ಸರ್ಕಾರಿ ಆಂಗ್ಲ ಶಾಲೆಯತ್ತ ಪಾಲಕರ ಚಿತ್ತ

•ಪಾಲಕರು ಮಕ್ಕಳೊಂದಿಗೆ ಶಾಲೆಗೆ ಆಗಮಿಸಲಿದ್ದಾರೆ ಇಂದು: ಡಿಡಿಪಿಐ ಮಂಜುನಾಥ

Team Udayavani, May 29, 2019, 11:04 AM IST

uk-tdy-1..

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳ ವಿವಿಧ 8 ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್ಕೆಜಿ ಹಾಗೂ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಅಲ್ಲದೇ ಕರಾವಳಿ ತಾಲೂಕುಗಳ 5 ಇತರೆ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಸುವ ಅವಕಾಶ ಇರುವ ಸೌಲಭ್ಯವನ್ನು ಪ್ರಾರಂಭಿಸಲಾಗಿದ್ದು, ಪೋಷಕರು ಸಹ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ.

ಈ ಸಂಬಂಧ ಸರ್ಕಾರಿ ಶಾಲೆಗಳಿಗೆ ಬಂದು ಪೋಷಕರು ಪ್ರವೇಶ ದಿನಾಂಕ ಕೇಳಿಕೊಂಡು ಮರಳಿದ್ದಾರೆ. ಶಾಲಾ ಪ್ರಾರಂಭೋತ್ಸವದ ದಿನವೇ ಆಂಗ್ಲ ಮಾಧ್ಯಮ 1ನೇ ತರಗತಿಗೆ ಪ್ರವೇಶ ಪಡೆಯಲು ಪೋಷಕರು ಮಕ್ಕಳೊಂದಿಗೆ ಶಾಲೆಗಳಿಗೆ ಬರಲಿದ್ದಾರೆ ಎಂದು ಹೇಳಲಾಗಿದೆ.

ಕಾರವಾರದ ಬಝಾರ್‌ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಪಡೆಯಲು ಹತ್ತು ಪೋಷಕರು ವಿಚಾರಿಸಿಕೊಂಡು ಹೋಗಿದ್ದು, ಸಿದ್ಧತೆ ಮಾಡಿಕೊಂಡಿದ್ದಾರೆ. ಆಂಗ್ಲ ಮಾಧ್ಯಮ ಆರಂಭವಾದ ಸರ್ಕಾರಿ ಶಾಲೆಯಲ್ಲಿ 1 ನೇ ತರಗತಿಗೆ 30 ಮಕ್ಕಳ ಪ್ರವೇಶಕ್ಕೆ ಅವಕಾಶವಿದೆ. ಅಲ್ಲದೇ ಇಲ್ಲಿ ಓರ್ವ ಶಿಕ್ಷಕರಿಗೆ ಆಂಗ್ಲಭಾಷೆಯಲ್ಲಿ ಶಿಕ್ಷಣ ನೀಡಲು ರಜಾ ಅವಧಿಯಲ್ಲಿ ಜಿಲ್ಲಾ ಡಯಟ್ ಸಂಸ್ಥೆಗಳಲ್ಲಿ ತರಬೇತಿ ಸಹ ನೀಡಲಾಗಿದೆ. ಭಟ್ಕಳ ತಾಲೂಕಿನ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗೆ 50 ಅರ್ಜಿಗಳು ಬಂದಿದ್ದು, ಇಲ್ಲಿ ಮೊದಲು ಬಂದ 30 ಮಕ್ಕಳಿಗೆ ಪ್ರವೇಶ ನೀಡಲು ಡಿಡಿಪಿಐ ಸೂಚಿಸಿದ್ದಾರೆ. ಹೆಚ್ಚುವರಿ ಮಕ್ಕಳಿಗೆ ಪ್ರವೇಶಾತಿ ನೀಡಲು ಸರ್ಕಾರದ ಹಿರಿಯ ಅಧಿಕಾರಿಗಳ ಅನುಮತಿ ಕೋರುವ ಸಾಧ್ಯತೆಗಳಿವೆ.

