ಶಾಸಕಿಗೆ ಬೆದರಿಕೆ: ಜೆಡಿಎಸ್‌ ಮುಖಂಡರ ವಿರುದ್ಧ ದೂರು

Team Udayavani, Apr 26, 2019, 6:13 AM IST

ಕಾರವಾರ: ಲೋಕಸಭಾ ಚುನಾವಣೆ ಮತದಾನದ ದಿನ ಶಾಸಕಿ ರೂಪಾಲಿ ನಾಯ್ಕಗೆ ಬೆದರಿಕೆಯೊಡ್ಡಿ ಹಲ್ಲೆಗೆ ಯತ್ನಿಸಿದ್ದರು ಎನ್ನಲಾದ ಇಬ್ಬರು ಜೆಡಿಎಸ್‌ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದೆ.

ಈ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಪರ ಅವರ ಆಪ್ತ ಕಾರ್ಯದರ್ಶಿ ಗುರುಪ್ರಸಾದ ನಾಯ್ಕ ಕಾರವಾರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲೋಕಸಭಾ ಚುನಾವಣೆ ಮತದಾನದ ದಿನ ಏ.23ರಂದು ಮಧ್ಯಾಹ್ನ 3:30ಕ್ಕೆ ಶಾಸಕಿ ರೂಪಾಲಿ ನಾಯ್ಕ ತಮ್ಮ ವಾಹನದಲ್ಲಿ ಕಾರವಾರದಿಂದ ಅಂಕೋಲಾಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಬೈತಕೋಲ್ ಬಳಿ ಜೆಡಿಎಸ್‌ ಕಾರ್ಯಕರ್ತರೆಂದು ಹೇಳಿಕೊಂಡಿರುವ ಕಿಶನ್‌ ಕುವಾಳೇಕರ್‌ ಮತ್ತು ದರ್ಶನ ರಾಜೇಶ ಮಾಜಾಳಿಕರ್‌ ಎಂಬುವವರು ಶಾಸಕರ ಕಾರಿಗೆ ಅಡ್ಡ ನಿಂತು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದರು ಎಂದು ಶಾಸಕರ ಆಪ್ತ ಕಾರ್ಯದರ್ಶಿ ದೂರಿನಲ್ಲಿ ವಿವರಿಸಿದ್ದಾರೆ. ಈ ಹಿಂದೆ ಕೂಡಾ ಶಾಸಕಿ ರೂಪಾಲಿ ನಾಯ್ಕ ಮೇಲೆ ಇದೇ ರೀತಿಯ ಘಟನೆಗಳು ನಡೆದಿದ್ದವು. ಆಗ ಈ ಬಗ್ಗೆ ಪೊಲೀಸರ ಗಮನಕ್ಕೆ ತರಲಾಗಿತ್ತು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮನುಷ್ಯನಿಗೆ ವಯಸ್ಸು ಸರಿದಂತೆ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಕಣ್ಣಿನ ದೃಷ್ಟಿ ಮಂದವಾಗುವುದು, ತಲೆನೋವು ಬರುವುದು ಮೊದಲಾದ ಸಮಸ್ಯೆಗಳ ಉಂಟಾಗುತ್ತದೆ....

  • ಮಾರುತಿ ಸುಝುಕಿ 800 ಜಮಾನಾ ಮುಗಿದು 2000ನೇ ಇಸವಿಯಲ್ಲಿ ಮೊದಲ ಬಾರಿಗೆ ಆಲ್ಟೋ 800 ಮಾರುಕಟ್ಟೆಗೆ ಬಂದಿದ್ದಾಗ ದೊಡ್ಡ ಸುದ್ದಿಯಾಗಿತ್ತು. ಬಳಿಕ 2012ರಲ್ಲಿ ಹೊಸ ಆಲ್ಟೋ...

  • ಬೆಂಗಳೂರು: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಮಳೆರಾಯನನ್ನು ಒಲಿಸಿಕೊಳ್ಳಬೇಕೆಂದು ಕಸರತ್ತು ನಡೆಸುತ್ತಿದೆ. ಗ್ರಾಮೀಣಾ ಭಿವೃದ್ಧಿ...

  • ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ ಮುಂದುವರಿದಿದ್ದು, ಸಿಡಿಲಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಈ ಮಧ್ಯೆ, ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ...

  • ಕುತ್ತಾರು: ಕುತ್ತಾರು ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಶ್ರೀ ರಾಜರಾಜೇಶ್ವರಿ ಘಟಕದ ವತಿಯಿಂದ ಮಳೆಗಾಗಿ...

  • ಮಂಗಳೂರು/ಉಡುಪಿ: ಮತದಾನಕ್ಕೂ ಮತ ಎಣಿಕೆಗೂ 35 ದಿನಗಳಷ್ಟು ದೀರ್ಘಾವಧಿಯ ಕಾಯುವಿಕೆ ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯ ಎರಡು ಮುಖ್ಯ ಲೋಕಸಭಾ ಕ್ಷೇತ್ರಗಳಿಗೆ...