ಜಾಕ್‌ವೆಲ್‌ ಕಾಮಗಾರಿ ತಡೆಗೆ ಸಾರ್ವಜನಿಕರ ಒತ್ತಾಯ


Team Udayavani, Mar 14, 2021, 3:54 PM IST

ಜಾಕ್‌ವೆಲ್‌ ಕಾಮಗಾರಿ ತಡೆಗೆ ಸಾರ್ವಜನಿಕರ ಒತ್ತಾಯ

ದಾಂಡೇಲಿ: ದಾಂಡೇಲಿಯಿಂದ ಅಳ್ನಾವರಕ್ಕೆ ನೀರುಕೊಂಡೊಯ್ಯುವ ಯೋಜನೆಗೆ ಸಂಬಂಧಪಟ್ಟಂತೆ,ಹಳೆದಾಂಡೇಲಿಯಲ್ಲಿ ಜಾಕ್ವೆಲ್‌ ಕಾಮಗಾರಿ ಪುನರಾರಂಭಿಸಿದ ಕುರಿತಂತೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳುಅಧ್ಯಕ್ಷ ಅಕ್ರಂ ಖಾನ್‌ ನೇತೃತ್ವದಲ್ಲಿ ಜಾಕ್ವೆಲ್‌ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ತಹಶೀಲ್ದಾರ್‌ ಶೈಲೇಶ ಪರಮಾನಂದ, ಕರ್ನಾಟಕ ನೀರು ಸರಬರಾಜು ಹಾಗೂಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲ ಅಭಿಯಂತರ ರವಿಕುಮಾರ್‌.ಕೆ, ಡಿವೈಎಸ್ಪಿ ಗಣೇಶ ಕೆ.ಎಲ್‌, ದಾಂಡೇಲಿ ಸಿಪಿಐ ಪ್ರಭು ಗಂಗನಹಳ್ಳಿ,ಹಳಿಯಾಳ ಸಿಪಿಐ ಮೋತಿಲಾಲ್‌ ಪವಾರ್‌ ಮುಂದೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅಕ್ರಂ ಖಾನ್‌ ಹಾಗೂ ಪದಾಧಿಕಾರಿಗಳಾದವಾಸುದೇವ ಪ್ರಭು, ಮಿಲಿಂದ ಕೋಡ್ಕಣಿ, ಅಬ್ದುಲ್‌ ವಹಾಬ ಬಾಂಸಾರಿ, ರಮೇಶ ನಾಯ್ಕ, ರಾಮಲಿಂಗ ಜಾಧವ, ಬಲವಂತ ಬೊಮ್ಮನಳ್ಳಿ, ಆರ್‌.ವಿ. ಗಡೆಪ್ಪನವರ ಮೊದಲಾದವರು ಮಾತನಾಡಿ, ನಾವೇನಿದ್ದರೂ ಕಾನೂನಾತ್ಮಕ ವಾಗಿ ಹೋರಾಟ ಮಾಡುತ್ತಿದ್ದೇವೆ. ಸಾರ್ವಜನಿಕವಾಗಿ ಅಹವಾಲು ಸಭೆ ಕರೆಯದೇ ದಾಂಡೇಲಿಯಿಂದ ಅಳ್ನಾವರಕ್ಕೆ ನೀರು ಕೊಂಡೊಯ್ಯುವ ಯೋಜನೆ ಅನುಷ್ಠಾನ ಪಡಿಸಿರುವುದು ಸರಿಯಲ್ಲ. ಜೈನ್‌ ವರದಿ ಅನುಷ್ಠಾನವಾಗಬೇಕು. ದಾಂಡೇಲಿ ಹಾಗೂ ರಾಮನಗರ, ಜಗಲಪೇಟೆ ಸೇರಿದಂತೆ ಜೊಯಿಡಾ ತಾಲೂಕಿಗೆ 24×7 ಕುಡಿಯುವ ನೀರು ಒದಗಿಸಬೇಕು. ನಮ್ಮೂರಿನಲ್ಲೆ ಕುಡಿಯುವ ನೀರಿನ ಸಮಸ್ಯೆಗಳಿರುವಾಗ ಅದನ್ನು ಪರಿಹರಿಸದೇ ಹೊರಜಿಲ್ಲೆಗೆ ನೀರು ಹರಿಸುವುದು ಎಷ್ಟರ ಮಟ್ಟಿಗೆ ಸರಿ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ.