
ನಟ ಅನಂತ್ ನಾಗ್ ಅವರಿಗೆ ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ
Team Udayavani, Jan 8, 2023, 3:21 PM IST

ಹೊನ್ನಾವರ: ಪ್ರಖ್ಯಾತ ಹಿರಿಯ ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದರಾದ ಅನಂತ ನಾಗ್ ಇವರಿಗೆ 2023ರ ಪ್ರತಿಷ್ಠಿತ “ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ’ ಮತ್ತು ಪ್ರಸಿದ್ಧ ಸ್ತ್ರೀವೇಷಧಾರಿಗಳಾಗಿದ್ದ “ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ’ ಯಕ್ಷಗಾನದ ಕಲಾವಿದರಾದ ತಿಮ್ಮಪ್ಪ ಹೆಗಡೆ ಶಿರಳಗಿ ಇವರಿಗೆ ಎಂದು ನಾಟ್ಯೋತ್ಸವ ಸಲಹಾ ಸಮಿತಿ ಮತ್ತು ಪ್ರಶಸ್ತಿ ಆಯ್ಕೆ ಸಮಿತಿ ನಿರ್ಧರಿಸಿದೆ.
ಶಿವರಾಮ ಹೆಗಡೆ ಪ್ರಶಸ್ತಿಯು ರೂ.25 ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಮತ್ತು ಇತರ ಗೌರವಗಳನ್ನು ಒಳಗೊಂಡಿದೆ. ಗಜಾನನ ಹೆಗಡೆ ಪ್ರಶಸ್ತಿಯು ರೂ.15 ಸಾವಿರ ನಗದು, ಪ್ರಶಸ್ತಿ ಪತ್ರ, ಶಾಲು ಇತ್ಯಾದಿ ಗೌರವಗಳನ್ನು ಹೊಂದಿದೆ.
ಫೆಬ್ರವರಿ 3ರಿಂದ ಫೆಬ್ರುವರಿ 7ರವರೆಗೆ ಗುಣವಂತೆ ಯಕ್ಷಾಂಗಣದಲ್ಲಿ ನಡೆಯಲಿರುವ ಐದು ದಿನಗಳ “ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ’ದ ಸಂದರ್ಭದಲ್ಲಿ ಫೆಬ್ರವರಿ 3ರಂದು ಆಗಮಿಸುವ ಗಣ್ಯರ ಸಮ್ಮುಖದಲ್ಲಿ ಶಿವರಾಮ ಹೆಗಡೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಯನ್ನು ಫೆಬ್ರವರಿ 4ರಂದು ಆಗಮಿಸುವ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

Chikodi ಜಿಲ್ಲೆ ಘೋಷಣೆಗಾಗಿ ತೀವ್ರವಾದ ಹೋರಾಟ ಅನಿವಾರ್ಯ ಎಂದ ಸಮಿತಿ

Daredevil Mustafa ಮುಖದಲ್ಲಿ ಗೆಲುವಿನ ನಗೆ

Women cestoball ವಿಶ್ವಕಪ್ :ಮಹಿಳಾ ವಿವಿಯ ಶೃತಿ ಉತ್ತಮ ಪ್ರದರ್ಶನ

Suriname; ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಬಳಿಕ ಸುದ್ದಿ: ಯಾವುದೀ ದೇಶ ಸುರಿನಾಮ್?