ರಮ್ಜಾನ್ ಹಬ್ಬ: ಭಟ್ಕಳದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಶಾಂತಿ ಸಭೆ

Team Udayavani, Apr 30, 2022, 3:51 PM IST

ರಮ್ಜಾನ್ ಹಬ್ಬ: ಭಟ್ಕಳದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಶಾಂತಿ ಸಭೆ

ಭಟ್ಕಳ: ಈದ್-ವುಲ್-ಫಿತ್ರ್ (ರಮ್ಜಾನ್ ಹಬ್ಬ) ದ ಕುರಿತು ಪೂರ್ವಭಾವಿಯಾಗಿ ಶಾಂತಿ ಸಮಿತಿಯ ಸಭೆಯು ತಹಸೀಲ್ದಾರ್ ಸುಮಂತ್ ಬಿ.ಇ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ನಾಗರೀಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಜೀಂ ಪ್ರಧಾನ ಕಾರ್ಯದರ್ಶಿ ಅಬ್ದುರ್ ರಖೀರ್ ಎಂ.ಜೆ. ನಾವೆಲ್ಲರೂ ಪರಸ್ಪರ ಸಹೋದರರಂತೆ ಇದ್ದೇವೆ. ಭಟ್ಕಳದಲ್ಲಿ ಎಲ್ಲಾ ಹಬ್ಬಗಳನ್ನೂ ಕೂಡಾ ನಾವು ಪರಸ್ಪರ ನಂಬಿಕೆ ವಿಶ್ವಾಸದಿಂದ ಆಚರಿಸುತ್ತಿದ್ದು ಈ ಬಾರಿಯೂ ಕೂಡಾ ನಾವು ಯಶಸ್ವೀಯಾಗಿ ಆಚರಿಸುತ್ತೇವೆ ಎಂದರು. ಇನ್ನೋರ್ವ ಪ್ರಮುಖ ಇನಾಯತ್‍ವುಲ್ಲಾ ಶಾಬಂದ್ರಿ ಮಾತನಾಡಿ ನಾವು ಪರಸ್ಪರ ನಂಬಿಕೆ ವಿಶ್ವಾಸದಿಂದ ಪ್ರತಿ ವರ್ಷವೂ ಎಲ್ಲಾ ಹಬ್ಬಗಳನ್ನು ಆಚರಿಸುತ್ತಾ ಬಂದಿದ್ದೇವೆ. ಈ ಬಾರಿಯೂ ಉತ್ತಮವಾಗಿ ಆಚರಿಸುತ್ತೇವೆ ಎಂದರು. ಪುರಸಭೆಯ ವತಿಯಿಂದ ಈದ್ಗಾ ಮೈದಾನ ಹಾಗೂ ಹೋಗುವ ರಸ್ತೆಗಳನ್ನು ಸ್ವಚ್ಚ ಗೊಳಿಸಲು ಸೂಚಿಸಬೇಕು. ಅಂದೇ ರಸ್ತೆ ಸ್ವಚ್ಚತೆಗೆ ತೊಡಗಿಕೊಂಡರೆ ಸಾಧ್ಯವಿಲ್ಲ, ಸ್ವಲ್ಪ ಮುಂಚಿತವಾಗಿ ಮಾಡಬೇಕು ಎಂದರು.

ಭಟ್ಕಳ ಅರ್ಬನ್ ಬ್ಯಾಂಕ್ ನಿರ್ದೇಶಕ ಶ್ರೀಧರ ನಾಯ್ಕ ಆಸರಕೇರಿ ಮಾತನಾಡಿ ನಮ್ಮ ಹಬ್ಬಗಳು ಬೇರೆ ಬೇರೆಯಾಗಿರಬಹುದು. ಆದರೆ ಆಚರಣೆಯ ಹಿಂದಿರುವ ಮರ್ಮ ಎಲ್ಲ ಧರ್ಮಗಳದ್ದೂ ಒಂದೇ ಆಗಿದೆ. ನಾವೆಲ್ಲರೂ ಕೂಡಾ ದೇವರು ಒಬ್ಬನೇ ಎನನುವ ನಂಬಿಕೆಯನ್ನಿಟ್ಟವರು.  ಯಾವುದೇ ಹಬ್ಬಕ್ಕೆ ಇಲ್ಲಿ ತೊಂದರೆಯಾದ ಉದಾಹಣೆಯಿಲ್ಲ. ಈ ಬಾರಿಯೂ ಕೂಡಾ ಎಲ್ಲರೂ ಸೇರಿ ಉತ್ತಮ ರೀತಿಯಲ್ಲಿ ಹಬ್ಬದ ಆಚರಣೆ ನಡೆಯಲಿ ಎಂದು ಹಾರೈಸಿದರು.

ಸಭೆಯಲ್ಲಿ ಡಿ.ವೈ.ಎಸ್.ಪಿ. ಕೆ.ಯು. ಬೆಳ್ಳಿಯಪ್ಪ ಮಾತನಾಡಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಎಲ್ಲರೂ ಸಹಕರಿಸಬೇಕು. ಯಾವುದೇ ಸಂಶಯದ ನಡವಳಿಕೆ, ಎಲ್ಲಿ ಯಾವ ರೀತಿಯ ತೊಂದರೆ ಆದರೂ ತಕ್ಷಣ ಇಲಾಖೆಗೆ ತಿಳಿಸಬೇಕು ಎಂದರು.

ಸಭೆಯಲ್ಲಿ ತಂಜೀಮ್ ಅಧ್ಯಕ್ಷ ಎಸ್. ಎಂ. ಪರ್ವೇಜ್, ಪುರಸಭಾ ಅಧ್ಯಕ್ಷ ಪರ್ವೇಜ್ ಕಾಶಿಮಜಿ, ಉಪಾಧ್ಯಕ್ಷ ಖೈಸರ್ ಮೊಹತೆಶಂ, ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ಎಂ.ಆರ್.ನಾಯ್ಕ, ಶ್ರೀಧರ ಮೊಗೇರ, ಶಾಂತಾರಾಮ ಭಟ್ಕಳ್, ಸರ್ಕಲ್ ಇನ್ಸಪೆಕ್ಟರ್ ದಿವಾಕರ ಪಿ.ಎಂ., ಸಬ್ ಇನ್ಸಪೆಕ್ಟರ್ ಹೆಚ್.ಬಿ. ಕುಡಗುಂಟಿ, ಸುಮಾ ಬಿ., ಅಗ್ನಿಶಾಮಕ ಠಾಣೆಯ ರಮೇಶ, ಪುರಸಭಾ ಪ್ರಭಾರ ಮುಖ್ಯಾಧಿಕಾರಿ ದೇವರಾಜ, ಹಿರಿಯ ಆರೋಗ್ಯಾಧಿಕಾರಿ ಸುಜಯಾ ಸೋಮನ್, ಹೆಸ್ಕಾಂ ಸಹಾಯಕ ಇಂಜಿನಿಯರ್ ಶಿವಾನಂದ  ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.