
ನೂತನ ಸಚಿವ ಮಂಕಾಳ್ ವೈದ್ಯರನ್ನು ಸನ್ಮಾನಿಸಿದ ರಾಜಕೀಯ ಗುರು ಆರ್.ವಿ.ದೇಶಪಾಂಡೆ
Team Udayavani, May 27, 2023, 7:22 PM IST

ಹಳಿಯಾಳ : ಸಿದ್ದರಾಮಯ್ಯನವರ ನೇತೃತ್ವದ ಸರಕಾರದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತನ್ನ ರಾಜಕೀಯ ಗುರು ಹಾಗೂ ಹಳಿಯಾಳ, ದಾಂಡೇಲಿ, ಜೋಯಿಡಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ನಿವಾಸಕ್ಕೆ ಇಂದು ಶನಿವಾರ ಸಂಜೆ ಆಗಮಿಸಿದ ಮಂಕಾಳ್ ವೈದ್ಯ ಅವರು ಮೊದಲು ಆರ್.ವಿ.ದೇಶಪಾಂಡೆಯವರ ಆಶೀರ್ವಾದವನ್ನು ಪಡೆದುಕೊಂಡರು.
ನೂತನ ಸಚಿವರಾದ ಮಂಕಾಳ್ ವೈದ್ಯರನ್ನು ಆರ್.ವಿ.ದೇಶಪಾಂಡೆಯವರು ಗೌರವಪೂರ್ವಕವಾಗಿ ಸನ್ಮಾನಿಸಿ, ಸದಾ ನಾನು ಬೆಂಬಲವಾಗಿ ಇದ್ದೇನೆ ಎಂದು ಭರವಸೆ ನೀಡಿ, ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮವನ್ನು ನೀಡುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಂಕಾಳ್ ವೈದ್ಯರ ಪತ್ನಿ, ಪುತ್ರಿ, ಶಾಸಕರಾದ ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸಾಯಿ ಗಾಂವಕರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