ವಿಕ್ರಮಾದಿತ್ಯ ನೌಕೆ ವೀಕ್ಷಣೆಗೆ ಮುಕ್ತ


Team Udayavani, Jan 21, 2019, 10:39 AM IST

21-january-17.jpg

ಕಾರವಾರ: ಐಎನ್‌ಎಸ್‌ ಕದಂಬ ಸೀಬರ್ಡ್‌ ನೌಕಾನೆಲೆಯಲ್ಲಿ ವಿದ್ಯಾರ್ಥಿಗಳಿಗೆ ದೇಶದ ಅತಿದೊಡ್ಡ ವಿಮಾನ ವಾಹಕ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯ ವೀಕ್ಷಣೆಗೆ ರವಿವಾರ ಮುಕ್ತ ಅವಕಾಶ ನೀಡಲಾಯಿತು. ಕಾರವಾರದ ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳು ನೌಕೆಯನ್ನು ಕಣ್ತುಂಬಿಕೊಂಡರು.

ಕೊಚ್ಚಿನ್‌ ಶಿಪ್‌ ರಿಪೇರಿ ಯಾರ್ಡ್‌ನಿಂದ ದುರಸ್ತಿಯಾದ ಬಳಿಕ ಇದೇ ಮೊದಲ ಬಾರಿಗೆ ವಿಕ್ರಮಾದಿತ್ಯ ನೌಕೆಯನ್ನು ಕಾರವಾರದ ಐಎನ್‌ಎಸ್‌ ಕದಂಬ ನೌಕಾಬೇಸ್‌ನಲ್ಲಿ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.

ನೌಕಾ ವೀಕ್ಷಣೆಗೆ ಬಂದ ವಿದ್ಯಾರ್ಥಿಗಳಿಗೆ ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ನೌಕಾಸೇನೆ ವಹಿಸುತ್ತಿರುವ ಮಹತ್ವದ ಪಾತ್ರಗಳ ಬಗ್ಗೆ ಹಾಗೂ ಸೇನೆ ತನ್ನ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ನೌಕಾದಳವನ್ನು ಹೇಗೆ ಬಲಪಡಿಸಿದೆ ಎಂಬ ಕುರಿತು ಮಾಹಿತಿ ನೀಡಲಾಯಿತು. ರಾಕೆಟ್ ಲಾಂಚರ್‌ ಗನ್‌, ಮಲ್ಟಿ ಪಾಯಿಂಟರ್‌ ಗನ್‌, ನೀರಿನಾಳದಲ್ಲಿ ನುಗ್ಗಿ ಶತ್ರುಗಳ ಹಡಗನ್ನು ಎದುರಿಸಲು ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದರ ಬಗ್ಗೆ ಸೇನಾ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ನೌಕಾನೆಲೆ ಒಳಭಾಗದಲ್ಲಿ ಮೊಬೈಲ್‌, ಕ್ಯಾಮೆರಾ ನಿಷೇಧಿಸಲಾಗಿತ್ತು. ವಿವಿಧ ಯುದ್ಧ ನೌಕೆಗಳ ಬಗ್ಗೆ ಮಾಹಿತಿ ನೀಡಲು ಮಾರ್ಗದರ್ಶಿಗಳನ್ನು ನೇಮಿಸಲಾಗಿತ್ತು.

ಮಾಧ್ಯಮಗಳಿಗೆ ವಿವರಿಸಿದ ನೌಕಾಸೇನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಅಜಯ್‌ ಕಪೂರ್‌ ಗಣರಾಜ್ಯೋತ್ಸವದ ನಿಮಿತ್ತ ಭಾರತ್‌ ಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ವಿಕ್ರಮಾದಿತ್ಯ ನೌಕೆ ವೀಕ್ಷಣೆಗೆ ಅವಕಾಶ ನೀಡಿದ್ದೇವೆ ಎಂದು ತಿಳಿಸಿದರು.

