Udayavni Special

ರಾಜ್ಯದಲ್ಲಿ ಹೊಸ ರಾಜಕೀಯ ಪರ್ವ ಆರಂಭ

Team Udayavani, May 24, 2019, 4:28 PM IST

nc-2

ಕಾರವಾರ: ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಸಹ ಹೊಸ ರಾಜಕೀಯ ಪರ್ವ ಆರಂಭವಾಗಲಿದೆ. ಕರ್ನಾಟಕದ ಮಣ್ಣಿಗೆ ನ್ಯಾಯ, ಗೌರವ ಕೊಡುವಂತಹ, ಇಲ್ಲಿನ ಜನರ ಬದುಕಿಗೆ ಭರವಸೆ ಕೊಡುವಂತಹ ರಾಜಕೀಯವನ್ನು ಬಿಜೆಪಿ ಮಾಡಲಿದೆ. ಅಂಥ ಸರ್ಕಾರ ಬರಲಿದೆ ಎಂಬ ವಿಶ್ವಾಸವನ್ನು ಉತ್ತರ ಕನ್ನಡದಿಂದ ಆರನೇ ಬಾರಿಗೆ ಆಯ್ಕೆಯಾದ ಸಂಸದ ಅನಂತಕುಮಾರ್‌ ಹೆಗಡೆ ವ್ಯಕ್ತಪಡಿಸಿದರು.

ಕುಮಟಾದಲ್ಲಿ ಅವರು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಅವರಿಂದ ಗೆಲುವಿನ ಪ್ರಮಾಣ ಪತ್ರ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಕೇಂದ್ರದಲ್ಲಿ ಮೋದಿ ಅವರು ದೇಶ ಕೇಂದ್ರಿತ, ಜನ ಕೇಂದ್ರಿತ, ಸೇವಾ ಕೇಂದ್ರಿತ, ಸೀಮಾ ಕೇಂದ್ರಿತ ಆಡಳಿತವನ್ನು ಕಳೆದ ಐದು ವರ್ಷಗಳಲ್ಲಿ ನೀಡಿದ್ದಾರೆ. ಅವರ ನೇತೃತ್ವದಲ್ಲಿ ನಾವು ಮುಂದಿನ ತಲೆಮಾರು ನೆನಪಿಡುವಂತಹ ಕಾರ್ಯಕ್ರಮಗಳನ್ನು ನೀಡಲಿದ್ದೇವೆ. ಮುಂದಿನ ದಿನಗಳಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ ಎಂದರು.

ಬದಲಾಗುತ್ತಿರುವ ಇವತ್ತಿನ ಪ್ರಸಕ್ತ ವಿದ್ಯಾಮಾನಕ್ಕೆ ಭಾರತವನ್ನು ತೆಗೆದುಕೊಂಡು ಹೋಗಬೇಕಿದೆ. ಚುನಾವಣೆಯಲ್ಲಿ ನಾವು ಇಟ್ಟ ವಿಚಾರಗಳಿಗೆ ಜನರು ಅದಕ್ಕೆ ಬೆಂಬಲ ನೀಡಿದ್ದಾರೆ. ಹಾಗಾಗಿ ಮೋದಿ ಸರ್ಕಾರ ಹೊಸ ಆಡಳಿತ ನೀಡಲಿದೆ. ದೇಶಕ್ಕಾಗಿ ರಾಜಕೀಯ ಮಾಡಬೇಕೆಂಬ ವಾತಾವರಣ ಇದೆ. ಈ ಸಂಪ್ರದಾಯ ಬೆಳೆಯುತ್ತಿದೆ. ಜನರು ಜಾಗೃತರಾಗಿದ್ದಾರೆ. ಧನಾತ್ಮಕ ಬದಲಾವಣೆ ಬೆಳೆಯುತ್ತಿದೆ. ಇದಕ್ಕೆ ಪೂರಕವಾಗಿ ಜನರು ತಮ್ಮ ನಿಲುವು ತಿಳಿಸಿದ್ದಾರೆ. 25 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ. ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಜನ ಇದ್ದಾರೆ. ಕರ್ನಾಟಕದ ರಾಜಕೀಯ ದಿಕ್ಕು ಬದಲಾಗುತ್ತಿದೆ. ಹೇಗಾದರೂ ಗೆಲ್ಲಬೇಕು, ದರ್ಬಾರು ಮಾಡಬೇಕು ಎಂಬ ರಾಜಕಾರಣ ಮರೆಯಾಗುತ್ತಿದೆ. ದೇಶಕ್ಕಾಗಿ ರಾಜಕಾರಣ ಎಂಬ ನಿಲುವಿಗೆ ಜನ ಮತ ನೀಡಿದ್ದಾರೆ. ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಅನಂತಕುಮಾರ್‌ ಹೆಗಡೆ ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

