ಕುಮಟಾ:ಹೆದ್ದಾರಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ;ಸಂಚಾರ ಅಸ್ತವ್ಯಸ್ತ

Team Udayavani, May 3, 2017, 9:36 AM IST

ಕುಮಟಾ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಗಿಬ್‌ ಸರ್ಕಲ್‌ ಬಳಿ ಗ್ಯಾಸ್‌ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಟ್ಯಾಂಕರ್‌ನ ಚಾಲಕ ಮತ್ತು ಕ್ಲೀನರ್‌ ಗಾಯಗೊಂಡಿದ್ದು ,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡಬೇಕಾಯಿತು. 

ಕುಮಟಾ ಬಳಿ ಬರ್ಗಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ನಡೆದ ಭೀಕರ ಅಗ್ನಿ ಅವಘಡವನ್ನು ನೆನೆದು ಜನರು ಭಯಗೊಳ್ಳುವ ಪರಿಸ್ಥಿತಿ ನಿರ್ಮಾಣವಾಯಿತು. 

ಸ್ಥಳಕ್ಕೆ ಕುಮಟಾ ಠಾಣೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಸಂಚಾರ ಸುಗಮ ಗೊಳಿಸಲು ವ್ಯವಸ್ಥೆ ಕಲ್ಪಿಸಿದ್ದಾರೆ.ಟ್ಯಾಂಕರ್‌ ಖಾಲಿ ಇದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