ಜಲ ವಿದ್ಯುತ್ ಉತ್ಪಾದನೆಯ ಕೇಂದ್ರ ಲಿಂಗನಮಕ್ಕಿ ಜಲಾಶಯ ಭರ್ತಿ

Team Udayavani, Sep 2, 2019, 8:25 PM IST

ಶಿವಮೊಗ್ಗ: ರಾಜ್ಯದ ಅತೀದೊಡ್ಡ ಜಲಾಶಯಗಳಲ್ಲಿ ಒಂದಾಗಿರುವ ಲಿಂಗನಮಕ್ಕಿ ಜಲಾಶಯ ಭರ್ತಿಗೊಂಡಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳಾಗಿವೆ. ಈ ಬಾರಿ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾದ ಕಾರಣ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬಂದಿದ್ದು ಇದೀಗ ಜಲಾಶಯದಲ್ಲಿ 1818.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

ಈ ಕಾರಣದಿಂದ ಮುಂಜಾಗರುಕತಾ ಕ್ರಮವಾಗಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್ಸ್ ನೀರನ್ನು ಶರಾವತಿ ನದಿಗೆ ಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ.
ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವುದರಿಂದ ಶರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಲಿದೆ ಎಂದು ನದೀ ಪಾತ್ರದ ಜನರಿಗೆ ಕೆ.ಪಿ.ಸಿ. ಸಿಬಂದಿ ಮುನ್ನೆಚ್ಚರಿಕೆ ನೀಡಿದ್ದಾರೆ. ಜಲಾಶಯದ ಮೂರು ಕ್ರಸ್ಟ್ ಗೇಟ್ ಗಳಿಂದ ಈ ಹೆಚ್ಚುವರಿ ನೀರನ್ನು ಶರಾವತಿ ನದಿಗೆ ಬಿಡಲಾಗುತ್ತಿದೆ.

ಸಾಗರ ತಾಲೂಕಿನ ಕರ್ಗಲ್ ಗ್ರಾಮದ ಬಳಿ ಶರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಈ ಆಣೆಕಟ್ಟು 193 ಅಡಿಗಳಷ್ಟು ಎತ್ತರವಿದೆ. ಆಣೆಕಟ್ಟಿನ ಉದ್ದ 2.4 ಕಿಲೋವೀಟರ್ ಗಳಾಗಿದೆ. 151.75 ಟಿ.ಎಂ.ಸಿ. ನೀರನ್ನು ಶೇಖರಿಸುವ ಸಾಮರ್ಥ್ಯ ಈ ಜಲಾಶಯಕ್ಕಿದೆ. 1964ರಲ್ಲಿ ಈ ಜಲಾಶಯ ನಿರ್ಮಾಣಗೊಂಡಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