covid 19-4500ಕ್ಕೆ ಏರಿಕೆ; ಏ.14ರ ನಂತರ ಲಾಕ್ ಡೌನ್ ಮುಂದುವರಿಕೆಗೆ ಕೇಂದ್ರದ ಲೆಕ್ಕಾಚಾರ

covid 19-4500ಕ್ಕೆ ಏರಿಕೆ; ಏ.14ರ ನಂತರ ಲಾಕ್ ಡೌನ್ ಮುಂದುವರಿಕೆಗೆ ಕೇಂದ್ರದ ಲೆಕ್ಕಾಚಾರ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ರೋಗಿಗಾಗಿ ಕಾರಿನಲ್ಲಿ 540 ಕಿ.ಮೀ. ಸಂಚರಿಸಿದ ವೈದ್ಯ!; ಕೋಲ್ಕತಾದ ವೈದ್ಯರ ಸಾಹಸ

ರೋಗಿಗಾಗಿ ಕಾರಿನಲ್ಲಿ 540 ಕಿ.ಮೀ. ಸಂಚರಿಸಿದ ವೈದ್ಯ!; ಕೋಲ್ಕತಾದ ವೈದ್ಯರ ಸಾಹಸ

ಕೋವಿಡ್ 19, ಸರ್ಕಾರದ ವಿರುದ್ಧ ಗಂಭೀರ ಆರೋಪ; ಅಸ್ಸಾಂ ಶಾಸಕ ಅಮಿನುಲ್ ಅರೆಸ್ಟ್

ಕೋವಿಡ್ 19, ಸರ್ಕಾರದ ವಿರುದ್ಧ ಗಂಭೀರ ಆರೋಪ; ಅಸ್ಸಾಂ ಶಾಸಕ ಅಮಿನುಲ್ ಅರೆಸ್ಟ್

ಕೋವಿಡ್-19 ಆರ್ಭಟ: ಜಗತ್ತಿನಾದ್ಯಂತ 75 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಕೋವಿಡ್-19 ಆರ್ಭಟ: ಜಗತ್ತಿನಾದ್ಯಂತ 75 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಗದಗ ನಗರದ 80ರ ವೃದ್ಧೆಗೆ ಸೋಂಕು: 44 ಜನರ ವೈದ್ಯಕೀಯ ತಪಾಸಣೆ

ಗದಗ ನಗರದ 80ರ ವೃದ್ಧೆಗೆ ಸೋಂಕು: 44 ಜನರ ವೈದ್ಯಕೀಯ ತಪಾಸಣೆ

ಸಿದ್ದರಾಮಯ್ಯ ರಿಯಾಲಿಟಿ ಚೆಕ್: ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ

ಸಿದ್ದರಾಮಯ್ಯ ರಿಯಾಲಿಟಿ ಚೆಕ್: ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

07-April-19

ಕೃಷಿ ಕಾರ್ಮಿಕರಿಗೆ ಇಲ್ಲ ಕ್ಷೀರ ಭಾಗ್ಯ

uk-tdy-1

ವೈರಾಣು ತಡೆಗೆ ಫೇಸ್‌ ಶೀಲ್ಡ್‌ ಅಣಿ

10ರಿಂದ ಜಿಲ್ಲೆಯಲ್ಲಿ ಪುನಃ ಸರ್ವೇ

10ರಿಂದ ಜಿಲ್ಲೆಯಲ್ಲಿ ಪುನಃ ಸರ್ವೇ

ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19  ಕಂಟಕ

ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19 ಕಂಟಕ

uk-tdy-1

ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

07-April-23

ಕಲ್ಲಂಗಡಿ-ಪಪ್ಪಾಯಿ ಬೆಳೆಗಾರರ ಪರದಾಟ

covid 19-4500ಕ್ಕೆ ಏರಿಕೆ; ಏ.14ರ ನಂತರ ಲಾಕ್ ಡೌನ್ ಮುಂದುವರಿಕೆಗೆ ಕೇಂದ್ರದ ಲೆಕ್ಕಾಚಾರ

covid 19-4500ಕ್ಕೆ ಏರಿಕೆ; ಏ.14ರ ನಂತರ ಲಾಕ್ ಡೌನ್ ಮುಂದುವರಿಕೆಗೆ ಕೇಂದ್ರದ ಲೆಕ್ಕಾಚಾರ

ಕೋವಿಡ್ 19: ಸುರಕ್ಷತಾ ಕ್ರಮಗಳ ಪರಿಶೀಲನೆ

ಕೋವಿಡ್ 19: ಸುರಕ್ಷತಾ ಕ್ರಮಗಳ ಪರಿಶೀಲನೆ

07-April-22

ಪಡಿತರಕ್ಕೆ ಮುಗಿಬಿದ್ದ ಫಲಾನುಭವಿಗಳು-ಆತಂಕ

2 ಫೀವರ್‌ ಕ್ಲಿನಿಕ್‌ ಆರಂಭ

2 ಫೀವರ್‌ ಕ್ಲಿನಿಕ್‌ ಆರಂಭ