ಮುಂಡಗೋಡ:ಗ್ರಾಮೀಣ ಪ್ರದೇಶಗಳಿಗೆ ಖಾಸಗಿ ಕೊಳವೆಬಾವಿ ನೀರು ಪೂರೈಕೆ


Team Udayavani, Mar 26, 2024, 6:09 PM IST

ಮುಂಡಗೋಡ:ಗ್ರಾಮೀಣ ಪ್ರದೇಶಗಳಿಗೆ ಖಾಸಗಿ ಕೊಳವೆಬಾವಿ ನೀರು ಪೂರೈಕೆ

ಉದಯವಾಣಿ ಸಮಾಚಾರ
ಮುಂಡಗೋಡ: ತಾಲೂಕಿನಲ್ಲಿ ಹಂತ ಹಂತವಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಮುಂದಿನ ದಿನದಲ್ಲಿ ಗ್ರಾಮಾಂತರ ಪ್ರದೇಶದ ಕೆಲಭಾಗಗಳಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣಗೊಳ್ಳುವ ಸಾಧ್ಯತೆ ಇದೆ.

ತಾಲೂಕಿನಾದ್ಯಂತ ರೈತರು, ಜನಸಾಮಾನ್ಯರು, ಪ್ರಾಣಿ, ಪಕ್ಷಿಜೀವ ಸಂಕುಲಗಳ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಬಿಸಿಲಿನ
ತಾಪಮಾನದಿಂದ ಡ್ಯಾಂ, ಹಳ್ಳಗಳ ನೀರಿನ ಮೂಲಗಳು ಬತ್ತಿ ಬರಿದಾಗಿವೆ. ಇದರಿಂದ ಅಡಕೆ, ಬಾಳೆ, ಸೇರಿದಂತೆ ಇತರೆ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಿದ್ದು, ಇದೀಗ ಬೆಳೆಗಳ ರಕ್ಷಣೆ ಸವಾಲಾಗಿ ಪರಿಣಮಿಸಿದೆ.

ಮಳೆಯ ಅಭಾವ, ಬೊರ್‌ವೆಲ್‌ ಕೊರೆತ, ಕಾಡುಗಳ ನಾಶ, ನೀರಿನ ದುರ್ಬಳಕೆ ಹೀಗೆ ಹತ್ತು ಹಲವಾರು ಕಾರಣಗಳಿಂದ ಅಂತರ್ಜಲ ಕುಸಿದಿದೆ ಎನ್ನಬಹುದಾಗಿದೆ.

ಖಾಸಗಿ ಕೊಳವಿಬಾವಿಗಳಿಂದ ನೀರು ಪೂರೈಕೆ:
ತಾಲೂಕಿನ ಮೈನಳ್ಳಿ, ಕ್ಯಾತ್ನಳ್ಳಿ, ಇಂದೂರ, ಕೊಪ್ಪ, ಅಂದಲಗಿ, ಚವಡಳ್ಳಿ, ಮಲವಳ್ಳಿ, ಹುಲಿಹೊಂಡ, ಗುಂಜಾವತಿ, ಉಗ್ನಿಕೇರಿ, ಚವಡಳ್ಳಿ ಪ್ಲಾಟ್‌, ಮಲವಳ್ಳಿ ಪ್ಲಾಟ್‌, ಕೆಂದಲಗೇರಿ, ರಾಮಾಪುರ, ಶಿವಾಜಿನಗರ ಸೇರಿದಂತೆ ತಾಲೂಕಿನ 18 ಹಳ್ಳಿಗಳಲ್ಲಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಕುಡಿಯುವ ನೀರು ಪೂರೈಸಲಾಗುತ್ತಿದೆ.

ಮೈನಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದ್ದಿದ್ದು, ಅಲ್ಲಲ್ಲಿ ಟ್ಯಾಂಕರ್‌ ಮೂಲಕ ನೀರನ್ನು ಪೂರೈಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಟ್ಯಾಂಕರ್‌ ನೀರು ಪೂರೈಸುವುದು ಸಹ ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ. ಕೆಲಭಾಗಗಳಲ್ಲಿ ಒಬ್ಬರಿಗೆ ಇಂತಿಷ್ಟು ಕೊಡ ನೀರು ಎಂದು ಪೂರೈಸುವ ಸಂಭವವಿದೆ.

ಪಟ್ಟಣದಲ್ಲಿ ಈಗಾಗಲೇ ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿತ್ತು. ಮೇ ಕೊನೆವರಿಗೆ ನೀರಿನ ಸಮಸ್ಯೆಯಿಲ್ಲ. ನೀರಿನ ಅಭಾವದಿಂದಾಗಿ ಇದೀಗ ನಿಯಮಿತವಾಗಿ ನೀರು ಪೂರೈಸುವ ಲಕ್ಷಣಗಳು ಕಂಡು ಬರುತ್ತಿದೆ.

ಮುಂದಿನ ದಿನಗಳಲ್ಲಿ 40 ಗ್ರಾಮ: ತಾಲೂಕಿನ 16 ಗ್ರಾಪಂದವರು ಈಗಾಗಲೆ ಕುಡಿಯುವ ನೀರಿನ ಸಮಸ್ಯೆ ಮುಂದಿನ ಏಪ್ರೀಲ್‌ ತಿಂಗಳು ಯಾವ ಯಾವ ಗ್ರಾಮಗಳಲ್ಲಿ ಎದುರಾಗಲಿದೆ ಎಂಬ ಮಾಹಿತಿಯನ್ನು ಸಂಗ್ರಹಿಸಿ ಇಟ್ಟಿದ್ದಾರೆ. ಏಪ್ರೀಲ್‌ನಲ್ಲಿ ಹೊಸದಾಗಿ 40 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು, ಈ ಗ್ರಾಮಗಳಲ್ಲಿಯೂ ಖಾಸಗಿ ಬೋರ್‌ವೆಲ್‌ ಗಳನ್ನು ಗುರುತಿಸಿ ಇಡಲಾಗಿದೆ ಎಂಬ ಮಾಹಿತಿ ಗ್ರಾಪಂಗಳಿಂದ ತಿಳಿದು ಬಂದಿದೆ.

ಸದ್ಯ ತಾಲೂಕಿನಲ್ಲಿ ಪ್ರಮುಖ ಜಲಾಶಯ ಹಾಗೂ ದೊಡ್ಡ ಕೆರೆಗಳನ್ನು ಹೊರತು ಪಡಿಸಿದರೆ. ಶೇ.95 ರಷ್ಟು ಕೆರೆ, ಕಟ್ಟೆಗಳು ಬರಿದಾಗಿ ನಿಂತಿವೆ. ಇದರಿಂದ ದನ-ಕರುಗಳು ಹಾಗೂ ಅರಣ್ಯದಲ್ಲಿನ ಕಾಡು ಪ್ರಾಣಿಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.