ಉಳವಿ ರಥಬೀದಿ ನಿರ್ಮಾಣಕ್ಕೆ 4 ಕೋಟಿ ಬಿಡುಗಡೆ: ಆರ್.ವಿ.ದೇಶಪಾಂಡೆ
Team Udayavani, Feb 11, 2021, 2:51 PM IST
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಚ್ಚಹಸಿರು ಪ್ರಕೃತಿ ಸೌಂದರ್ಯದ ಮಡಿಲಲ್ಲಿರುವ ಪ್ರಸಿದ್ಧ ಪುಣ್ಯಕ್ಷೇತ್ರ ಉಳವಿ ಚನ್ನಬಸವೇಶ್ವರ ದೇವಸ್ಥಾನದ ರಥಬೀದಿ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ 4 ಕೋಟಿ ಅನುದಾನ ಬಿಡುಗಡೆ ಮಾಡಿರುವುದು ಸ್ವಾಗತಾರ್ಹವಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವುದು ವಿಶೇಷ. ಜಾತ್ರಾ ಸಮಯದಲ್ಲಂತೂ ಭಕ್ತಾದಿಗಳ ಸಾಲುಸಾಲು ಚಕ್ಕಡಿಗಳು ಬರುತ್ತವೆ. ಕ್ಷೇತ್ರಕ್ಕೆ ತೆರಳುವ ಭಕ್ತಾದಿಗಳಿಗೆ ತೊಂದರೆಯಾಗದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅಲ್ಲದೇ ಈಗ ರಥಬೀದಿ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರವು 4ಕೋಟಿ ಅನುದಾನ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಕಾರಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಶಾಸಕರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