ಬಿಜೆಪಿ ಅವಧಿಯಲ್ಲಿಯೇ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ : ಮುಝಮ್ಮಿಲ್ ಬಾಬು


Team Udayavani, Oct 17, 2021, 9:04 PM IST

fcgdftgrt

ಭಟ್ಕಳ: ಬಿಜೆಪಿಗೆ ಬೇರೆ ಪಕ್ಷದವರು ತಮ್ಮ ರಾಜಕೀಯ ಲಾಭಕ್ಕಾಗಿ ಅಲ್ಪಸಂಖ್ಯಾತರ ವಿರೋಧಿ ಎನ್ನುವ ಹಣೆಪಟ್ಟಿಯನ್ನು ಕಟ್ಟಿದ್ದಾರೆ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಮ್ಮ ಪಕ್ಷದ ಅಧಿಕಾರವಧಿಯಲ್ಲಿಯೇ ಹೆಚ್ಚು ಅನುದಾನ ಬಿಡುಗಡೆಯಾಗಿದೆ ಎಂದು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯಾಧ್ಯಕ್ಷ ಮುಝಮ್ಮಿಲ್ ಬಾಬು ಅವರು ಹೇಳಿದರು.

ಅವರು ಇಲ್ಲಿನ ರಾಮನಾಥ ಶ್ಯಾನಭಾಗ ಸಭಾ ಭವನದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದಿಂದ ಏರ್ಪಡಿಸಲಾಗಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ಅನೇಕ ಸೌಲಭ್ಯಗಳನ್ನು ಅಲ್ಪಸಂಖ್ಯಾತರಿಗಾಗಿ ನೀಡುತ್ತಿದೆ.ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಈ ಸರಕಾರ ಕೊಡುಗೆಯಾಗಿದೆ. ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಿಂದೆಂದೂ ಕಾಣದ ಅಭಿವೃದ್ದಿ ಮಾಡುತ್ತಿದ್ದು ರಸ್ತೆ ಅಭಿವೃದ್ಧಿ, ರೈಲ್ವೆ ಅಭಿವೃದ್ದಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಾಗುತ್ತಿದ್ದು, ಅದರ ಪ್ರಯೋಜನ ಕೇವಲ ಒಂದೇ ವರ್ಗಕ್ಕೆ ದೊರೆಯುತ್ತಿಲ್ಲ ಎಂದರು.

ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯ್ಕ ಮಾತನಾಡಿ, ಆರ್.ಎಸ್.ಎಸ್. ಅಲ್ಪ ಸಂಖ್ಯಾತರ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಆದರೆ, ದೇಶ ವಿಭಜನೆಯನ್ನು ವಿರೋಧಿಸಿ ನಾವೆಲ್ಲರೂ ಒಂದಾಗಿರೋಣ ಎಂದಿದ್ದೇ ಆರ್.ಎಸ್.ಎಸ್. ಆಗಿತ್ತು. ಇದೊಂದು ದೇಶ ಭಕ್ತ ಸಂಘಟನೆಯಾಗಿದ್ದು ದೇಶ ಭಕ್ತರನ್ನು ಎಂದಿಗೂ  ಈ ಸಂಘಟನೆ ಗೌರವಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯ ಅಲ್ಪ ಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನೀಸ್ ಅಹಮ್ಮದ್ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶ ಎನ್ನುವ ಹಣೆಪಟ್ಟಿ ಹೊತ್ತ ಭಟ್ಕಳದಲ್ಲಿ ಬಿಜೆಪಿ. ಅಲ್ಪ ಸಂಖ್ಯಾತ ಘಟಕದ ಕಾರ್ಯಕಾರಿಣಿ ಏರ್ಪಡಿಸಿರುವುದು ಒಂದು ದಾಖಲೆಯಾಗಿದೆ ಎಂದರು.

ಸಿಎಂಡಿಸಿ ಅಧ್ಯಕ್ಷ ಮುಕ್ತಾರ್ ಅಹಮ್ಮದ್ ಮಾತನಾಡಿದರು. ವೇದಿಕೆಯಲ್ಲಿ ಪ್ರಮುಖರಾದ ಎಸ್. ವಿ. ರಾಜು, ಸಿರಾಜ್, ಇಮ್ತಿಯಾಜ್ ಅಹಮ್ಮದ್, ಎನ್.ಎಸ್. ಹೆಗಡೆ, ಉಶಾ ಹೆಗಡೆ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನಿಂದ ಬಂದಿದ್ದ ಗಣ್ಯರು ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಪ್ರತಿಭಾವಂತೆ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಹಲವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅನೀಸ್ ತಹಸೀಲ್ದಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಭಟ್ಕಳ ತಾಲೂಕಾ ಅಧ್ಯಕ್ಷ ಇಸ್ಮಾಯಿಲ್ ಅನ್ವರ್ ಫಾರೂಕಿ ನಿರೂಪಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.