ಉತ್ತರ ಕನ್ನಡ ತ್ಯಾಜ್ಯ ಮುಕ್ತವಾಗಲಿ

Team Udayavani, Sep 17, 2019, 12:51 PM IST

uk-tdy-3

ಕಾರವಾರ: ಸ್ವಚ್ಛತಾ ರಥದ ಕಲಾ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಜಯಶ್ರೀ ಮೊಗೇರ ಹಸಿರು ನಿಶಾನೆ ತೋರಿದರು.

ಕಾರವಾರ: ಜಿಲ್ಲೆಯನ್ನು ಸ್ವಚ್ಛ ಜಿಲ್ಲೆಯನ್ನಾಗಿ ಮಾಡಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯನ್ನು ಸ್ವಚ್ಛ ಜಿಲ್ಲೆಯಾಗಿ ರಾಜ್ಯದಲ್ಲಿ ಹೊರ ಹೊಮ್ಮಲು ಗ್ರಾಪಂಗಳು ಕ್ರಿಯಾಶೀಲ ಕಾರ್ಯ ಮಾಡಬೇಕಾಗಿದೆ ಎಂದು ಜಿಪಂ ಅಧ್ಯಕ್ಷೆ ಜಯಶ್ರೀ ಮೋಗೇರ ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಿಪಂ ಆಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಹಮ್ಮಿಕೊಂಡ ಸ್ವಚ್ಛತಾ ರಥ ಕಲಾ ಜಾಥಾಕ್ಕೆ ಸೋಮವಾರ ಜಿಪಂ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಕಲಾ ಜಾಥಾದ ಕಲಾವಿದರು ಗ್ರಾಪಂಗಳಲ್ಲಿ ಸ್ವಚ್ಛತೆಯ ಬಗ್ಗೆ ಜಾನಪದದ ಮೂಲಕ ಅರಿವು ಮೂಡಿಸುತ್ತಿದ್ದು, ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಪಂ ಸಿಇಒ ಎಂ. ರೋಶನ್‌ ಮಾತನಾಡಿ, ಈಗಾಗಲೇ ಗೋಕರ್ಣ ಗ್ರಾಪಂ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ಮಾಡಲಾಗಿದ್ದು, ಇದರಿಂದ ಉತ್ತಮ ಸ್ಪಂದನೆ ದೊರಕಿದೆ. ಗ್ರಾಪಂ ಪಕ್ಕದಲ್ಲೇ ಹಸಿ ಕಸ ಮತ್ತು ಒಣ ಕಸ ನಿರ್ವಹಣೆ ಯಶಸ್ವಿಯಾಗಿದೆ. ಇದು ಜಿಲ್ಲೆಯ ಇತರೆ ಗ್ರಾಪಂಗಳಿಗೆ ಮಾದರಿ ಎಂದರು. ಮುಂದಿನ ದಿನಗಳಲ್ಲಿ ಇನ್ನುಳಿದ ಗ್ರಾಪಂ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸುವ ಮೂಲಕ ಸ್ವಚ್ಛ ಗ್ರಾಮ ಯಶೋಗಾಥೆ ಹಾಡಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯ 80 ಗ್ರಾಪಂ ವ್ಯಾಪ್ತಿಯಲ್ಲಿ ಮುಂದಿನ 40 ದಿನಗಳವರೆಗೆ, ಪ್ರತಿ ದಿನಕ್ಕೆ ಎರಡು ಗ್ರಾಪಂಗಳಿಗೆ ಸ್ವಚ್ಛ ರಥದ ಕಲಾ ಜಾಥಾ ಭೇಟಿ ನೀಡಿ, ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲಿದೆ ಎಂದು ಜಾಥಾದ ನೇತೃತ್ವ ವಹಿಸಿರುವ ಪುರುಷೋತ್ತಮ ಗೌಡ ಹೇಳಿದರು.

ಈ ಕಲಾ ಜಾಥಾ ಮೂಲಕ ಸಂಚಾರಿ ವಾಹನ ತೆರಳಿದ್ದು, ಕಲಾವಿದರು ಬೀದಿನಾಟಕ, ಹಾಡು, ಜಾನಪದ ಗೀತೆಗಳ ಮೂಲಕ ಜನಜಾಗೃತಿ ಮೂಡಿಸಲಿದ್ದೇವೆ. ಕಲಾ ಜಾಥಾ ಭೇಟಿ ನೀಡುವ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸ್ವಚ್ಛ ರಥ ಕಾರ್ಯಕ್ರಮದ ಮಾಹಿತಿ ಪ್ರಚಾರ ಮಾಡಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುಬೇಕು ಎಂದರು.

ತಾಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಅಧ್ಯಕ್ಷ ಪುರುಷೋತ್ತಮ ಗೌಡ ಇತರರು ಉಪಸ್ಥಿತರಿದ್ದರು. ಕಲಾವಿದರು ಕಲಾಜಾಥಾದಲ್ಲಿ ಬೀದಿನಾಟಕ, ಜಾನಪದ ಹಾಡು ಪ್ರಸ್ತುತಪಡಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.