀಪದ ಅತ್ತಿಸವಲಿನಲ್ಲಿ ಜಾತ್ಯತೀತ ಜನತಾದಳ ಆಯೋಜಿಸಿದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಪಾರ ಜಲಸಂಪತ್ತಿದ್ದರೂ ನೀರಾವರಿ ಸೌಲಭ್ಯಗಳಿಂದ ವಂಚಿತವಾದ ರಾಜ್ಯ ನಮ್ಮದು. ನಮ್ಮಲ್ಲಿ ಕೃಷ್ಣಾ, ಕಾವೇರಿ ಮುಂತಾದ ದೊಡ್ಡ ನದಿಗಳು, ಜಿಲ್ಲೆಯಲ್ಲಿ ಕಾಳಿ, ಶರಾವತಿ, ಅಘನಾಶಿನಿಯಂಥ 5 ನದಿಗಳು ಹರಿದಿದ್ದರೂ ಅವುಗಳ ಸಮರ್ಪಕ ಬಳಕೆ ಆಗುತ್ತಿಲ್ಲ. ಅತಿ ಹೆಚ್ಚು ಮಳೆ ಬೀಳುವ ಮಲೆನಾಡಿನಲ್ಲಿ ಕಣ್ಣೆದುರು ಹರಿಯುವ ನದಿಗಳಲ್ಲಿ ನೀರಿದ್ದರೂ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಎದುರಾಗುತ್ತದೆ. ಕೃಷಿಗೆ ನೀರಿನ ಬಳಕೆ ಸೌಲಭ್ಯ ಇರದ ಕಾರಣ ಕೃಷಿ ಕುಂಠಿತವಾಗುತ್ತಿದೆ ಎಂದರು.

ಈ ಯಾತ್ರೆಯ ಉದ್ದೇಶ ಕೃಷಿ ಮತ್ತು ಕುಡಿಯುವ ನೀರಿನ ಬಳಕೆಗೆ ಈ ಜಲಸಂಪನ್ಮೂಲಗಳ ಬಳಕೆಯನ್ನು ಯಾವ ರೀತಿ ಮಾಡಬಹುದು ಎನ್ನುವದನ್ನು ಜನತೆಗೆ ತಲುಪಿಸುವುದಾಗಿದೆ ಎಂದರು. ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಗಣಪಯ್ಯ ಗೌಡ ಮಾತನಾಡಿ ರಾಜ್ಯದ 16 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉದ್ಘಾಟನೆಗೊಂಡ ಜನತಾ ಜಲಧಾರೆ ಸಂಕಲ್ಪ ಯಾತ್ರೆ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದು ಜನರಲ್ಲಿ ಜಾಗೃತಿ ಉಂಟು ಮಾಡಲಾಗುತ್ತಿದೆ ಎಂದರು.

ತಾಲೂಕಾಧ್ಯಕ್ಷ ಕೆ.ಎಂ. ಹೆಗಡೆ, ಕಾರ್ಯಾಧ್ಯಕ್ಷ ಲಕ್ಷ್ಮಣ ನಾಯ್ಕ ಬೇಡ್ಕಣಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸತೀಶ ಹೆಗಡೆ ಬೈಲಳ್ಳಿ, ಪದಾಧಿಕಾರಿಗಳಾದ ಶ್ರೀಧರ ಕೊಂಡ್ಲಿ, ಮೌಲಾ ಸಾಬ್‌, ಜಿಲ್ಲಾ ಪ್ರಮುಖರಾದ ವಿ.ಎಂ. ಭಂಡಾರಿ, ರಮೇಶ ನಾಯ್ಕ, ಮುತ್ತಣ್ಣ ಸಂಗೂರಮಠ, ತುಕಾರಾಂ ಮುಂತಾದವರಿದ್ದರು.

ಸಂಗಮದಿಂದ ಜಲ ಸಂಗ್ರಹ: ಜಾತ್ಯತೀತ ಜನತಾದಳ ಆಯೋಜಿಸಿದ ಜನತಾ ಜಲಧಾರೆ ಸಂಕಲ್ಪ ಯಾತ್ರೆಯನ್ನು ಕಾನಸೂರು ಸಮೀಪದ ಬಾಳೂರಿನಲ್ಲಿ ಸ್ವಾಗತಿಸಲಾಯಿತು. ಅಲ್ಲಿನ ಅಘನಾಶಿನಿ ಮತ್ತು ಶಾಲ್ಮಲಾ ನದಿಗಳ ಸಂಗಮದಲ್ಲಿ ನದಿಯ ಮಧ್ಯೆ ನಿರ್ಮಿಸಲಾದ ಈಶ್ವರ ಲಿಂಗಕ್ಕೆ ಪೂಜೆ ಸಲ್ಲಿಸಿ, ಸಂಗಮದ ನೀರನ್ನು ಸಂಗ್ರಹಿಸಲಾಯಿತು.

ಜಲಕುಂಭದಲ್ಲಿ ಡಾ|ಶಶಿಭೂಷಣ ಹೆಗಡೆ, ಗಣಪಯ್ಯ ಗೌಡ ಮುಂತಾದವರು ಸಂಗಮದ ನೀರನ್ನು ಸಂಗ್ರಹಿಸಿದರು. ತಾಲೂಕಾಧ್ಯಕ್ಷ ಕೆ.ಎಂ. ಹೆಗಡೆ, ಕಾರ್ಯಾಧ್ಯಕ್ಷ ಲಕ್ಷ್ಮಣ ನಾಯ್ಕ ಬೇಡ್ಕಣಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸತೀಶ ಹೆಗಡೆ ಬೈಲಳ್ಳಿ, ಪದಾಧಿಕಾರಿಗಳಾದ ಶ್ರೀಧರ ಕೊಂಡ್ಲಿ, ಮೌಲಾಸಾಬ್‌, ಅನಂತ ಗೌಡ, ಜಿಲ್ಲಾ ಪ್ರಮುಖರಾದ ವಿ.ಎಂ. ಭಂಡಾರಿ, ರಮೇಶ ನಾಯ್ಕ, ಮುತ್ತಣ್ಣ ಸಂಗೂರಮಠ, ತುಕಾರಾಂ, ಮಿರ್ಜಾನಕರ್‌ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.