ಕಾರ್ಮಿಕ ಇಲಾಖೆ ವಿರುದ್ಧ ಪ್ರತಿಭಟನೆ

Team Udayavani, Sep 25, 2019, 12:52 PM IST

uk-tdy-2

ದಾಂಡೇಲಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿ ಸದಸ್ಯರು ಕಾರ್ಮಿಕ ಮಂಡಳಿಯಿಂದ ಸಿಗುವ ಸೌಲಭ್ಯಗಳಿಗಾಗಿ ಕ್ರಮ ಬದ್ಧವಾಗಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಈವರೆಗೆ ಯಾವೊಂದು ಸೌಲಭ್ಯ ನೀಡದೇ ಸತಾಯಿಸುತ್ತಿರುವ ಕಾರ್ಮಿಕ ಮಂಡಳಿ ಕಾರ್ಮಿಕ ವಿರೋಧಿ ಕ್ರಮವನ್ನು ಖಂಡಿಸಿ ರಾಜ್ಯ ಅಸಂಘ‌ಟಿತ ಕಾರ್ಮಿಕರ ಸಂಘ ಹಾಗೂ ದಾಂಡೇಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟದಿಂದ ಮಂಗಳವಾರ ಹಳೆ ನಗರಸಭಾ ಕಟ್ಟಡದ ಮುಂಭಾಗದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ರಾಜ್ಯ ಅಸಂಘ‌ಟಿತ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೇಸಾಬ ಕೆಸನೂರ ಅವರು ಫಲಾನುಭವಿ ಕಾರ್ಮಿಕರಿಗೆ ಮಂಡಳಿ ಸೌಲಭ್ಯ ತಡವಾಗಲು ಮಂಡಳಿ ಇತ್ತೀಚಿನ ಕೆಲವು ನಿರ್ಣಯಗಳು ಕಾರಣವಾಗಿದೆ. ಸಿಬ್ಬಂದಿ ಕೊರತೆಯೂ ಕಾರಣವಾಗಿದೆ. ಕಾರ್ಮಿಕರಿಗೆ ಅರ್ಹವಾಗಿ ಸಿಗಬೇಕಾದ ಸವಲತ್ತುಗಳು ಸಿಗದಿರುವುದರಿಂದ ಅನ್ಯಾಯವಾಗುತ್ತಿದೆ. ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಸುಮಾರು ಎರಡು ವರ್ಷದ ನಂತರ ಪರಿಶೀಲನೆಯ ಹೆಸರಿನಲ್ಲಿ ಕಲ್ಯಾಣ ಮಂಡಳಿ ಸಿಬ್ಬಂದಿ ಪುರುಷ ಕಾರ್ಮಿಕರನ್ನು ಗೃಹಿಣಿ ಎಂದು ಪರಿಶೀಲನಾ ವರದಿಯಲ್ಲಿ ಬರೆದು ಹೋಗಿರುವ ಅವಾಂತರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಿಕೊಡುವಂತೆ ಕಳೆದ ಒಂದೂವರೆ ವರ್ಷದಿಂದ ಮೌಖೀಕವಾಗಿ, ಪತ್ರ ಮುಖೇನ ಮನವಿ ಮಾಡಿದರೂ ಮನವಿಗೆ ಕವಡೆ ಕಾಸಿನ ಕಿಮ್ಮತ್ತು ನೀಡಿರುವುದಿಲ್ಲ. ಇದು ಅನ್ಯಾಯಕ್ಕೊಳಗಾದ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ ಒಂದು ತಿಂಗಳೊಳಗೆ ಈ ಸಮಸ್ಯೆ ಬಗೆಹರಿಸಿ, ಕಾರ್ಮಿಕರಿಗೆ ಅರ್ಹವಾಗಿ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡದಿದ್ದಲ್ಲಿ ಸಾವಿರಾರು ಅಸಂಘಟಿತ ಕಾರ್ಮಿಕರು ಸೇರಿ ದಾಂಡೇಲಿಯಿಂದ ಕಾರವಾರಕ್ಕೆ ಬೃಹತ್‌ ಪಾದಯಾತ್ರೆ ಮೂಲಕ ಪ್ರತಿಭಟನಾ ಮೆರವಣಿಗೆ ಮೂಲಕ ಉಗ್ರ ಹೋರಾಟ ಮಾಡಬೇಕಾದಿತು ಎಂದು ರಾಜೇಸಾಬ ಕೆಸನೂರು ಎಚ್ಚರಿಸಿದ್ದಾರೆ.

ಕಟ್ಟಡ ಕಾರ್ಮಿಕರ ಫೆಡರೇಶನ್‌ನ ಮುಖಂಡ ಕೃಷ್ಣಾ ಭಟ್ಟ ಅವರು ಮಾತನಾಡಿ ಕಾರ್ಮಿಕ ಇಲಾಖೆ ದಬ್ಟಾಳಿಕೆ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸಿ, ಕಾರ್ಮಿಕರಿಗೆ ಅನ್ಯಾಯವಾಗುವುದಕ್ಕೆ ಉಗ್ರ ಹೋರಾಟವೊಂದೆ ದಾರಿ ಎಂದು ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ನಿರೀಕ್ಷಕ ಸುರೇಂದ್ರ ಕಾಂಬಳೆಯವರು ಪ್ರತಿಭಟನಾಕಾರರಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಸ್ವೀಕರಿಸಿ, ಕಾರ್ಮಿಕರ ಬೇಡಿಕೆ ನ್ಯಾಯಯುತವಾಗಿದ್ದು, ಇದನ್ನು ಬಗೆಹರಿಸಲು ಹಿರಿಯ ಅಧಿಕಾರಿಗಳಿಗೆ ವಿನಂತಿಸಲಾಗುವುದು ಎಂದರು.

ಕಟ್ಟಡ ಕಾಮಗಾರಿ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಚಿಂತಾಮಣಿ ಕೋಡಳ್ಳಿ, ಸಂಘದ ಪದಾಧಿಕಾರಿಗಳಾದ ಅಬ್ದುಲ್‌ ಮಜೀದ್‌ ಕಿತ್ತೂರ, ಮಂಜುನಾಥ ಭೋವಿ, ಭೀಮಶಿ ಭೋವಿವಡ್ಡರ, ಮಹೇಶ ಸಾವಂತ, ಬಾಬುಲಾಲ್‌ ಪಿರ್ಜಾದೆ, ಅಬ್ದುಲ್‌ ಸತ್ತಾರ, ರವಿಚಂದ್ರ ಮಣ್ಣವಡ್ಡರ, ಮಾರುತಿ ಚವ್ಹಾಣ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.