ಕಿರವತ್ತಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ-ಅಪಹರಣ

ಗೌಳಿ ಸಮದಾಯದವರಿಂದ ಆಕ್ರೋಶ-ವ್ಯಾಪಕ ಪ್ರತಿಭಟನೆ ­ಬಿಜೆಪಿ ಮುಖಂಡರು-ಸದಸ್ಯರಿಂದ ಬೆಂಬಲ

Team Udayavani, Feb 9, 2021, 7:40 PM IST

kiruvatti

ಯಲ್ಲಾಪುರ: ಮಂಗಳವಾರ ಬೆಳಗಾದರೆ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ. ಆದರೆ ಮದನೂರು  ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಷಯ ಬಿಹಾರ ಮಾದರಿ ಮೀರಿಸುವ ರೀತಿಯಲ್ಲಿ ಹಲ್ಲೆ, ಅಪಹರಣ ಘಟನೆ ನಡೆದಿದೆ.

ಗ್ರಾ.ಪಂನ ಮೂವರು ಸದಸ್ಯರು ಹಾಗೂ ಒಬ್ಬ ಯುವ ಕಾರ್ಯಕರ್ತನ ಮೇಲೆ ಕಲಘಟಗಿಯಲ್ಲಿ ಹಲ್ಲೆ ನಡೆಸಿರುವ ಘಟನೆ ಬಗೆಗೆ ಗೌಳಿ ಸಮುದಾಯದವರಿಂದ ಸೋಮವಾರ ವ್ಯಾಪಕ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗಿದೆ.  ಮದನೂರು ಗ್ರಾ.ಪಂನ ಎಲ್ಲ 13 ಸದಸ್ಯರೂ ಬಿಜೆಪಿ ಬೆಂಬಲಿತರಾಗಿದ್ದು, ಅವರಲ್ಲಿ 6  ಜನರು ದನಗರ್‌ ಗೌಳಿ ಸಮುದಾಯದವರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಅ  ವರ್ಗದ ಮಹಿಳೆ ಮೀಸಲಾತಿ ಬಂದಿರುವುದರಿಂದ ತಮ್ಮ ಸಮುದಾಯದವರೇ ಅಧ್ಯಕ್ಷರಾಗಲಿ ಎಂಬ ಯೋಜನೆ ಅವರದಾಗಿತ್ತು. ಅದಕ್ಕಾಗಿ ಮರಾಠಿ ಸಮುದಾಯದ ಇನ್ನೊಬ್ಬ ಸದಸ್ಯನ ನೆರವಿನಿಂದ ಗೌಳಿ ಸಮುದಾಯದವರನ್ನೇ ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯಕ್ಕೂ ಸಮುದಾಯದವರು ಒಗ್ಗಟ್ಟಾಗಿದ್ದರು.

ತಮ್ಮ ಸಮಾಜಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಪಕ್ಷದ ಪ್ರಮುಖರಲ್ಲೂ ಈ ಮೊದಲೇ ತಿಳಿಸಿಕೊಂಡಿದ್ದರು. ಆದರೆ ಈ ಮಧ್ಯೆ ಬೇರೊಬ್ಬ ಮುಖಂಡರು ಮೂಗು ತೂರಿಸಿ ಅವರ ಸಲಹೆಯಂತೆ ಬೇರೆಯವರನ್ನು   ಅಧ್ಯಕ್ಷರನ್ನಾಗಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂಬ ವಿಷಯ ತಿಳಿದ ಬಳಿಕ ಗೌಳಿ ಸಮುದಾಯದವರು ಸದಸ್ಯರಾದ ಲಕ್ಕು ಗಾವಡೆ, ಬಾಪು ತಾಟೆ, ವಿಠು ಬೊಮ್ಮು ಶೆಳಕೆ ಅವರ ಮೇಲೆ ಒತ್ತಡ ಬರಬಾರದೆಂಬ ಹಿನ್ನೆಲೆಯಲ್ಲಿ ಅವರನ್ನು ಕಾರ್ಯಕರ್ತ ಸೋನು ಜಂಗ್ಲೆ ಅವರು ಬೇರೆಡೆ ಕರೆದೊಯ್ಯುತ್ತಿದ್ದರು. ಆ ವೇಳೆ ಕಲಘಟಗಿ ಬಳಿ ಊಟ ಮಾಡುತ್ತಿದ್ದ ವೇಳೆ ಕಿರವತ್ತಿ ಹಾಗೂ ಕಲಘಟಗಿಯ ಕೆಲವರು ಒಮ್ಮಿಂದೊಮ್ಮೆಲೇ ಬಂದು ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ವಿಠು ಶೆಳಕೆ ಹೇಳಿಕೆ ನೀಡಿದ್ದಾರೆ.

