Mundgod: ಗಾಂಜಾ ಮಾರಾಟ; ಆರೋಪಿ ಬಂಧನ
Team Udayavani, Sep 30, 2023, 3:05 PM IST
ಮುಂಡಗೋಡು: ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನ ಮೇಲೆ ಪೊಲೀಸರು ದಾಳಿ ನಡೆಸಿ 2 ಕೆ.ಜಿ ಗಾಂಜಾ ವಶ ಪಡೆದುಕೊಂಡು ಆತನನ್ನು ಬಂಧಿಸಿದ ಘಟನೆ ಸೆ. 30 ರ ಶನಿವಾರ ನಡೆದಿದೆ.
ಹಾನಗಲ್ ತಾಲೂಕಿನ ತಿರವಳ್ಳಿ ಗ್ರಾಮದ ಸಲ್ಮಾನಖಾನ ಆಲೂರ(24) ಬಂಧಿತ ಆರೋಪಿತ.
ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಬಳಿ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ 28 ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದಾಗ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಸಿಪಿಐ ಬಿ.ಎಸ್. ಲೋಕಾಪುರ ನಿರ್ದೇಶನದಂತೆ ಪಿಎಸ್ ಐಗಳಾದ ಯಲ್ಲಾಲಿಂಗ ಕುನ್ನೂರ ಮತ್ತು ಹನಮಂತ ಕುಡಗುಂಚಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಣಪತಿ ಹೊನ್ನಳ್ಳಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬಡಗೇರ, ಬಸವರಾಜ ಲಮಾಣಿ, ಸಂಜು ರಾಠೋಡ ಗುರುರಾಜ ಬಿ ಸೇರಿದಂತೆ ಸಿಬ್ಬಂದಿಗಳು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