ಎಲ್ಕೆಜಿ ಪ್ರವೇಶಕ್ಕೆ ಭಾರೀ ಬೇಡಿಕೆ: ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್ಕೆಜಿ ಪ್ರಾರಂಭಿಸಲು ಸರ್ಕಾರ ತಿರ್ಮಾನಿಸಿದ್ದು, ಈ ಶಾಲೆಗಳಲ್ಲಿ 1ನೇ ತರಗತಿಗೆ ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಪಡೆಯಲು ಸಹ ಅವಕಾಶ ಕಲ್ಪಿಸಲಾಗಿದೆ. ಕರಾವಳಿ ಶೈಕ್ಷಣಿಕ ಜಿಲ್ಲೆಯ 8 ಶಾಲೆಗಳಲ್ಲಿ ಈ ಅವಕಾಶ ಕಲ್ಪಿಸಲಾಗಿದೆ. ಕಾರವಾರದ ಶಿರವಾಡ ಮತ್ತು ಅಮದಳ್ಳಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್ಕೆಜಿ ಹಾಗೂ 1 ನೇ ತರಗತಿಗೆ ಆಂಗ್ಲ ಮಾಧ್ಯಮದ ಪ್ರವೇಶ ಅವಕಾಶವಿದೆ. ಕಾರವಾರ ಬಝಾರ್‌ ಶಾಲೆಯಲ್ಲಿ ಸರ್ಕಾರಿ ಎಲ್ಕೆಜಿ ಪ್ರಾರಂಭಿಸುತ್ತೀರಾ ಎಂದು ಹಲವು ಪೋಷಕರು ವಿಚಾರಿಸಿದ್ದಾರೆ. ಆದರೆ ಶಿಕ್ಷಕರು ಎಲ್ಕೆಜಿ ಆರಂಭವಾಗಿಲ್ಲ ಎಂದು ತಿಳಿಸಿದ್ದಾರೆ. ಖಾಸಗಿ ಶಾಲೆಗಳಲ್ಲಿ 1ನೇ ತರಗತಿಗೆ 12 ರಿಂದ 18 ಸಾವಿರದ ವರೆಗೆ ದೇಣಿಗೆ ಹಾಗೂ ಶುಲ್ಕ ಇರುವ ಕಾರಣ ಪೋಷಕರಿಗೆ ಭಾರೀ ಹೊರೆಯಾಗಿದೆ. ಎಲ್ಕೆಜಿ ಪ್ರವೇಶಕ್ಕೆ ಸಹ 10 ಸಾವಿರದಿಂದ 15 ಸಾವಿರ ವಸೂಲಿ ಖಾಸಗಿ ಶಾಲೆಗಳಲ್ಲಿ ನಡೆದಿದೆ. ಆದರೆ ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೂರು ನೀಡಲು ಮಾತ್ರ ಯಾವ ಪೋಷಕರು ಸಿದ್ಧರಿಲ್ಲ. ಈಗ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದನ್ನು ಬಹುತೇಕ ಪೋಷಕರು ಪ್ರಶಂಸಿಸಿದ್ದಾರೆ. ಹೆಚ್ಚಾಗಿ ಉತ್ತರ ಕರ್ನಾಟಕದ ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿದ್ದು, ಸರ್ಕಾರ ಇಲ್ಲಿಯೂ ಸಹ ಇಂಗ್ಲಿಷ್‌ ಮಾಧ್ಯಮ ಆರಂಭಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಸರ್ಕಾರ ಅನುಮತಿ ನೀಡಿರುವ ಶಾಲೆಗಳಲ್ಲಿ ಎಲ್ಕೆಜಿ ಹಾಗೂ 1ನೇ ತರಗತಿಗೆ ಆಂಗ್ಲ ಮಾಧ್ಯಮಕ್ಕೆ ಪ್ರವೇಶ ನೀಡುತ್ತೇವೆ. ಎಲ್ಕೆಜಿ ಪ್ರಾರಂಭವಾಗುವ 8 ಶಾಲೆಗಳಿಗೆ ಹೆಚ್ಚುವರಿಯಾಗಿ ಆಂಗ್ಲ ಭಾಷೆ ಕಲಿಸಲು ಓರ್ವ ಶಿಕ್ಷಕಿ ಹಾಗೂ ಆಯಾರನ್ನು ನೀಡುತ್ತಿದ್ದೇವೆ. ಇನ್ನು 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಪ್ರಾರಂಭವಾಗುವ 5 ಶಾಲೆಗಳಿಗೆ ಅಲ್ಲಿನ ಶಿಕ್ಷಕರಿಗೆ ಆಂಗ್ಲ ಭಾಷೆ ಕಲಿಕೆ ತರಬೇತಿ ನೀಡಲಾಗಿದೆ. ಕಲಿಕಾ ಸಾಮಾಗ್ರಿಗೆ ಕೊರತೆಯಿಲ್ಲ. ಎಲ್ಲ ಸೌಲಭ್ಯ ಇರುವ ಶಾಲೆಗಳನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ.•ಡಿ.ಮಂಜುನಾಥ, ಡಿಡಿಪಿಐ, ಕಾರವಾರ.

ಆಂಗ್ಲ ಮಾಧ್ಯಮ ಆರಂಭವಾಗುವ ಶಾಲೆ ಎಂಬ ಬ್ಯಾನರ್‌ ಮೊದಲೇ ಹಾಕಿದ ಕಾರಣ ಬಝಾರ್‌ ಶಾಲೆಗೆ ಹಲವು ಪೋಷಕರು ಬಂದು ಪ್ರವೇಶ ಸಂಬಂಧ ವಿಚಾರಿಸಿಕೊಂಡು ಹೋಗಿದ್ದಾರೆ. ಹಾಗಾಗಿ ಆಂಗ್ಲ ಮಾಧ್ಯಮಕ್ಕೆ ಮಕ್ಕಳ ಪ್ರವೇಶ ಆಗಲಿದೆ ಎಂಬ ವಿಶ್ವಾಸವಿದೆ.•ಮಾಲಾ ಚಂದಾವರಕರ್‌, ಮುಖ್ಯೋಪಾಧ್ಯಾಯರು ಸಹಿಪ್ರಾ ಶಾಲೆ, ಬಝಾರ್‌. ಕಾರವಾರ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.