ಸಚಿವ ಶಿವರಾಮ ಹೆಬ್ಬಾರ್ ರನ್ನು ಭೇಟಿ ಮಾಡಿ ಅಹವಾಲು ತಿಳಿಸಿದ ಮೊಗೇರ ಸಮಾಜದ ಪ್ರಮುಖರು
Team Udayavani, May 15, 2022, 7:07 PM IST
ಭಟ್ಕಳ: ತಮಗೆ ನೀಡಲಾಗುತ್ತಿದ್ದ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಪುನಃ ನೀಡುವಂತೆ ಆಗ್ರಹಿಸಿ ಇಲ್ಲಿನ ತಾಲೂಕಾ ಆಡಳಿತ ಸೌಧದ ಪಕ್ಕದಲ್ಲಿ ಕಳೆದ 55 ದಿನಗಳಿಂದ ಧರಣಿ ನಡೆಸುತ್ತಿರುವ ಮೊಗೇರ ಸಮಾಜದ ಪ್ರಮುಖರು ಇಂದು ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಶಿವರಾಮ ಹೆಬ್ಬಾರ್ ಅವರನ್ನು ಭೇಟಿಯಾದ ನಿಯೋಗದ ಪ್ರಮುಖರಾದ ಅಣ್ಣಪ್ಪ ಮೊಗೇರ ಅವರು ಮಾತನಾಡಿ ತಮ್ಮ ಸಮಾಜದ ಸಂಕಷ್ಟಗಳನ್ನು ತೋಡಿಕೊಂಡರು.
ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಜಾತಿ ಪ್ರಮಾಣ ಪತ್ರದ ಕುರಿತು ಚರ್ಚೆ ನಡೆಸಿ ಹದಿನೈದು ದಿನಗಳೊಳಗೆ ಮತ್ತೊಂದು ಸಭೆ ನಡೆಸುವ ಕುರಿತು ನಿರ್ಧರಿಸಲಾಗಿತ್ತು. ಆದರೆ ಹದಿನೈದು ದಿನಗಳ ಕಳೆದಿದ್ದು, ಇನ್ನೂ ಸಭೆ ಕರೆದಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಮತ್ತಿತರ ಸೌಲಭ್ಯಕ್ಕೆ ಅನುಕೂಲವಾಗಲು ನಮಗೆ ಈ ಹಿಂದೆ ನೀಡಲಾಗಿದ್ದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಮುಂದುವರಿಸಬೇಕು. ಈ ಕುರಿತು ತಮ್ಮ ಸಹಕಾರ ಅಗತ್ಯ ಎಂದರು. ಮೊಗೇರರ ಅಹವಾಲು ಕೇಳಿದ ಸಚಿವ ಶಿವರಾಮ ಹೆಬ್ಬಾರ ಮಾತನಾಡಿ, ಕ್ಯಾಬಿನೆಟ್ ಸಭೆ ಇರುವ ಸಂದರ್ಭದಲ್ಲೇ ಉನ್ನತ ಮಟ್ಟದ ಸಭೆ ನಡೆಸುವಂತೆ ಪ್ರಯತ್ನಿಸುತ್ತೇನೆ. ಈ ಸಭೆಯಲ್ಲಿ ನಾನೂ ಪಾಲ್ಗೊಳ್ಳುತ್ತೇನೆ. ಸಭೆ ಆಯೋಜನೆ ಕುರಿತು ಕಾನೂನು ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಬಳಿ ಮಾತನಾಡುವೆ ಎಂದು ಹೇಳಿದರು. ಉಪಸ್ಥಿತರಿದ್ದ ಮಾಜಿ ಶಾಸಕ ಮಂಕಾಳ ವೈದ್ಯ ಸಹ ಮೊಗೇರರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಒದಗಿಸಿ ಕೊಡಲು ಸರಕಾರದ ಮಟ್ಟದಲ್ಲಿ ಪ್ರಯತ್ನಿಸಬೇಕು ಎಂದು ಸಚಿವರಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಮೊಗೇರ ಸಮಾಜದ ಹಲವು ಮುಖಂಡರು, ಶಾಸಕ ಸುನೀಲ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ಸುಬ್ರಾಯ ದೇವಡಿಗ, ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಗೋವಿಂದ ನಾಯ್ಕ, ಮೊಗೇರ ಸಮಾಜದ ಪ್ರಮುಖರಾದ ಪುಂಡಲೀಕ ಹೆಬಳೆ, ಎಫ್.ಕೆ.ಮೊಗೇರ, ಭಾಸ್ಕರ ದೈಮನೆ, ಕುಮಾರ ಹೆಬಳೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಕನ್ನಡದಲ್ಲಿ ಭಾರೀ ಮಳೆ: ಗುರುವಾರವೂ ಶಾಲಾ ಕಾಲೇಜಿಗೆ ರಜೆ ಘೋಷಣೆ
ಶಿರಸಿ: ಭಾರಿ ಮಳೆಗೆ ಶಾಲಾ-ಕಾಲೇಜುಗಳಿಗೆ ರಜೆ; ಕೊನೇ ಕ್ಷಣದ ಆದೇಶಕ್ಕೆ ಆಕ್ರೋಶ
ಉತ್ತರ ಕನ್ನಡ ಭಾರೀ ಮಳೆ: ಶಾಲಾ ಕಾಲೇಜಿಗೆ ರಜೆ ಘೊಷಣೆ
ಅಂಕೋಲಾ: ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಗುದ್ದಿದ ಕಾರು; ಓರ್ವ ಸಾವು
ಭಟ್ಕಳ: ಉದಯಪುರ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಕರ್ನಾಟಕ- ಕೊರಿಯಾ ಗಣರಾಜ್ಯ ಬಾಂಧವ್ಯ ವೃದ್ಧಿ: ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ
ಮಂಗಳೂರು: ಗುಡ್ಡ ಕುಸಿದು ಮನೆಗಳಿಗೆ ಹಾನಿ; 5 ಮನೆಯವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ
ಮಾಡು ಇಲ್ಲವೇ ಮಡಿ: ವಿರಾಟ್ ಕೊಹ್ಲಿಗೆ ಎರಡೇ ಪಂದ್ಯಗಳ ಗಡುವು ನೀಡಿದ ಬಿಸಿಸಿಐ!
ಉಡುಪಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