ನಮ್ಮ ಜೊತೆ ಅಧಿಕಾರಿಗಳು ಸಭೆ ನಡೆಸಿ, ನಾವು ವಿರೋಧಿಸಿದರೂ, ಕಾಮಗಾರಿ ಆರಂಭಿಸಲಾಗಿದೆ.ಹಾಗಾದರೇ ಸಭೆ ನಡೆಸುವ ಉದ್ದೇಶವೇನಿತ್ತು?, ಸಭೆಯಲ್ಲಿ ಸಲ್ಲಿಸಿದ ನಮ್ಮ ಅಭಿಪ್ರಾಯಗಳಿಗೆ ಬೆಲೆ ಇಲ್ಲವೆ ಎಂದು ಪ್ರಶ್ನಿಸಿದ ಅವರು, ಈ ಯೋಜನೆ ಕುರಿತಂತೆ ಮತ್ತು ಸ್ಥಳೀಯ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರದ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಬೇಕು. ಅಲ್ಲಿಯವರೆಗೆ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು. ತಹಶೀಲ್ದಾರ್‌ ಶೈಲೇಶ ಪರಮಾನಂದ, ನಾವು ಸರಕಾರದಹಾಗೂ ಮೇಲಾಧಿಕಾರಿಗಳ ಆದೇಶದಂತೆ ಕಾರ್ಯ ನಿರ್ವಹಿಸಬೇಕಾಗಿದೆ. ಮೇಲಾಧಿಕಾರಿಗಳಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯ.ಆದಾಗ್ಯೂ ಇಂದಿನ ಬೆಳವಣಿಗೆಗಳನ್ನುಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಮಧ್ಯಪ್ರವೇಶಿಸಿದ ಡಿವೈಎಸ್ಪಿ ಗಣೇಶ ಕೆ.ಎಲ್‌, ದಾಂಡೇಲಿ ಸಿಪಿಐ ಪ್ರಭು ಗಂಗನಹಳ್ಳಿ, ಹಳಿಯಾಳ ಸಿಪಿಐ ಮೋತಿಲಾಲ್‌ ಪವಾರ್‌ಹೋರಾಟಗಾರರನ್ನು ಸಮಾಧಾನಪಡಿಸಿ, ಸರಕಾರದ ಯೋಜನೆಗೆ ಅಡ್ಡಿಪಡಿಸಬಾರದು. ಬೇಡಿಕೆಗಳಿದ್ದಲ್ಲಿ ಆಯಾಯ ಇಲಾಖೆಗೆ ಅರ್ಜಿ ಸಲ್ಲಿಸುವಂತೆ ಹೇಳಿದರು.

ದಾಂಡೇಲಿ ನಗರ ಹಾಗೂ ರಾಮನಗರ,ಜಗಲಪೇಟೆ ಸೇರಿದಂತೆ ಜೊಯಿಡಾ ತಾಲೂಕಿಗೆ24×7 ಕುಡಿಯುವ ನೀರಿನ ಯೋಜನೆತ್ವರಿತಗತಿಯಲ್ಲಿ ಅನುಷ್ಠಾನ ಪಡಿಸಿದಲ್ಲಿಸಧ್ಯದಲ್ಲಿರುವ ಅಸಮಾಧಾನದ ಹೊಗೆಯನ್ನುನಿಯಂತ್ರಿಸಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿಜನಪ್ರತಿನಿಧಿಗಳು ಚಿಂತನೆ ನಡೆಸುವುದು ಒಳಿತೆಂಬ ಅಭಿಪ್ರಾಯ ಕೇಳಿಬರುತ್ತಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.