ಮಾರಿಕಾಂಬ ದೇವಸ್ಥಾನ ಕಟ್ಟಡ ಪ್ರಕರಣ ಇತ್ಯರ್ಥ

Team Udayavani, Dec 21, 2017, 5:17 PM IST

21-29.jpg

ಶಿರಸಿ: ಮಾರಿಕಾಂಬಾ ದೇವಸ್ಥಾನ ಹಾಗೂ ಪ್ರೋಗ್ರೆಸ್ಸೀವ್‌ ಶಿಕ್ಷಣ ಸಂಸ್ಥೆಯ ನಡುವೆ ಇದ್ದ ಕಟ್ಟಡ ಸಂಬಂಧಿತ ಕಾನೂನು ಹೋರಾಟ ಕೊನೆಗೂ ಇತ್ಯರ್ಥವಾಗಿದೆ. ಮಾರಿಕಾಂಬಾ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಅನುಕೂಲವಾಗಿ ದೇಗುಲದ ಪಕ್ಕದಲ್ಲಿನ ಕಟ್ಟಡದ ಕೀಲಿಯನ್ನು ನ್ಯಾಯಾಲಯದಲ್ಲೇ ಕಾಲೇಜಿನ ಪ್ರಮುಖರು ಹಸ್ತಾಂತರಿಸಿದ್ದಾರೆ.

ಎರಡೂ ಸಾರ್ವಜನಿಕ ಸಂಸ್ಥೆಗಳು ಪ್ರಕರಣ ಬಗೆಹರಿಸಿಕೊಂಡಿವೆ. ಈ ಕುರಿತು ಬುಧವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾರಿಗುಡಿ ಅಧ್ಯಕ್ಷ ವೆಂಕಟೇಶ ನಾಯ್ಕ, ಪ್ರೋಗ್ರೆಸ್ಸೀವ್‌ ಅಧ್ಯಕ್ಷ, ಮಾಜಿ ಸಚಿವ ಪಿ.ಎಸ್‌. ಜಯವಂತ, ಮಾರಿಕಾಂಬಾ ದೇಗುಲದ ಕಾರ್ಯಕ್ಕೆ, ಶಿಕ್ಷಣ ಸಂಸ್ಥೆ ಅಭಿವೃದ್ಧಿಗೆ ಪರಸ್ಪರ ಸಹಕಾರದ ಮಾದರಿಯಲ್ಲಿ ಪ್ರಕರಣಕ್ಕೆ ಇತಿಶ್ರೀ ಹಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
1961ರಿಂದ ಮಾರಿಗುಡಿ ಪ್ರದೇಶ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಎಂಬ ಕಾರಣದಿಂದ ಮಾರಿಕಾಂಬಾ ದೇಗುಲದ
ಕಟ್ಟಡದಲ್ಲಿ ಶಾಲೆ ಆರಂಭವಾಗಿತ್ತು. ಆದರೆ ಕಳೆದ 15 ವರ್ಷಗಳಿಂದ ಈ ಕಟ್ಟಡ ಸಂಬಂಧದ ಪ್ರಕರಣ ನ್ಯಾಯಾಲಯದ ಮೆಟ್ಟಿಲೂ ಏರಿತ್ತು. ಆದರೆ ದೇಗುಲಕ್ಕೆ ಸಂಬಂಧಪಟ್ಟ ಸ್ಥಳವನ್ನು ಸಮಾಧಾನದಿಂದ ಇತ್ಯರ್ಥ ಮಾಡಿಕೊಳ್ಳಬೇಕು ಎಂಬ ಕಾರಣದಿಂದ ರಾಜೀ ಮಾಡಿಕೊಳ್ಳಲಾಗಿದೆ. ಕಟ್ಟಡದಲ್ಲಿನ ಐದು ಕೊಠಡಿಯಲ್ಲಿ ನಡೆಯುತ್ತಿದ್ದ ಶಾಲಾ ಪೀಠೊಪಕರಣ ಸೇರಿದಂತೆ ಅವರು
ವಾಪಸ್‌ ಒಯ್ದಿದ್ದು, ಕೀಲಿ ನೀಡಿದ್ದಾರೆ ಎಂದು ಮಾರಿಗುಡಿ ಅಧ್ಯಕ್ಷ ವೆಂಕಟೇಶ ನಾಯ್ಕ ವಿವರಿಸಿದರು.

ಪಿ.ಎಸ್‌. ಜಯವಂತ ಮಾತನಾಡಿ, ಎರಡೂ ಸಾರ್ವಜನಿಕವೇ ಆಗಿದ್ದರಿಂದ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ನಗರಸಭೆಯಿಂದ
ಬನವಾಸಿ ರಸ್ತೆಯಲ್ಲಿ 4 ಗುಂಟೆ ಸ್ಥಳಕ್ಕೆ ಶಿಕ್ಷಣ ಸಂಸ್ಥೆ ಬೇಡಿಕೆ ಇಟ್ಟಿದ್ದು, ಅದನ್ನು ಒಪ್ಪಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಕಳಿಸಿದ್ದಾರೆ. ಅಲ್ಲಿಂದ ಅನುಮೋದನೆ ಪಡೆದು ಕಟ್ಟಡ ಕಟ್ಟುವ ಕಾರ್ಯದಲ್ಲಿ ಮಾರಿಗುಡಿ ಕೂಡ ನೆರವಾಗಬೇಕು ಎಂದರು. ನಮಗೆ ಮಿತಿ
ಇರುವುದರಿಂದ ಜಿಲ್ಲಾ ನ್ಯಾಯಾಧೀಶರ ಗಮನಕ್ಕೆ ಯಥಾವತ್‌ ಪ್ರಸ್ತಾವನೆ ಕಳಿಸಲಾಗುತ್ತದೆ. ಬಾಕಿ ಇರುವ ಇನ್ನೂ ನಾಲ್ಕು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಿಕೊಳ್ಳುವ ವಿಶ್ವಾಸ ಇದೆ ಎಂದು ವೆಂಕಟೇಶ ತಿಳಿಸಿದರು.

ಮಾರಿಗುಡಿ ಉಪಾಧ್ಯಕ್ಷ ಮನೋಹರ ಮಲ್ಮನೆ, ಲಕ್ಷ್ಮಣ ಕಾನಡೆ, ಶಾಂತಾರಾಮ ಹೆಗಡೆ, ಪ್ರೋಗ್ರೆಸ್ಸೀವ್‌ನ ಎನ್‌.ವಿ.ಜಿ. ಭಟ್ಟ,
ಜಿ.ಜಿ. ಹೆಗಡೆ ಕಡೇಕೋಡಿ, ಸೂರಜ್‌ರಾಣಿ ಪ್ರಭು, ಎಂ.ಎನ್‌. ಹೆಗಡೆ ಹಲಸಿನಳ್ಳಿ, ರಮೇಶ ದುಭಾಶಿ, ಪರಮಾನಂದ ಹೆಗಡೆ, ಮೋಹಿನಿ ಬೆ„ಲೂರು, ಶಶಿಕಲಾ ಜಯವಂತ ಇತರರು ಇದ್ದರು. ಮಾರಿಗುಡಿ ವ್ಯವಸ್ಥಾಪಕ ನರೇಂದ್ರ ಜಾಧವ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.