ವಿಠುu ಶೆಳಕೆ, ಬಾಪು ತಾಟೆ ಹಾಗೂ ಇವರನ್ನು ಕರೆದೊಯ್ಯುತ್ತಿದ್ದ ಕಾರ್ಯಕರ್ತ ಸೋಮು ಜಂಗ್ಲೆ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಿ, ನಂತರ ಕಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ  ಲಕ್ಕು ಗಾವಡೆ ಎಂಬಾತನಿಗೆ ಕೊಲೆ ಬೆದರಿಕೆ ಹಾಕಿ ಕಾರಿನಲ್ಲಿ ಅಪಹರಿಸಿದ್ದಾರೆ ಎಂದು ಗೌಳಿಗರು ಆರೋಪಿಸಿದ್ದಾರೆ.

ಆದರೆ ಸೋಮವಾರ ಸಂಜೆಯ ಹೊತ್ತಿಗೆ ತಾನು ಸುರಕ್ಷಿತವಾಗಿರುವ ಬಗ್ಗೆ ವಿಡಿಯೋ ಒಂದನ್ನು ಕಳಿಸಿದ್ದಾರೆ. ಗ್ರಾಪಂ ಚುನಾವಣೆಯೂ ಇಲ್ಲಿ ಬಿಹಾರ ವಾತಾವರಣ ನೆನಪಿಸುತ್ತದೆ ಎಂದು ಹಲವರು ಆಡಿಕೊಳ್ಳುವಂತೆ ಈ ಘಟನೆ ಮಾಡಿದೆ.

ಕಿರವತ್ತಿಯಲ್ಲಿ ಸೋಮವಾರ ಪ್ರತಿಭಟನೆ: ಈ ಹಲ್ಲೆ ಖಂಡಿಸಿ ಕಿರವತ್ತಿಯಲ್ಲಿ ಗೌಳಿ ಸಮುದಾಯದವರು ಸೊಮವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು. ಮಾರುತಿ ದೇವಸ್ಥಾನದ ಬಳಿಯಿಂದ ಗ್ರಾ.ಪಂವರೆಗೆ ಪ್ರತಿಭಟನೆ ನಡೆಸಿ, ಮದನೂರು ಗ್ರಾಪಂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಂದೂಡುವಂತೆ ಆಗ್ರಹಿಸಿದರು. ಅಲ್ಲದೇ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು  ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಸಮುದಾಯದ ಮುಖಂಡರಾದ ದೋಂಡು ಪಾಟೀಲ, ವಿಠuಲ ಪಾಂಡ್ರಮೀಸೆ ಸೇರಿದಂತೆ 400ಕ್ಕೂ ಹೆಚ್ಚು ಜನ ಜಮಾಯಿಸಿದ್ದರು. ಗೌಳಿ ಸಮುದಾಯದವರ ಪ್ರತಿಭಟನೆಯಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ, ಉಪಾಧ್ಯಕ್ಷ ವೆಂಕಟ್ರಮಣ ಬೆಳ್ಳಿ, ಯುವ ಮೋರ್ಚಾ ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್‌, ಪ.ಪಂ ಸದಸ್ಯ ಸೋಮು ನಾಯ್ಕ, ಜಿ.ಪಂ ಮಾಜಿ ಸದಸ್ಯ ರಾಘವೇಂದ್ರ ಭಟ್ಟ ಇತರರು ಭಾಗವಹಿಸಿ ಬೆಂಬಲ ನೀಡಿದರು.

ಎಂಎಲ್‌ಸಿ ಶಾಂತಾರಾಮ ಸಿದ್ದಿ ಖಂಡನೆ: ಗ್ರಾಪಂ ಸದಸ್ಯರ ಮೇಲಿನ ಹಲ್ಲೆಯನ್ನು ವಿಧಾನ ಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು, ದನಗರ ಗೌಳಿ ಸಮುದಾಯದವರ ಮೇಲೆ ಈ ಹಲ್ಲೆ ನಡೆಸಿದ್ದು ಖಂಡನೀಯ. ತಪ್ಪಿತಸ್ಥರು ಯಾರೇ ಆದರೂ ಅವರ ವಿರುದ್ಧ ಕಾನೂನು ಕ್ರಮ ಆಗಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ :ಕೊರೊನಾದಿಂದ ಶಿಕ್ಷಣದಲ್ಲಿ ಏರುಪೇರು: ಕಾಗೇರಿ

ಹಲ್ಲೆ ಘಟನೆಯಲ್ಲಿ ಯಾರಿದ್ದಾರೆ ಎಂಬ ಹೆಸರು ಸೋಷಿಯಲ್‌ ಮೀಡಿಯದಲ್ಲಿ ಹರಿದಾಡುತ್ತಿದೆ. ಸದಾ ಅಲ್ಲಿ ಇಲ್ಲಿ ಓಡಾಡುತ್ತಿರುವ ಈ ವ್ಯಕ್ತಿ ಹಾಗೂ ಅವರ ಗುಂಪು ಸೋಮವಾರ ಎಲ್ಲೂ ಕಾಣುತ್ತಿಲ್ಲ. ತಲೆಮರೆಸಿಕೊಂಡು ಓಡಾಡುತ್ತಿದ್ದು ಮಂಗಳವಾರ  ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವೇಳೆ ಅವರು ಕಾಣಿಸಿಕೊಳ್ಳುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.