ರಸ್ತೆ ಕಾಮಗಾರಿ ಶೀಘ್ರ ಶುರು: ಭರವಸೆ

Team Udayavani, Sep 29, 2019, 12:59 PM IST

ಕುಮಟಾ: ತಾಲೂಕಿನ ಹೆಗಡೆ ಗ್ರಾ.ಪಂ. ವ್ಯಾಪ್ತಿಯ ಕಲ್ಕೋಡನಲ್ಲಿ ಕೈಗೊಂಡ ಸಿಮೆಂಟ್‌ ರಸ್ತೆ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಪರಿಶೀಲಿಸಿ, ಕಾಮಗಾರಿಗೆ ಎದುರಾದ ಸಮಸ್ಯೆಯನ್ನು ನಿವಾರಿಸಿ ಶೀಘ್ರ ರಸ್ತೆ ಕಾಮಗಾರಿ ಆರಂಭಿಸಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಹೆಗಡೆಯ ಕಲ್ಕೋಡ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ರಸ್ತೆ ಅಭಿವೃದ್ಧಿ ಪಡಿಸಲು ಶಾಸಕರ ನಿಧಿಯಿಂದ 3 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಕಾಂಕ್ರೀಟ್‌ ರಸ್ತೆ ನಿರ್ಮಿಸಲು ಸಂಬಂಧಪಟ್ಟ ಇಲಾಖೆ ಮುಂದಾದಾಗ ಸ್ಥಳೀಯ ರೈತರೊಬ್ಬರು ವಿರೋಧ ವ್ಯಕ್ತಪಡಿಸಿದ್ದರು.

ಇದರಿಂದ ಕಾಮಗಾರಿ ಮುಂದುವರೆಸಲು ಕಾನೂನಿನ ತೊಡಕು ಎದುರಾಗಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈ ಬಗ್ಗೆ ಕಲ್ಕೋಡ ಗ್ರಾಮಸ್ಥರು ಶಾಸಕ ದಿನಕರ ಶೆಟ್ಟಿ ಗಮನಕ್ಕೆ ತಂದು, ಎದುರಾದ ಕಾನೂನು ತೊಡಕುಗಳನ್ನು ನಿವಾರಿಸಿ ಶೀಘ್ರ ಕಾಮಗಾರಿ ಕೈಗೊಳ್ಳುವಂತೆ ವಿನಂತಿಸಿದ್ದರು. ಗ್ರಾಮಸ್ಥರ ಮನವಿಗೆ ಶೀಘ್ರ ಸ್ಪಂದಿಸಿದ ಶಾಸಕ ದಿನಕರ ಶೆಟ್ಟಿ ಕಲ್ಕೋಡ ಗ್ರಾಮಕ್ಕೆ ಭೇಟಿ ನೀಡಿ ಹದಗೆಟ್ಟ ರಸ್ತೆಯನ್ನು ಪರಿಶೀಲಿಸಿದರು. ಶಾಸಕರ ನಿಧಿಯಿಂದ 3 ಲಕ್ಷ ರೂ. ಮಂಜೂರಿ ಮಾಡಿದ್ದು, ಸದ್ಯದಲ್ಲೇ ಹದಗೆಟ್ಟ ಕಲ್ಕೋಡ ರಸ್ತೆ ಕಾಮಗಾರಿ ಪ್ರಾರಂಭಿಸುವ ಬಗ್ಗೆ ಭರವಸೆ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ರಸ್ತೆ ಕಾಮಗಾರಿ ನಡೆಯುವ ಜಾಗದಲ್ಲಿ ರೈತರೊಬ್ಬರ ಜಮೀನಿದೆ ಎಂಬ ಕಾರಣಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗಾಗಿ ಕಾಮಗಾರಿ ಸ್ಥಗೀತಗೊಳಿಸಲಾಗಿತ್ತು.

ಈ ಸಮಸ್ಯೆಗೆ 15 ದಿನಗಳೊಳಗೆ ಪರಿಹಾರ ಕಂಡುಕೊಂಡು ಕಾಮಗಾರಿ ಪುನರಾರಂಭಿಸುವಂತೆ ಸಂಬಂಧಪಟ್ಟ ಗುತ್ತಿಗೆದಾರ ಮತ್ತು ಆರ್‌ಡಿಪಿಆರ್‌ ಇಲಾಖೆಗೆ ಸೂಚಿಸಿದ್ದೇನೆ. ಮತ್ತೆ ಆಕ್ಷೇಪ ವ್ಯಕ್ತವಾದರೆ ಕಾನೂನು ರೀತಿಯಲ್ಲಿ ರಸ್ತೆ ಕಾಮಗಾರಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು. ಎಪಿಎಂಸಿ ಅಧ್ಯಕ್ಷ ಧೀರೂ ಶಾನಭಾಗ, ಹೆಗಡೆ ಗ್ರಾಪಂ ಉಪಾಧ್ಯಕ್ಷೆ ನಾಗವೇಣಿ ಹೆಗಡೆ, ಎಇಇ ಆರ್‌.ಜಿ.ಗುನಗಿ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಕಾರವಾರ: ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ ಎನ್ನುವ ಖ್ಯಾತಿ ಪಡೆದಿರುವ ಕಾರವಾರ ತಾಲೂಕಿನ ಮಾಜಾಳಿಯ ತೀಳ್‌ ಮಾತಿ ಬೀಚ್‌ ಪ್ರವಾಸೋದ್ಯಮ ಪಟ್ಟಿಗೆ ಸೇರುವ ಭಾಗ್ಯದಿಂದ...

  • ಕಾರವಾರ: ಬೇಸಿಗೆ ಆರಂಭಕ್ಕೆ ಇನ್ನೇನು 75 ದಿನ ಬಾಕಿಯಿದೆ. ಆದರೆ, ಕಾರವಾರ ನಗರದ ನಿವಾಸಿಗಳಿಗೆ ಈಗಲೇ ಕುಡಿಯುವ ನೀರಿನ ಬರ ಎದುರಾಗುವ ಆತಂಕ ಕಾಡುತ್ತಿದೆ. ಜೊತೆಗೆ...

  • ಶಿರಸಿ: ಶಿವಮೊಗ್ಗ ಜಿಲ್ಲೆ ಶರಾವತಿ ಅಭಯಾರಣ್ಯಕ್ಕೆ ತಾಲೂಕಿನ ಹೆಬ್ರೆ, ಹುಸೂರು, ಬುಗುಡಿ ಗ್ರಾಮಗಳ ಅರಣ್ಯವಾಸಿಗಳ ಪ್ರದೇಶವನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ...

  • ಹಳಿಯಾಳ: ಅಪ್ರತೀಮ ವೀರ ಛತ್ರಪತಿ ಶಿವಾಜಿ ಮಹಾರಾಜರು ದೇಶದ ಭವಿಷ್ಯಕ್ಕಾಗಿ ಹೋರಾಡಿದ ಅಗ್ರಗಣ್ಯ ನಾಯಕರಾಗಿದ್ದು ಸರ್ವರನ್ನು ಒಂದೂಗೂಡಿಸಿಕೊಂಡು ಹೋಗುತ್ತಿದ್ದ...

  • ಕಾರವಾರ: ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಜನಸಂಖ್ಯೆ ಆಧರಿಸಿ ಶೇ.15 ರಿಂದ ಶೇ. 22.5ಗೆ ಹೆಚ್ಚಿಸಬೇಕು ಹಾಗೂ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಶೇ.3ರಿಂದ ಶೇ.7.5 ಕ್ಕೆ...

ಹೊಸ ಸೇರ್ಪಡೆ