ಮಂಗನ ಕಾಯಿಲೆ ಮುನ್ನೆಚ್ಚರಿಕೆ ಅಗತ್ಯ

Team Udayavani, May 3, 2020, 4:49 PM IST

ಮಂಗನ ಕಾಯಿಲೆ ಮುನ್ನೆಚ್ಚರಿಕೆ ಅಗತ್ಯ

ಸಿದ್ದಾಪುರ: ಕೋವಿಡ್ 19 ಮತ್ತು ಕೆಎಫ್‌ಡಿ ಕಾಯಿಲೆ ಹರಡುವಿಕೆ ಕುರಿತು ಮುನ್ನೆಚ್ಚರಿಕೆ, ಕುಡಿಯುವ ನೀರು, ಮಳೆಗಾಲದ ಪೂರ್ವಸಿದ್ಧತೆ ಕಾರ್ಯಗಳ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ ಆ ಕುರಿತು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಅವರು ತಾಪಂ ಸಭಾಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲೂಕಿನಲ್ಲಿ ಈವರೆಗೆ 49 ಕೆಎಫ್‌ಡಿ ಪ್ರಕರಣಗಳು ಕಂಡುಬಂದಿದ್ದು ತಲಾ ಎರಡು ರೋಗಿಗಳು ಮಣಿಪಾಲ ಮತ್ತು ಸಿದ್ದಾಪುರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಯಿಲೆ ಉಲ್ಬಣಗೊಳ್ಳುವ ಸ್ಥಿತಿ ಕಂಡುಬರುತ್ತಿಲ್ಲ. ಈಗಾಗಲೇ 3 ಸಾವಿರಕ್ಕೂ ಹೆಚ್ಚು ಜಾನುವಾರುಗಳಿಗೆ ಉಣುಗು ನಿಯಂತ್ರಿಸುವ ಚುಚ್ಚುಮದ್ದು ನೀಡಲಾಗಿದೆ. ಎಲ್ಲ ಗ್ರಾಪಂಗಳಲ್ಲೂ ರೋಗ ನಿರೋಧಕ ದ್ರಾವಣ ಸಿಂಪಡಿಸಲಾಗಿದೆ. ಹಿಂದಿನ ವರ್ಷ ಮೃತಪಟ್ಟ 6 ಜನರಿಗೆ ಪರಿಹಾರ ಬಂದಿದ್ದು ಅವರ ವಾರಸುದಾರರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದರು.

ಕೋವಿಡ್ 19  ಕುರಿತಂತೆ ರಾಜ್ಯ, ಕೇಂದ್ರ ಸರಕಾರಗಳು ಕೆಲವು ಅವಶ್ಯಕತೆಗಳಿಗೆ ವಿನಾಯತಿ ನೀಡಲು ಮುಂದಾಗಿದೆ. ಏನೇ ಇದ್ದರೂ ರೋಗದ ಬಗ್ಗೆ ಎಚ್ಚರ ಅಗತ್ಯ. ಲಾಕ್‌ಡೌನ್‌ ಪಾಲನೆ ಅತಿ ಅವಶ್ಯಕ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಅಗತ್ಯ ವಿನಾಯಿತಿಗಳ ಬಗ್ಗೆ ವಿವರ ನೀಡಲಿದ್ದು ಅವುಗಳನ್ನು ಪಾಲಿಸುವುದರ ಜೊತೆಗೆ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಕುಡಿಯುವ ನೀರಿನ ಕುರಿತಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದ್ದು ಎಲ್ಲೇ ನೀರಿನ ತೊಂದರೆಯಾದರೂ ಟ್ಯಾಂಕರ್‌ನಲ್ಲಿ ಒದಗಿಸಲು ಸೂಚಿಸಲಾಗಿದೆ.

ಮಳೆಗಾಲದ ಪೂರ್ವ ಸಿದ್ಧತೆಯಾಗಿ ಎಲ್ಲ ಇಲಾಖೆಗಳಲ್ಲೂ ಆಗಬೇಕಾದ ಕಾರ್ಯಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಹೆಸ್ಕಾಂನವರು ವಿದ್ಯುತ್‌ ಸಂಪರ್ಕ ಸಮರ್ಪಕವಾಗಿರಿಸಿಕೊಳ್ಳಲು ಮತ್ತೂಂದು ತಂಡವನ್ನು ಒದಗಿಸಲಾಗಿದೆ. ಆರೋಗ್ಯ ಇಲಾಖೆಗೆ ಕೂಡ ಮುನ್ನೆಚ್ಚರಿಕೆ ವಹಿಸಲು ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಶಾಲೆ, ಅಂಗನವಾಡಿ ಮುಂತಾದವುಗಳ ಕಟ್ಟಡ, ಸಾಮಗ್ರಿಗಳನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳಲು ನಿರ್ದೇಶನ ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೃಷಿಕರಿಗೆ ಅಗತ್ಯ ಸಾಮಗ್ರಿ, ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ. ಈ ಎಲ್ಲವುಗಳ ಮಧ್ಯೆ ಕೋವಿಡ್ 19  ರೋಗದ ಗಂಭೀರತೆ ನೆನಪಿಟ್ಟುಕೊಂಡು ಅಷ್ಟೇ ಗಂಭೀರತೆಯಿಂದ ಎಚ್ಚರ ವಹಿಸಬೇಕಿದೆ ಎಂದರು.

ತಹಶೀಲ್ದಾರ್‌ ಮಂಜುಳಾ ಭಜಂತ್ರಿ, ತಾಪಂ ಇಒ ಪ್ರಶಾಂತ ರಾವ್‌, ಇನ್ನಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.