ವಾಯುಭಾರ ಕುಸಿತ: ಉಕ್ಕೇರಿದ ಅಲೆಗಳು


Team Udayavani, Oct 11, 2018, 5:30 PM IST

11-october-22.gif

ಕಾರವಾರ: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಇಲ್ಲಿನ ಅರಬ್ಬಿ ಸಮುದ್ರದಲ್ಲಿ ಬುಧವಾರ ಭಾರೀ ಗಾತ್ರದ ಅಲೆಗಳು ದಂಡೆಗೆ ಅಪ್ಪಳಿಸಿದವು. ಹೀಗಾಗಿ ಮೀನುಗಾರಿಕೆ ಸಾಧ್ಯವಾಗಲಿಲ್ಲ.

ಬೆಳಗ್ಗೆ ಹತ್ತು ಗಂಟೆ ಬಳಿಕ ಸಮುದ್ರದಲ್ಲಿ ಏಕಾಏಕಿ ಸುಮಾರು 4ರಿಂದ 5 ಮೀಟರ್‌ಗಿಂತ ಹೆಚ್ಚಿನ ಎತ್ತರದ ಅಲೆಗಳು ಎದ್ದು, ಮೀನುಗಾರರಲ್ಲಿ ಆತಂಕಕ್ಕೆ ಕಾರಣವಾಯಿತು. ಭಾರಿ ಪ್ರಮಾಣದಲ್ಲಿ ಅಲೆಗಳು ತೀರಕ್ಕೆ ಬಡಿಯುತ್ತಿದ್ದಂತೆ ಸಾಂಪ್ರದಾಯಿಕ ಮೀನುಗಾರರು ಕಡಲತೀರದ ಮೇಲೆ ನಿಲ್ಲಿಸಿಡಲಾಗಿದ್ದ ತಮ್ಮ ದೋಣಿ, ಬಲೆ, ಪರಿಕರಗಳನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದರು. ಮುನ್ನೆಚ್ಚರಿಕೆ ನಡುವೆಯೂ ಕೆಲ ಆಳ ಸಮುದ್ರ ಮೀನುಗಾರಿಕೆ ಬೋಟುಗಳು ಮೀನುಗಾರಿಕೆಗೆ ತೆರಳಿದ್ದವು. ರವೀಂದ್ರನಾಥ್‌ ಕಡಲತೀರದ ರಾಕ್‌ಗಾರ್ಡನ್‌, ದಿವೇಕರ ಕಾಲೇಜು ಹಾಗೂ ಮರೀನ್‌ ಬಯೋಲೊಜಿ ಹಿಂಬದಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಕಡಲು ಉಕ್ಕೇರಿ ಭಾರಿ ಅಲೆಗಳು ದಂಡೆಗೆ ಅಪ್ಪಳಿಸಿದವು.

ಇಂಡೋನೇಷ್ಯಾದಲ್ಲಿ ಉಂಟಾದ ಭೂಕಂಪ ಹಾಗೂ ದೇಶದ ಪೂರ್ವ ಕರಾವಳಿಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಒತ್ತಡದಿಂದ ಪಶ್ಚಿಮ ಹಾಗೂ ಪೂರ್ವ ಕರಾವಳಿಯಲ್ಲಿ ಭಾರಿ ಮಳೆ, ಬಿರುಗಾಳಿ ಹಾಗೂ ಸುನಾಮಿಯಂತಹ ಅಲೆಗಳು ಏಳುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಇತ್ತೀಚೆಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು. ಬುಧವಾರ ಕರ್ನಾಟಕದ ಕರಾವಳಿಯ ಮಂಗಳೂರು, ಕೇರಳ ಹಾಗೂ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿ ವಾಯುಭಾರ ಕುಸಿತದ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ. ಜಿಲ್ಲೆಯಲ್ಲಿ ಸಾಧಾರಣವಾಗಿ ಅಲೆಗಳ ಆರ್ಭಟ ಬಿಟ್ಟರೆ, ಹೆಚ್ಚಿನ ಪರಿಣಾಮ ಆಗಿಲ್ಲ. ಜಿಲ್ಲೆಯ ಅರಬ್ಬಿ ಸಮುದ್ರದ ಆಳದಲ್ಲಿ ಕಡಲ ಅಲೆಗಳ ಅಧ್ಯಯನಕ್ಕಾಗಿ ಅಳವಡಿಸಲಾಗಿರುವ ಪ್ಯಾರಗೋಲ್‌ನ ಎಂಟೆನಾ ಕಟ್‌ ಆಗಿರುವುದರಿಂದ ಸರಿಯಾದ ಮಾಹಿತಿ ಲಭ್ಯವಿಲ್ಲವಾಗಿತ್ತು. ಈಗ ಅದರ ದುರಸ್ತಿ ಕಾರ್ಯ ನಡೆಸಲಾಗಿದೆ ಎಂದು ರಾಠೊಡ್‌ ಮಾಹಿತಿ ನೀಡಿದರು. 

ಗುರುವಾರ ಕೂಡ 8 ಮೀಟರ್‌ಗಿಂತ ಹೆಚ್ಚಿನ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ. ಭಾರಿ ಗಾಳಿಯು ದಕ್ಷಿಣದಿಂದ ಉತ್ತರದ ಕಡೆಗೆ ಚಲಿಸಲಿದೆ. ಇದು ಅಲೆಗಳ ಎತ್ತರಕ್ಕೆ ಮತ್ತಷ್ಟು ಕಾರಣವಾಗಲಿದೆ. ಈ ಬಗ್ಗೆ ಹೈದ್ರಾಬಾದ್‌ ಕೇಂದ್ರೀತ ಹವಾಮಾನ ಕೇಂದ್ರವು ಮೀನುಗಾರರಿಗೆ ಮುನ್ನೆಚ್ಚರಿಕೆ ಸಂದೇಶ ಕಳುಹಿಸಿದೆ.
 ಡಾ.ಜೆ.ಎಲ್‌.ರಾಠೊಡ್‌, ಮೆರೀನ್‌
ಬಯೋಲಾಜಿ ಪ್ರಾಧ್ಯಾಪಕ, ಕಾರವಾರ 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.