ಚಟುವಟಿಕೆಯ ಕೇಂದ್ರವಾದ ರಾಜಭವನ 

Team Udayavani, May 17, 2018, 6:00 AM IST

b-8.jpg

ಬೆಂಗಳೂರು: ಅತಂತ್ರ ವಿಧಾನಸಭೆ ಹಿನ್ನೆಲೆಯಲ್ಲಿ ರಾಜಭವನ ಬುಧವಾರ ಇಡೀ ದಿನ ಬಿರುಸಿನ ರಾಜಕೀಯ ಚಟುವಟಿಕೆಯ ಕೇಂದ್ರವಾಗಿತ್ತು. ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯಡಿಯೂರಪ್ಪ ನೇಮಕವಾದ ಬಳಿಕ, ರಾಜಭವನಕ್ಕೆ ಬಂದ ಕೇಂದ್ರ ಸಚಿವರಾದ ಅನಂತಕುಮಾರ್‌, ಪ್ರಕಾಶ್‌ ಜಾಬ್ಡೇಕರ್‌ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ವಾಲಾ ಅವರನ್ನು ಭೇಟಿ ಮಾಡಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿತು. ಬಳಿಕ ಯಡಿಯೂರಪ್ಪ ಮಾತನಾಡಿ, ರಾಜ್ಯಪಾಲರು ಅವಕಾಶ ನೀಡುವ ನಿರೀಕ್ಷೆಯಿದ್ದು, ಸರ್ಕಾರ ರಚಿಸುವುದು ನಿಶ್ಚಿತ ಎಂದು ಹೇಳಿದರು.

ಮಧ್ಯಾಹ್ನದ ವೇಳೆಗೆ ಕೇಂದ್ರ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರು ರಾಜಭವನಕ್ಕೆ ಭೇಟಿ ನೀಡಿದರು. ಸಂಜೆ ವೇಳೆಗೆ, ಕಾಂಗ್ರೆಸ್‌, ಜೆಡಿಎಸ್‌ ನಾಯಕರ ದಂಡು ರಾಜಭವನದತ್ತ ದೌಡಾಯಿಸಿತು. ಕುಮಾರಸ್ವಾಮಿ ನೇತೃತ್ವದಲ್ಲಿ ಸಾಕಷ್ಟು ಜೆಡಿಎಸ್‌ ಶಾಸಕರು ಸಂಜೆ 5 ಗಂಟೆ ಹೊತ್ತಿಗೆ ರಾಜಭವನಕ್ಕೆ ಬಂದು ಪರೇಡ್‌ಗೆ ಯತ್ನಿಸಿದರಾದರೂ ಕುಮಾರಸ್ವಾಮಿ, ವಿಧಾನ ಪರಿಷತ್‌ ಸದಸ್ಯ ರಮೇಶ್‌ಬಾಬು ಸೇರಿದಂತೆ 10 ಮಂದಿಗಷ್ಟೇ ರಾಜ್ಯಪಾಲರ ಭೇಟಿಗೆ ಅವಕಾಶ ನೀಡಲಾಯಿತು. ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಡಿ.ಕೆ. ಶಿವಕುಮಾರ್‌ ಇತರರು ರಾಜಭವನಕ್ಕೆ ಭೇಟಿ ನೀಡಿದರು. ಪರಮೇಶ್ವರ್‌, ಕೃಷ್ಣ ಬೈರೇಗೌಡ ಸೇರಿದಂತೆ 10 ಮಂದಿ ರಾಜ್ಯಪಾಲರನ್ನು ಭೇಟಿಯಾದರು.

ರಾಜ್ಯಪಾಲರ ಭೇಟಿ ಜಂಟಿ ಹೇಳಿಕೆ ನೀಡಿದ ಡಾ.ಜಿ.ಪರಮೇಶ್ವರ್‌, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್‌ ಬೆಂಬಲಿಸಲು ನಿರ್ಣಯ
ಕೈಗೊಳ್ಳಲಾಗಿದ್ದು, ಈ ಸಂಬಂಧ ಸರ್ಕಾರ ರಚನೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ, ರಾಜಭವನದ ಎದುರು ಜಮಾಯಿಸಿದ್ದ ಜೆಡಿಎಸ್‌ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.