ಭಟ್ಕಳ ರೈಲ್ವೆ ನಿಲ್ದಾಣದಲ್ಲಿ ಪಾರ್ಕಿಂಗ್‌ ಶಿಸ್ತು

ವಾಹನ ಅಡ್ಡಾದಿಡ್ಡಿ ನಿಲ್ಲಿಸಿದರೆ ದಂಡ

Team Udayavani, May 9, 2022, 5:16 PM IST

19

ಭಟ್ಕಳ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌ ಮಾಡಿ ಹೋಗುತ್ತಿರುವುದರಿಂದ ಇತರೆ ಜನರಿಗೆ ತೊಂದರೆಯಾಗುತ್ತಿದ್ದು, ಇದನ್ನು ಮನಗಂಡ ರೈಲ್ವೆ ಪೊಲೀಸರು ಶಿಸ್ತುಬದ್ಧ ಪಾರ್ಕಿಂಗ್‌ ವ್ಯವಸ್ಥೆ ಮಾಡಿದ್ದಾರೆ.

ಮುಟ್ಟಳ್ಳಿಯಲ್ಲಿರುವ ರೈಲ್ವೆ ನಿಲ್ದಾಣದ ಎದುರು ಶಿಸ್ತಾಗಿ ಪಾರ್ಕಿಂಗ್‌ ವ್ಯವಸ್ಥೆಯನ್ನು ರೈಲ್ವೆ ಪೊಲೀಸರು ಜಾರಿಗೆ ತಂದಿದ್ದು, ಇನ್ನು ಮುಂದೆ ವಾಹನ ಸವಾರರು ಬೇಕಾಬಿಟ್ಟಿ ಎಲ್ಲೆಂದರಲ್ಲಿ ಪಾರ್ಕಿಂಗ್‌ ಮಾಡಿದರೆ ವಾಹನಕ್ಕೆ ಸರಪಳಿಯಲ್ಲಿ ಕಟ್ಟಿಹಾಕಲಾಗುತ್ತದೆ. ಇದನ್ನು ಬಿಡಿಸಿಕೊಂಡು ಹೋಗಬೇಕಿದ್ದರೆ ದಂಡ ಕಟ್ಟುವುದು ಅನಿವಾರ್ಯವಾಗಲಿದೆ.

ರೈಲ್ವೆ ನಿಲ್ದಾಣದ ಎದುರು ಪಾರ್ಕಿಂಗ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಇದ್ದರೂ ಕೆಲವರು ರೈಲ್ವೆ ನಿಲ್ದಾಣಕ್ಕೆ ಒಳಹೋಗುವ ದ್ವಾರದ ಆಸುಪಾಸಿನಲ್ಲೇ ವಾಹನ ಪಾರ್ಕಿಂಗ್‌ ಮಾಡುತ್ತಿದ್ದರು. ಇದರಿಂದ ರೈಲ್ವೆ ನಿಲ್ದಾಣಕ್ಕೆ ಬರುವ-ಹೋಗುವ ಪ್ರಯಾಣಿಕರಿಗೆ, ಆಟೋ ರಿಕ್ಷಾದಲ್ಲಿ ಬರುವವವರಿಗೆ ತೊಂದರೆಯಾಗುತ್ತಿತ್ತು. ಹಲವು ಬಾರಿ ಸವಾರರಿಗೆ ಇಲ್ಲಿ ವಾಹನ ನಿಲ್ಲಿಸಬೇಡಿ ಎಂದು ಸೂಚಿಸಿದ್ದರೂ, ಫಲಕ ಹಾಕಿದ್ದರೂ ಪ್ರಯೋಜನವಾಗದೆ ಯಥಾಸ್ಥಿತಿ ಮುಂದುವರಿದಿತ್ತು.

ರೈಲ್ವೆ ನಿಲ್ದಾಣದ ಹೊರಗೆ ಎರಡು ಕಡೆ ಪಾರ್ಕಿಂಗ್‌ ಗೋಸ್ಕರವೇ ಶೆಡ್‌ ನಿರ್ಮಿಸಿದ್ದರೂ ಕೆಲವರು ಅಲ್ಲಿ ವಾಹನ ನಿಲ್ಲಿಸದೇ ನಿಲ್ದಾಣದ ಎದುರಿಗೆ ನಿಲ್ಲಿಸುತ್ತಿರುವುದು ಹಾಗೂ ಇದರಿಂದ ಕಿರಿಕಿರಿ ಆಗುತ್ತಿರುವ ಕುರಿತು ರೈಲ್ವೆ ಪೊಲೀಸರಿಗೆ ಸಾಕಷ್ಟು ದೂರುಗಳು ಬಂದಿದ್ದವು. ಹೀಗಾಗಿ ರೈಲ್ವೆ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

ರೈಲ್ವೆ ನಿಲ್ದಾಣದೊಳಗೆ ಹೋಗುವ ದ್ವಾರದ ಆಸುಪಾಸಿನಲ್ಲಿ ವಾಹನ ಪಾರ್ಕಿಂಗ್‌ ಮಾಡಿದಲ್ಲಿ ದಂಡ ಸಹಿತ ವಾಹನಕ್ಕೆ ಸರಪಳಿ ಹಾಕಿ ಲಾಕ್‌ ಮಾಡಲಾಗುತ್ತಿದೆ. ದ್ವಾರದ ಆಸುಪಾಸಿನಲ್ಲಿ ಪಾರ್ಕಿಂಗ್ ಮಾಡಿದವರಿಂದ ಹೇಳಿಕೆ ಪಡೆದು ವಾಹನ ಬಿಡುವ ವ್ಯವಸ್ಥೆಯನ್ನೂ ರೂಪಿಸಿರುವುದು ರೈಲ್ವೆ ನಿಲ್ದಾಣದಲ್ಲಿ ಶಿಸ್ತುಬದ್ಧ ಪಾರ್ಕಿಂಗ್‌ ವ್ಯವಸ್ಥೆಗೆ ಆದ್ಯತೆ ನೀಡಿದಂತಾಗಿದೆ. ರೈಲ್ವೆ ಪೊಲೀಸರ ಕ್ರಮದಿಂದ ವಾಹನ ಸವಾರರು ನಿಗದಿತ ಸ್ಥಳದಲ್ಲಿ ತಮ್ಮ ವಾಹನ ಪಾರ್ಕಿಂಗ್‌ ಮಾಡಿ ಬರುವಂತಾಗಿದೆ. ರೈಲ್ವೆ ಪೊಲೀಸರು ಪಾರ್ಕಿಂಗ್‌ ವ್ಯವಸ್ಥೆಯಲ್ಲಿ ಇದೇ ಶಿಸ್ತನ್ನು ನಿರಂತರವಾಗಿರುವಂತೆ ಗಮನಹರಿಸಬೇಕು ಎನ್ನುವ ಆಗ್ರಹ ಸಾರ್ವಜನಿಕರಿಂದ ಕೇಳಿಬಂದಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.