ಗೋವಾದಲ್ಲಿ ಮತ್ತೆ ಶುರುವಾಯ್ತು ಕನ್ನಡಿಗರಿಗೆ ಕಂಟಕ

•ಮುರಗಾಂವ ಪಾಲಿಕೆಯಿಂದ 207 ಮನೆಗಳಿಗೆ ತೆರವಿಗೆ ನೋಟಿಸ್‌•ಖಾರಿವಾಡಾದಲ್ಲಿ ಮನೆ ತೆರವಿನ ಭೀತಿ

Team Udayavani, Jul 3, 2019, 10:47 AM IST

uk-tdy-2..

ಪಣಜಿ: ತೆರವಿನ ಭೀತಿ ಎದುರಿಸುತ್ತಿರುವ ವಾಸ್ಕೊ ಖಾರಿವಾಡಾದ ಮನೆಗಳು.

ಪಣಜಿ(ವಾಸ್ಕೊ): ಕಳೆದ ಅನೇಕ ವರ್ಷಗಳಿಂದ ವಾಸ್ಕೊ ಖಾರಿವಾಡಾದ 207 ಮನೆಗಳನ್ನು ತೆರವುಗೊಳಿಸುವುದಾಗಿ ಮುರಗಾಂವ ನಗರಪಾಲಿಕೆ ಆದೇಶ ಹೊರಡಿಸಿದ್ದು ಈ ಮನೆಗಳನ್ನು ಸಕ್ರಮಗೊಳಿಸಲು ಸಾಧ್ಯವಿಲ್ಲ ಎಂದು ಮುಂಬೈ ಹೈಕೋರ್ಟ್‌ ಗೋವಾ ಖಂಡಪೀಠದ ಬಳಿ ಹೇಳಿಕೆ ನೀಡಿದ್ದು ಮತ್ತೆ ಕನ್ನಡಿಗರಿಗೆ ಕಂಟಕ ಎದುರಾಗಿದೆ.

ಖಾರಿವಾಡಾದ 207 ಮನೆಗಳನ್ನು ತೆರವುಗೊಳಿಸುವುದಾಗಿ ನೀಡಿದ್ದ ನೋಟಿಸ್‌ ವಿರುದ್ಧ ಸ್ಥಳೀಯ 17 ನಿವಾಸಿಗಳು ಮುಂಬೈ ಹೈಕೋರ್ಟ್‌ ಗೋವಾ ಪೀಠದ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ.

ಗೋವಾ ಪೋರ್ಚುಗೀಸರ ಆಳ್ವಿಕೆ ಸಂದರ್ಭದಿಂದಲೂ ಖಾರಿವಾಡಾದಲ್ಲಿ ಮನೆ ಕಟ್ಟಿಕೊಂಡು ಜನತೆ ವಾಸಿಸುತ್ತಿದ್ದು, ಇದೀಗ ಇದ್ದಕ್ಕಿದ್ದಂತೆಯೇ ಈ ಮನೆಗಳನ್ನು ತೆರವುಗೊಳಿಸಿದರೆ ನಾವೆಲ್ಲ ಎಲ್ಲಿಗೆ ಹೋಗಬೇಕು ಎಂಬುದು ಖಾರಿವಾಡಾ ನಿವಾಸಿಗರ ಅಳಲು. ಆದರೆ, ಖಾರಿವಾಡಾ ಕಿನಾರಿ ಭಾಗದಲ್ಲಿ ಸಾಗರಮಾಲಾ ಯೋಜನೆಯಡಿ 100 ಕೋಟಿಯ ಪ್ರೊಜೆಕ್ಟ್ ಸಿದ್ಧಗೊಂಡಿದ್ದು ಇದನ್ನು ಆರಂಭಿಸಲು ಇಲ್ಲಿರುವ ಮನೆಗಳನ್ನು ತೆರವುಗೊಳಿಸುವುದು ಅನಿವಾರ್ಯವಾಗಿದೆ. ಖಾರಿವಾಡಾದಲ್ಲಿ ಮುರಗಾಂವ ನಗರಪಾಲಿಕೆಯು ನೋಟಿಸ್‌ ನೀಡಿರುವ 207 ಮನೆಗಳನ್ನು ಸೇರಿಸಿ ಒಟ್ಟೂ 450ಕ್ಕೂ ಹೆಚ್ಚು ಮನೆಗಳಿವೆ. ಈ ಎಲ್ಲ ಕುಟುಂಬಗಳು ಇದೀಗ ಮನೆ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ವಾಸ್ಕೊ ಕಿನಾರೆ ಭಾಗದಲ್ಲಿ ಮತ್ತೆ ಜೆಸಿಬಿ ಸದ್ದು!: 2004 ರಿಂದ ವಾಸ್ಕೊ ಬೈನಾ ಬೀಚ್‌ನಲ್ಲಿ ಗೋವಾ ಸರ್ಕಾರವು ಹಂತ ಹಂತವಾಗಿ ಮನೆಗಳನ್ನು ತೆರವುಗೊಳಿಸುವ ಕಾರ್ಯ ಕೈಗೆತ್ತಿಕೊಂಡು 2016ರವರೆಗೆ ಸಾವಿರಾರು ಮನೆಗಳನ್ನು ತೆರವುಗೊಳಿಸಿದೆ. ಈ ಎಲ್ಲ ಮನೆಗಳ ತೆರವು ಕಾರ್ಯಾಚರಣೆ ಕೈಗೊಳ್ಳುವಾಗ ಅಲ್ಲಿನ ಕನ್ನಡಿಗರು ನ್ಯಾಯಾಲಯದ ಮೆಟ್ಟಿಲೇರಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಯಾವುದೆ ಶಾಶ್ವತ ಪುನರ್ವಸತಿ ಕಲ್ಪಿಸದೆಯೇ ಗೋವಾ ಸರ್ಕಾರ ಬೈನಾ ಆಪರೇಶನ್‌ ತೆರವು ಕಾರ್ಯಾಚರಣೆ ಪೂರ್ಣಗೊಳಿಸಿತ್ತು. ಈ ತೆರವು ಕಾರ್ಯಾಚರಣೆಯಿಂದ ಸಾವಿರಾರು ಕುಟುಂಬಗಳು ಸೂರು ಕಳೆದುಕೊಂಡಿದ್ದವು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.