ಜನರ ಗಮನಕ್ಕೆ ಬಾರದ ಖಾತ್ರಿ ಯೋಜನೆ

ಸಿದ್ದಾಪುರದಲ್ಲಿ ಕನಿಷ್ಟ ಮಟ್ಟದಲ್ಲಿ ಕಾರ್ಯಗತ |ಜನಪ್ರತಿನಿಧಿಗಳ ಕಾರ್ಯವಿಧಾನಕ್ಕೆ ಕನ್ನಡಿ

Team Udayavani, Nov 20, 2020, 8:35 PM IST

ಜನರ ಗಮನಕ್ಕೆ ಬಾರದ ಖಾತ್ರಿ ಯೋಜನೆ

ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ. (ಸಾಂದರ್ಭಿಕ ಚಿತ್ರ)

ಸಿದ್ದಾಪುರ: ಆಹಾರ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಉದ್ದೇಶವಿಟ್ಟುಕೊಂಡು 2005ರಲ್ಲಿ ಅಂಗೀಕೃತವಾದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ತಾಲೂಕಿನಲ್ಲಿ ಅತ್ಯಂತ ಕನಿಷ್ಠ ಮಟ್ಟದಲ್ಲಿ ಕಾರ್ಯಗತಗೊಂಡಿರುವುದು ಬುಧವಾರ ಒಂಬುÕಡ್ಸಮನ್‌ ತಾಲೂಕಿಗೆ ಭೇಟಿನೀಡಿದಾಗ ಬೆಳಕಿಗೆ ಬಂದಿದೆ. ಇಷ್ಟು ದಿನಗಳ ಕಾಲ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೊಗಳಿಕೊಳ್ಳುತ್ತಿದ್ದ ಜನಪ್ರತಿನಿಧಿಗಳ ಕಾರ್ಯವಿಧಾನಕ್ಕೆ ಕನ್ನಡಿ ಹಿಡಿದಂತಾಗಿದೆ.

ಗ್ರಾಮೀಣ ಭಾಗದ ಜನತೆ ಹಸಿವಿನಿಂದ ಬಳಲಬಾರದು, ಉದ್ಯೋಗಕ್ಕಾಗಿ ನಗರಕ್ಕೆ ವಲಸೆ ಬರಬಾರದು ಎನ್ನುವ ಉದ್ದೇಶದಿಂದ ಅಕುಶಲ ಕಾರ್ಮಿಕರಿಗೆ ಒಂದು ಕುಟುಂಬಕ್ಕೆ ಒಂದು ವರ್ಷಕ್ಕೆ 100 ದಿನಗಳ ಉದ್ಯೋಗ ಖಾತ್ರಿ ಒದಗಿಸಲಾಗಿದೆ. ಜೊತೆಗೆ ಪ್ರತಿದಿನ 8 ತಾಸಿನ ಕೆಲಸಕ್ಕೆ ಕನಿಷ್ಠ 285 ರೂ. ವೇತನ ನೀಡುವ ಅವಕಾಶ ಈ ಯೋಜನೆಯಲ್ಲಿದೆ. ಸಮುದಾಯದ ರಸ್ತೆ, ಚರಂಡಿ, ಅಂಗನವಾಡಿ, ಶಾಲೆ ಕಟ್ಟಡ, ಶೌಚಾಲಯ ಮುಂತಾಗಿ, ವೈಯುಕ್ತಿಕ ಸೌಲಭ್ಯಗಳಾದ ಬೆಳೆಗಳ, ತೋಟಗಳನ್ನು ರೂಪಿತಗೊಳಿಸುವುದು, ಬಾವಿ, ಕೆರೆ, ಕೃಷಿಹೊಂಡ ಮುಂತಾದ ನೀರಾವರಿ ಸೌಲಭ್ಯಗಳನ್ನು ಜನತೆಗೆ ಒದಗಿಸಿಕೊಡುವ ಕೇವಲ ಯೋಜನೆ ಮಾತ್ರವಾಗಿರದೇ ಕಾಯ್ದೆಯಾಗಿರುವದನ್ನು ವಾರ್ಷಿಕವಾಗಿ ಅಂದಾಜು ಗುರಿ ಇಟ್ಟುಕೊಂಡ ಶೇ.100ರಲ್ಲಿ ಕೇವಲ ಶೇ.3.50 ಅನುಷ್ಠಾನಗೊಂಡಿದ್ದು ದುರದೃಷ್ಟಕರ ಎನ್ನುವುದು ಈಗ ಕಂಡುಬರುತ್ತಿದೆ.

