ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Team Udayavani, Mar 19, 2024, 5:58 PM IST

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ಉದಯವಾಣಿ ಸಮಾಚಾರ
ಹೊನ್ನಾವರ: ಸದಾ ರಂಗಭೂಮಿಯ ಬಗ್ಗೆ ಚಿಂತನೆ ಮಾಡಿ ಯಕ್ಷಗಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ಶಂಭು ಹೆಗಡೆಯವರ ಬಗ್ಗೆ ಹೆಚ್ಚಿನ ಸಂಶೋಧನೆ ಆಗಬೇಕಾಗಿದೆ ಎಂದು ವಿದ್ವಾನ್‌ ಗ.ನಾ.ಭಟ್ಟ ಹೇಳಿದರು.

ತಾಲೂಕಿನ ಗುಣವಂತೆಯ ಕೆರೆಮನೆ ಶಂಭು ಹೆಗಡೆ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟ್ಯೋತ್ಸವದ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀಮಯ ಕಲಾ ಕೇಂದ್ರದ ಆವರಣಕ್ಕೆ ಅನನ್ಯತೆ ಇದೆ. ವಿಶೇಷ ಆಕರ್ಷಣೆ ಇದೆ. ಈ ವೇದಿಕೆಯಲ್ಲಿ ದೇಶದ ವಿವಿಧ ಭಾಗದಲ್ಲಿರುವ ಕಲಾ ಪ್ರಕಾರಗಳ ಪ್ರದರ್ಶನಕ್ಕೆ ಅವಕಾಶ ನೀಡಿ ದೇಶವೇ ಕೆರೆಮನೆಯನ್ನು ಸುತ್ತುವಂತೆ ಮಾಡಿರುವುದು ಅತ್ಯತ್ತಮ ಸಾಧನೆ ಎಂದರು.

ಸಾಹಿತಿ ಮತ್ತು ಹಿರಿಯ ಯಕ್ಷಗಾನ ಕಲಾವಿದರಾದ ಡಾ| ರಾಮಕೃಷ್ಣ ಗುಂದಿ, ಶಿಕ್ಷಣ ತಜ್ಞ ಪ್ರೊ| ಕೆ. ಇ.ರಾಧಾಕೃಷ್ಣ ಮತ್ತು ಸಾಹಿತಿ, ಕಾದಂಬರಿಕಾರ ಡಾ|ಗಜಾನಂದ್‌ ಶರ್ಮಾ ಹುಕ್ಕಲು ಇವರಿಗೆ “ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಮಾನ’ ಮಾಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ರಾಮಕೃಷ್ಣ ಗುಂದಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ರಾಷ್ಟ್ರೀಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ
ನಡೆಸಿಕೊಂಡು ಬರುವುದು ಕಷ್ಟ. ಆದರೂ ನಿರಂತರವಾಗಿ 14 ವರ್ಷಗಳ ಕಾಲ ಈ  ಕಾರ್ಯಕ್ರಮ ನಡೆಯುತ್ತಿರುವುದು ಸಾರ್ಥಕ
ಸಾಧನೆಯ ಮಾರ್ಗ ಎಂದರು. ಯಕ್ಷಗಾನ ಕ್ಷೇತ್ರದಲ್ಲಿ ಅಲ್ಪಸ್ವಲ್ಪ ಸಾರ್ಥಕ ಕಾರ್ಯ ಮಾಡಿದ ನನ್ನನ್ನು ಗುರುತಿಸಿದ ಕ್ಷಣ ನನ್ನ ಜೀವನದ ಸೌಭಾಗ್ಯ ಎಂದರು.

ಪ್ರೊ| ಕೆ.ಇ. ರಾಧಾಕೃಷ್ಣ ಮಾತನಾಡಿ ಸಾಮಾಜಿಕ ಮತ್ತು ರಾಜಕೀಯ ಪ್ರಭುತ್ವಗಳು ಸಂವೇದನೆಗಳನ್ನು ಕಳೆದುಕೊಂಡ ಈ
ಸಂದರ್ಭದಲ್ಲಿ ಕೆರೆಮನೆ ಕುಟುಂಬಗಳು ಸ್ಥಾಪಿಸಿದ ಸಂಸ್ಥೆಗಳು ಸಾಂಸ್ಕೃತಿಕ ಸಂವೇದನೆಗಳನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿರುವುದು ವಿಶೇಷ ಎಂದರು.

