ದ್ವಿಚಕ್ರ ವಾಹನ ಬೇಕಾಬಿಟ್ಟಿ ನಿಲುಗಡೆಗೆ ಜನರ ಆಕ್ಷೇಪ

Team Udayavani, Oct 12, 2019, 3:05 PM IST

uk-tdy-1

ಕುಮಟಾ: ಜಿಲ್ಲಾ ಮಧ್ಯವರ್ತಿ ಸ್ಥಳ ಪಟ್ಟಣದ ಹೊಸ ಬಸ್‌ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಸೂಕ್ತ ಜಾಗವಿಲ್ಲದೇ, ನಿಲ್ದಾಣದ ಸುತ್ತ ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಎದುರಿಸುವಂತಾಗಿದೆ.

ಹೊಸ ಬಸ್‌ ನಿಲ್ದಾಣದಲ್ಲಿ ಬಸ್‌ಗಿಂತ ಅಧಿಕ ದ್ವಿಚಕ್ರ ವಾಹನಗಳ ನಿಲುಗಡೆಯಾಗುತ್ತಿದೆ. ಬೈಕ್‌ ನಿಲ್ಲಿಸಿ ಮೂರ್ನಾಲ್ಕು ದಿನ ಬೇರೆ ಬೇರೆ ಪ್ರದೇಶಗಳಿಗೆ ತೆರಳುವವರೂ ಇದ್ದಾರೆ. ಅದಲ್ಲದೇ, ಈ ಹಿಂದೆ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್‌ಗಳು ಕಳುವಾದ ಘಟನೆಯೂ ನಡೆದಿದೆ. ಹೀಗಿರುವಾಗ ಇಲ್ಲಿರುವ ಬೈಕ್‌ ಗಳನ್ನು ಕಾಯುವವರು ಯಾರು ಎಂಬ ಪ್ರಶ್ನೆ ವಾಹನಸವಾರರದ್ದಾಗಿದ್ದು, ಇದರ ಬಗ್ಗೆ ಯಾವ ಅಧಿಕಾರಿಗಳೂ ಸೂಕ್ತ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸದ ಸಂಗತಿ.  ರ್

ಬೇಕಾಬಿಟ್ಟಿ ನಿಲುಗಡೆ: ದ್ವಿಚಕ್ರ ವಾಹನ ಸವಾರರು ಬಸ್‌ ನಿಲ್ದಾಣದಲ್ಲಿ ಜಾಗವಿದ್ದೆಡೆ ನಿಲ್ಲಿಸುವುದರಿಂದ ಅವರು ಮರಳಿ ಬರುವ ತನಕ ಮುಂಬದಿ ವಾಹನಗಳನ್ನು ತೆಗೆಯುವಂತಿಲ್ಲ. ಇದರಿಂದ ಪ್ರತಿದಿನವೂ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಇಲಾಖೆ ಬಸ್‌ ನಿಲ್ದಾಣದಲ್ಲಿ ಸೂಕ್ತ ಸ್ಥಳ ನಿಗದಿಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಹಲವರ ಅಭಿಪ್ರಾಯವಾಗಿದೆ.

ಬೇಕಾಬಿಟ್ಟಿಯಾಗಿ ಬೈಕ್‌ ಪಾರ್ಕಿಂಗ್  ನಿಂದ ಬಸ್‌ ತಿರುಗಿಸಲು ಮತ್ತು ಆಗಮನ, ನಿರ್ಗಮನಕ್ಕೆ ಅಡಚಣೆಯಾಗಿದೆ. ಕೆಲವೊಮ್ಮೆ ಪುಂಡಾಟದ ಯುವಕರು ನಿಲ್ದಾಣದ ಸೆಕ್ಯುರಿಟಿ ಗಾರ್ಡ್‌ ಮತ್ತು ಪೊಲೀಸರ ಮಾತಿಗೂ ಕ್ಯಾರೇ ಎನ್ನದೆ, ವಾಹನಗಳನ್ನು ಕಂಡಕಂಡಲ್ಲಿ ಪಾರ್ಕ್‌ ಮಾಡುತ್ತಿದ್ದು, ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ಗಮನಿಸಿ, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.

ಪಾರ್ಕಿಂಗ್‌ಗೆ ಟೆಂಡರ್‌ ನೀಡಿ: ಬಸ್‌ ನಿಲ್ದಾಣದಲ್ಲಿ ಬೈಕ್‌ ಪಾರ್ಕಿಂಗ್‌ಗೆ ಖಾಸಗಿ ಗುತ್ತಿಗೆದಾರರಿಗೆ ಟೆಂಡರ್‌ ನೀಡಿ, ಅತಿ ಕಡಿಮೆ ದರದಲ್ಲಿ ಪಾರ್ಕಿಂಗ್‌ ಶುಲ್ಕ ವಿಧಿಸಿದರೆ ಕಂಡಕಂಡಲ್ಲಿನ ಬೈಕ್‌ ನಿಲುಗಡೆ ಕಡೆಮೆಯಾಗಲಿದೆ. ಇದರಿಂದ ಸಾರ್ವಜನಿಕರಿಗೂ ಅನುಕೂಲವಾಗುತ್ತದೆ ಎಂಬುದು ಪ್ರಜ್ಞಾವಂತ ನಾಗರಿಕರ ಅಭಿಪ್ರಾಯವಾಗಿದೆ.

ಬೇಕಾಬಿಟ್ಟಿಯಾಗಿ ಪಾರ್ಕಿಂಗ್‌ ಮಾಡತ್ತಿರುವುದು ಇಲಾಖೆ ಗಮನಕ್ಕೆ ಬಂದಿದ್ದು, ಈ ಬಗ್ಗೆ ನಿಲ್ದಾಣ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಈಗಾಗಲೇ ಸಂಸ್ಥೆ ವತಿಯಿಂದ ಒಬ್ಬ ಸೆಕ್ಯೂರಿಟಿ ನೇಮಕ ಮಾಡಲಾಗಿದೆ. ಪಾರ್ಕಿಂಗ್‌ ಸ್ಥಳದಲ್ಲಿ ಕಟ್ಟಡ ಕಾಮಗಾರಿ ಚಾಲ್ತಿಯಲ್ಲಿರುವುದರಿಂದ ಸ್ವಲ್ಪದಿನ ಈ ಅಡಚಣೆ ಮುಂದುವರೆಯಬಹುದು. ಸಾರ್ವಜನಿಕರೂ ಸಹಕಾರ ನೀಡಬೇಕು.-ಸೌಮ್ಯ ನಾಯಕ, ಡಿಪೋ ಮ್ಯಾನೇಜರ್

-ಕೆ. ದಿನೇಶ ಗಾಂವ್ಕರ

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.