ಈ ಯೋಜನೆಯ ಬಗ್ಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಜಿಲ್ಲಾ ಒಂಬುಡ್ಸಮನ್‌(ಏಕ ಸದಸ್ಯ ಆಯೋಗ)ದ ಮುಖ್ಯಸ್ಥ ಆರ್‌.ಜಿ. ನಾಯಕ ವಿವರ ನೀಡದಿದ್ದರೆ ಸಾರ್ವಜನಿಕರಿಗೆ ಈ ಯೋಜನೆ ಮಾಹಿತಿಯೇ ಲಭ್ಯವಾಗುತ್ತಿರಲಿಲ್ಲ. ಲಾಭವಿಲ್ಲದ ಈ ಯೋಜನೆ ಬಗ್ಗೆ ಸಂಪೂರ್ಣವಾಗಿ ಸಾರ್ವಜನಿಕ ವಲಯದಿಂದ ಮರೆಮಾಚಿದ ಅಧಿಕಾರಿಗಳು, ಅಭಿವೃದ್ಧಿ ಮಂತ್ರ ಜಪಿಸುವ ಎಲ್ಲ ಜನಪ್ರತಿನಿಧಿಗಳು ಈ ಬಗ್ಗೆ ಸಾರ್ವಜನಿಕರಿಗೆ ಉತ್ತರ ನೀಡಲೇ ಬೇಕಿದೆ. ವ್ಯಕ್ತಿಯೊಬ್ಬ ಈ ಯೋಜನೆಯ ಕೆಲಸವೊಂದಕ್ಕೆ ಸ್ವಯಂಪ್ರೇರಿತವಾಗಿ ಅರ್ಜಿ ಸಲ್ಲಿಸಿದಾಗ್ಯೂ ಸತಾಯಿಸುವ ಅಧಿಕಾರಿಗಳು, ಅನುಷ್ಠಾನಾಧಿಕಾರಿಗಳು ಮುಂದಿನ ದಿನಗಳಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಅಭಿವೃದ್ಧಿ ಮಂತ್ರ ಜಪಿಸುತ್ತ, ತಾಲೂಕಿನ ಅಧಿಕಾರಿಗಳ ಪರ ವಕಾಲತ್ತು ವಹಿಸುವ ಕ್ಷೇತ್ರದ ಶಾಸಕರು, ಮಾತೆತ್ತಿದರೆ ನಾನು ವಿಧಾನ ಸಭಾಧ್ಯಕ್ಷ ಎನ್ನುವ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕ್ಷೇತ್ರ ಜಿಲ್ಲೆಯಲ್ಲೇ ಈ ಯೋಜನೆಯಲ್ಲಿ ಕೊನೆಯ ಸ್ಥಾನದಲ್ಲಿದೆ ಎಂದರೆ ಚಿಂತನೆ ಮಾಡಬೇಕಾದ ಸಂಗತಿ. ಅರ್ಹ ಕುಟುಂಬಗಳಿಗೆ ಈ ಯೋಜನೆಯ ಕುರಿತು ಸಮರ್ಪಕ ಮಾಹಿತಿ ನೀಡುವುದು ಅಗತ್ಯವಾಗಿದೆ.

 

-ಗಂಗಾಧರ ಕೊಳಗಿ

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊನ್ನಾವರ : ಮೀನುಗಾರರನ್ನು ಬಂಧಿಸಿ ಸರಕಾರ ಗದಾಪ್ರಹಾರ ಮಾಡುತ್ತಿದೆ : ರಾಮಾ ಮೊಗೇರ ಆರೋಪ

ಹೊನ್ನಾವರ : ಮೀನುಗಾರರನ್ನು ಬಂಧಿಸಿ ಸರಕಾರ ಗದಾಪ್ರಹಾರ ಮಾಡುತ್ತಿದೆ : ರಾಮಾ ಮೊಗೇರ ಆರೋಪ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತಗೊಂಡು ಎಎಸ್ಐ ಸಾವು

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತಗೊಂಡು ಎಎಸ್ಐ ಸಾವು

honnavara news

ಸಾವಿನಲ್ಲೂ ಸಾರ್ಥಕತೆ ಮೆರೆದ ಇಂದ್ರಮ್ಮ

ಮುಂಡಗೋಡ : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿ

ಮುಂಡಗೋಡ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿ

Untitled-1

ಕೋವಿಡ್ ಸಮಯದಲ್ಲಿ ಭಾರತದ ಸಾಧನೆ ಶ್ಲಾಘನೀಯ: ಮಮತಾದೇವಿ ಜಿ.ಎಸ್.  

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.