ಡಾ|ಗಜಾನನ ಶರ್ಮ ಮಾತನಾಡಿ ಉತ್ತರ ಕನ್ನಡದಲ್ಲಿ ವಿದ್ವತ್‌ ಪರಂಪರೆಯ ನದಿ ಹರಿದಿದೆ. ರಾಣಿ ಚೆನ್ನಬೈರಾದೇವಿ ಎಲಿಜಬೆತ್‌ ರಾಣಿಗಿಂತ ಶ್ರೇಷ್ಠ ಇತಿಹಾಸವನ್ನು ದಾಖಲಿಸಿದ ನೆಲ ಉತ್ತರ ಕನ್ನಡ ಜಿಲ್ಲೆ. ಉತ್ತರ ಕನ್ನಡ ಜಿಲ್ಲೆಗೆ ದಿವ್ಯ ಅಸ್ಮಿತೆ ಇದೆ, ಹಾಗೆಯೇ ದಿವ್ಯ ವಿಸ್ಮೃತಿಯೂ ಇದೆ. ತನ್ನ ಬಣ್ಣಿಸಲಿಲ್ಲ, ಇದಿರು ಹಳಿಯಲಿಲ್ಲ ಎಂಬಂತಹ ಜನ ಉತ್ತರ ಕನ್ನಡದವರಾಗಿದ್ದಾರೆ ಎಂದರು.

ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದ ಅಂಕಣಕಾರ ರಾಜು ಅಡಕಳ್ಳಿ ಮಾತನಾಡಿ ಹೆಗ್ಗೊàಡಿನಂತಹ ಗ್ರಾಮೀಣ ಪ್ರದೇಶ
ಸಾಂಸ್ಕೃತಿಕ ಕ್ರಿಯಾಶೀಲತೆಯನ್ನು ಉಳಿಸಿಕೊಂಡಂತೆ, ಕೆರೆಮನೆ ಈ ಪ್ರದೇಶ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಿದೆ
ಎಂದರು. ಒಂದು ವಿಶ್ವವಿದ್ಯಾಲಯ ಮಾಡುವ ಕಾರ್ಯ ಇಡುಗುಂಜಿ ಯಕ್ಷಗಾನ ಮೇಳ ಮತ್ತು ಶ್ರೀಮಯ ಕಲಾಕೇಂದ್ರ ಮಾಡಿ ಯಕ್ಷಗಾನವನ್ನು ವಿಶ್ವಗಾನವನ್ನಾಗಿ ಪರಿವರ್ತಿಸಿದೆ ಎಂದರು. ಶ್ರೀಶಿವಾನಂದ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಈಶ್ವರ್‌ ಭಟ್ಟ, ಕಡ್ಲೆ ಕಾರ್ಯಕ್ರಮ ನಿರ್ವಹಿಸಿದರು.

ಭರತನಾಟ್ಯ, ನಾಟಕ ಪ್ರದರ್ಶನ
ಸಭಾ ಕಾರ್ಯಕ್ರಮದ ನಂತರ ಬೆಂಗಳೂರಿನ ನೂಪುರ ಸಂಸ್ಥೆ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಕಲಾಶ್ರೀ ಪಂಡಿತ್‌ ಮುದ್ದು ಮೋಹನ್‌ ರವರಿಂದ ಹಿಂದುಸ್ತಾನಿ ಶಾಸ್ತ್ರೀಯ ಗಾಯನ ನಡೆಯಿತು. ತಬಲಾದಲ್ಲಿ ಗೋಪಾಲಕೃಷ್ಣ ಹೆಗಡೆ ಕಲಬಾಗ್‌ ಹಾಗೂ ಹಾರ್ಮೋನಿಯಂ ನಲ್ಲಿ ಭರತ್‌ ಹೆಗಡೆ ಸಾಥ್‌ ನೀಡಿದರು. ಬಳಿಕ ಕಿನ್ನರ ಮೇಳ ತುಮರಿ ಇವರಿಂದ “ಅನ್ಯಾಳ ಡೈರಿ’ ಎಂಬ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.