ವಿಕ್ರಮಾದಿತ್ಯ ಯುದ್ದ ನೌಕೆ ಮೂಲತಃ ರಷ್ಯಾ ದೇಶದ್ದಾಗಿದ್ದು 1981ರಲ್ಲಿ ತನ್ನ ಸೇವೆ ಪ್ರಾರಂಭಿಸಿದೆ. ರಷ್ಯಾದಿಂದ ಭಾರತಕ್ಕೆ ವಿಕ್ರಮಾದಿತ್ಯ ಯುದ್ಧ ನೌಕೆಯನ್ನು 62ಸಾವಿರ ಕೋಟಿಗೆ ಖರೀದಿಸಿದ್ದು, 2013ರಿಂದ ಭಾರತೀಯ ಸೇನೆಯಲ್ಲಿ ಯುದ್ಧ ನೌಕೆ ತನ್ನ ಸೇವೆ ಪ್ರಾರಂಭಿಸಿದೆ.

ನೌಕೆ ಸುಮಾರು 273 ಮೀ. ಉದ್ದ ಹಾಗೂ 60 ಮೀ. ಅಗಲ ಇದ್ದು 1500 ಸಿಬ್ಬಂದಿ ಹಾಗೂ 110 ಅಧಿಕಾರಿಗಳು ನೌಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಕಾರವಾರ, ಗೋವಾ, ವಿಶಾಖಪಟ್ಟಣ, ಮುಂಬೈ ಹಾಗೂ ಕೊಚ್ಚಿ ನೌಕಾನೆಲೆಯಲ್ಲಿ ವಿಕ್ರಮಾದಿತ್ಯ ನೌಕೆ ತಿರುಗಾಟ ನಡೆಸುತ್ತದೆ.

ಯುದ್ಧ ನೌಕೆಯಲ್ಲಿ 4 ಹೆಲಿಕ್ಯಾಪ್ಟರ್‌ ಏಕಕಾಲಕ್ಕೆ ಇಳಿಸುವ, ಜೊತೆಗೆ 16 ಮಿಗ್‌ ವಿಮಾನಗಳು, 29 ವಿಮಾನದ ಬೇಸ್‌ ನೌಕೆಯಲ್ಲಿದ್ದು ನೌಕೆಯ ಮೇಲಿಂದಲೇ ವಿಮಾನ ಸಹ ಹಾರಾಡುವ ರನ್‌ವೇ ನಿರ್ಮಿಸಲಾಗಿದೆ.

ಯುದ್ಧ ನೌಕೆಯ ವಿಶೇಷತೆ
• ವಿಕ್ರಮಾದಿತ್ಯ ನೌಕೆಯು 44,500 ಟನ್‌ ತೂಕ ಇದ್ದು, 284 ಮೀಟರ್‌ ಉದ್ದ, 60 ಮೀಟರ್‌ ಎತ್ತರ ಇದೆ. 34 ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್‌ಗಳನ್ನು ಹೊರುವ ಸಾಮರ್ಥ್ಯವನ್ನು ಇದು ಹೊಂದಿದೆ.

• ನೌಕೆಯಲ್ಲಿ 1,600 ಸಿಬ್ಬಂದಿ ಇದರಲ್ಲಿ ಕಾರ್ಯನಿರ್ವಹಿಸುತ್ತಾರೆ. ಒಮ್ಮೆ ಇಂಧನ ಭರ್ತಿಯಾದರೆ 13,000 ಕಿ.ಮೀ. ದೂರವನ್ನು ಇದು ಕ್ರಮಿಸುತ್ತದೆ. 2013ರ ನವೆಂಬರ್‌ನಲ್ಲಿ ಭಾರತೀಯ ನೌಕಾಪಡೆ ಸೇವೆಗೆ ಇದು ಸೇರಿದೆ.

• ಜ.26 ರಂದು ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಭಾರತ್‌ ಪರ್ವ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ದೇಶದ ಸೇನೆ ಬಗ್ಗೆ ಜನರಿಗೆ ಮಾಹಿತಿ ನೀಡುವುದು ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನೌಕಾದಳದ ಬಗ್ಗೆ ಸಹ ಮಾಹಿತಿ ನೀಡುವ ಸಲುವಾಗಿ ಯುದ್ಧ ನೌಕೆಯನ್ನ ಸಾರ್ವಜನಿಕರಿಗೆ ನೋಡುವ ಅವಕಾಶ ಮಾಡಿಕೊಡಲಾಗಿತ್ತು. ಅದರಲ್ಲೂ ಐಎನ್‌ಎಸ್‌ ವಿಕ್ರಮಾದಿತ್ಯ ಯುದ್ಧ ನೌಕೆ ದೇಶದ ಅತಿದೊಡ್ಡ ನೌಕೆಯಾಗಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.